Dussehra ;ಮೈಸೂರಿಗೆ ಹೊರಟ ಬಂಡೀಪುರದ ರೋಹಿತ-ಹಿರಣ್ಯ ಆನೆಗಳು

ಪಾರ್ಥಸಾರಥಿಗೆ ಮದವೇರಿದ್ದ ಕಾರಣ...

Team Udayavani, Aug 31, 2023, 5:15 PM IST

1-sda-dad

ಗುಂಡ್ಲುಪೇಟೆ(ಚಾಮರಾಜನಗರ): ತಾಲೂಕಿನ ಬಂಡೀಪುರ ಅಭಯಾರಣ್ಯದಿಂದ ವಿಶ್ವ ವಿಖ್ಯಾತ ದಸರಾ ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳಲು ಹೊರಟ ಮೂರು ಆನೆಗಳ ಪೈಕಿ ರೋಹಿತಾ(17) ಮತ್ತು ಹಿರಣ್ಯ(47) ಎಂಬ ಎರಡು ಆನೆಗಳಿಗೆ ಶಾಸಕ ಎಚ್.ಎಂ.ಗಣೇಶಪ್ರಸಾದ್ ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸುವ ಮೂಲಕ ಪಯಣಕ್ಕೆ ಗುರುವಾರ ಚಾಲನೆ ನೀಡಿದರು.

ಬಂಡೀಪುರ ರಾಷ್ಟ್ರೀಯ ಉದ್ಯಾನದ ಮದ್ದೂರು ಅರಣ್ಯ ವಲಯ ಕಚೇರಿ ಆವರಣದಲ್ಲಿ ನಡೆದ ಸಮಾರಂಭದಲ್ಲಿ ರಾಂಪುರ ಸಾಕಾನೆ ಶಿಬಿರದ ರೋಹಿತ ಮತ್ತು ಹಿರಣ್ಯ ಆನೆಗಳಿಗೆ ಬಣ್ಣದ ಚಿತ್ತಾರ, ವಿವಿಧ ಬಗೆಯ ಹೂವುಗಳಿಂದ ಅಲಂಕರಿಸಲಾಗಿತ್ತು. ಅರ್ಚಕರು ಆನೆಗಳಿಗೆ ವಿಶೇಷ ಪೂಜೆ ಸಲ್ಲಿಸಿದರು. ಶಾಸಕ ಎಚ್.ಎಂ.ಗಣೇಶ್‍ಪ್ರಸಾದ್ ಕಬ್ಬು, ಬೆಲ್ಲ ತಿನಿಸಿ, ಪೂಜೆ ಸಲ್ಲಿಸುವ ಮೂಲಕ ಪುಷ್ಪಾರ್ಚನೆ ನೆರವೇರಿಸಿ ಗಜ ಪಯಣಕ್ಕೆ ಶುಭ ಕೋರಿ ಆನೆಗಳಿಂದ ಆರ್ಶೀವಾದ ಪಡೆದರು.

ಈ ವೇಳೆ ಮಾತನಾಡಿದ ಶಾಸಕ ಎಚ್.ಎಂ.ಗಣೇಶಪ್ರಸಾದ್, ಬಂಡೀಪುರದಿಂದ ನಾಡ ಹಬ್ಬ ದಸರಾದಲ್ಲಿ ಪಾಲ್ಗೊಳ್ಳಲು ಮೂರು ಆನೆಗಳು ಹೋಗುತ್ತಿರುವುದು ಹೆಮ್ಮೆಯ ವಿಚಾರ. ಇಂದು ಸಾಂಪ್ರದಾಯಿಕವಾಗಿ ರೋಹಿತ ಮತ್ತು ಹಿರಣ್ಯ ಎಂಬ ಎರಡು ಆನೆಗಳಿಗೆ ಪೂಜೆ ಸಲ್ಲಿಸಿರುವುದು ಖುಷಿ ಕೊಟ್ಟಿದೆ. ಈ ಮೂಲಕ ದಸರಾ ಹಬ್ಬ ಯಶಸ್ವಿಯಾಗಲಿ ಎಂದು ಹಾರೈಸಿದರು.

ಬಂಡೀಪುರ ನೂತನ ಅರಣ್ಯ ಸಂರಕ್ಷಣಾಧಿಕಾರಿ ಎಸ್.ಪ್ರಭಾಕರನ್ ಮಾತನಾಡಿ, ಬಂಡೀಪುರ ರಾಷ್ಟ್ರೀಯ ಉದ್ಯಾನದಿಂದ ನಾಡಹಬ್ಬ ದಸರಾದಲ್ಲಿ ಪಾಲ್ಗೊಳ್ಳಲಿರುವ ಸಾಕಾನೆಗಳಿಗೆ ಎಲ್ಲಾ ರೀತಿಯ ತರಬೇತಿ ನೀಡಲಾಗಿದೆ. ರಾಂಪುರ ಆನೆ ಶಿಬಿರದ ಸೌಮ್ಯ ಸ್ವಭಾವದ ಆನೆಗಳು ಯಶಸ್ವಿಯಾಗಿ ದಸರಾದಲ್ಲಿ ಭಾವವಹಿಸಿ ವಾಪಸ್ಸಾಗಲಿ ಎಂದು ಹಾರೈಸಿದರು.

ತಹಸೀಲ್ದಾರ್ ಟಿ.ರಮೇಶ್‍ಬಾಬು, ಚಾಮುಲ್ ನಿರ್ದೇಶಕ ಎಚ್.ಎಸ್.ನಂಜುಂಡಪ್ರಸಾದ್, ಜಿಪಂ ಮಾಜಿ ಉಪಾಧ್ಯಕ್ಷ ಕೆ.ಎಸ್.ಮಹೇಶ್, ಮಾಜಿ ಸದಸ್ಯರಾದ ಕೆರೆಹಳ್ಳಿನವೀನ್, ಬಿ.ಎಂ.ಮುನಿರಾಜು, ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷರಾದ ಎಚ್.ಎನ್.ಬಸವರಾಜು, ಎಸ್.ಎಸ್.ಮಧುಶಂಕರ್, ಮಾಜಿ ಸದಸ್ಯ ಬೆಟ್ಟಹಳ್ಳಿ ಕೆಂಪರಾಜು, ವನ್ಯಜೀವಿ ತಜ್ಞೆ ಶೃತಿ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಬಿ.ಆರ್.ರಾಜೇಶ್, ಗ್ರಾಮ ಅರಣ್ಯ ಸಮಿತಿ ಅಧ್ಯಕ್ಷ ಬಿ.ಎಸ್.ಸಿದ್ದಪ್ಪಾಜಿ, ಎಸಿಎಫ್‍ಗಳಾದ ನವೀನ್, ರವೀಂದ್ರ, ಕೆ.ಪರಮೇಶ್, ವಲಯ ಅರಣ್ಯಾಧಿಕಾರಿ ಬಿ.ಎಂ.ಮಲ್ಲೇಶ್, ಸತೀಶ್, ನವೀನ್‍ಕುಮಾರ್, ನರೇಶ್, ಪುಟ್ಟರಾಜು ಸೇರಿದಂತೆ ಅರಣ್ಯ ಇಲಾಖೆ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.

ಆಯ್ಕೆಯಾಗಿದ್ದ ಮತ್ತೊಂದು ಆನೆ ಪಾರ್ಥಸಾರಥಿಯನ್ನು ಮದವೇರಿದ್ದ ಕಾರಣ ನಂತರದಲ್ಲಿ ಕಳುಹಿಸಿಕೊಡಲಾಗುವುದು ಎಂದು ಹೆಡಿಯಾಲ ಎಸಿಎಫ್ ಕೆ.ಪರಮೇಶ್ ತಿಳಿಸಿದರು.

ಟಾಪ್ ನ್ಯೂಸ್

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

crime (2)

Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ

1-pk

Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು

vij

Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.