ಗ್ರಾಮೀಣರಿಗೆ ದಸರಾ ಕ್ರೀಡಾಕೂಟ ಸಹಕಾರಿ
ಚಾಮರಾಜನಗರ ಜಿಲ್ಲೆಯು ಹಿಂದೆ ಮೈಸೂರು ಜಿಲ್ಲೆಗೆ ಒಳಪಟ್ಟಿತ್ತು.
Team Udayavani, Aug 19, 2022, 6:01 PM IST
ಚಾಮರಾಜನಗರ: ಗ್ರಾಮೀಣ ಭಾಗದ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸಲು ದಸರಾ ಕ್ರೀಡಾಕೂಟ ಸಹಕಾರಿ ಎಂದು ಶಾಸಕ ಸಿ.ಪುಟ್ಟರಂಗಶೆಟ್ಟಿ ಹೇಳಿದರು.
ನಗರದ ಡಾ.ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣ ದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದಲ್ಲಿ ಗುರುವಾರ ಆಯೋಜಿಸಿದ್ದ ಚಾಮರಾಜನಗರ ತಾಲೂಕು ಮಟ್ಟದ ದಸರಾ ಕ್ರೀಡಾಕೂಟವನ್ನು ಗುಂಡು ಎಸೆದು ಚಾಲನೆ ನೀಡಿ ಮಾತನಾಡಿದರು.
ಚಾಮರಾಜನಗರ ಜಿಲ್ಲೆಯು ಹಿಂದೆ ಮೈಸೂರು ಜಿಲ್ಲೆಗೆ ಒಳಪಟ್ಟಿತ್ತು. ಈಗ ಪ್ರತ್ಯೇಕ ಜಿಲ್ಲೆಯಾಗಿ 25 ವರ್ಷ ಕಳೆದಿದೆ. 2014 ರಲ್ಲಿ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಮೈಸೂರು ದಸರಾ ಸಂಬಂಧ ಜಿಲ್ಲೆಯಲ್ಲಿಯೂ ಅದ್ಧೂರಿಯಾಗಿ ದಸರಾ ಆಚರಣೆ ಮಾಡಲು 1 ಕೋಟಿ ಅನುದಾನ ಬಿಡುಗಡೆ ಮಾಡಿದ್ದರು ಎಂದರು.ಈ ಬಾರಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಕೂಡ ಜಿಲ್ಲೆಯಲ್ಲಿ ಅದ್ಧೂರಿ ದಸರಾ ಆಚರಣೆ ಮಾಡಲು 1 ಕೋಟಿ ಅನುದಾನ ಬಿಡುಗಡೆ ಮಾಡಿದ್ದು ಈಗಾಗಲೇ ಸಕಲ ಸಿದ್ಧತೆಗಳು ನಡೆಯುತ್ತಿವೆ.
ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸುವ ಕ್ರೀಡಾಪಟುಗಳು ಯಾವುದೇ ರೀತಿಯ ಅಹಿತಕರ ಘಟನೆಗೆ ಆಸ್ಪದ ನೀಡದಂತೆ ಕ್ರೀಡಾಕೂಟಗಳಲ್ಲಿ ಭಾಗವಹಿಸಬೇಕು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ನಗರಸಭಾ ಉಪಾಧ್ಯಕ್ಷೆ ಪಿ.ಸುಧಾ, ಕ್ರೀಡಾ ಇಲಾಖೆಯ ಅನಿತಾ ಸೇರಿದಂತೆ ದೈಹಿಕ ಶಿಕ್ಷಕರು, ಕ್ರೀಡಾಪಟುಗಳು ಇದ್ದರು.
ಕುಡಿಯುವ ನೀರಿಲ್ಲದೇ ಬಳಲಿದ ಕ್ರೀಡಾಪಟುಗಳು
ತಾಲೂಕು ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಚಾಮರಾಜನಗರ ತಾಲೂಕಿನ ವಿವಿಧ ಗ್ರಾಮಗಳಿಂದ ನೂರಾರು ಕ್ರೀಡಾಪಟುಗಳು ಭಾಗವಹಿಸಿದ್ದರು. ಆದರೆ, ಕ್ರೀಡಾಪಟುಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಿರಲಿಲ್ಲ. ಇದರಿಂದ ಕ್ರೀಡಾಪಟುಗಳು ಬಿಸಿಲಿನ ತಾಪಕ್ಕೆ ಬಳಲಿ ಸುಸ್ತಾದರು. ಅಲ್ಲದೇ ಕುಡಿಯುವ ನೀರಿಗಾಗಿ ಪರದಾಡುವಂತಹ ಪರಿಸ್ಥಿತಿಯೂ ಕಂಡುಬಂದಿತು. ಬಾಯಾರಿಕೆಯನ್ನು ನೀಗಿಸಿಕೊಳ್ಳಲು ಐಸ್‌ಕ್ರೀಂ, ಹಣ ನೀಡಿ ನೀರಿನ ಬಾಟಲಿ ಖರೀದಿಸುತ್ತಿದ್ದ
ದೃಶ್ಯ ಕಂಡುಬಂದಿತು. ನೀರಿನ ವ್ಯವಸ್ಥೆ ಮಾಡದ ಇಲಾಖೆಯ ಅಧಿಕಾರಿಗಳ ವಿರುದ್ಧ ಕ್ರೀಡಾಪಟುಗಳು ಹಿಡಿಶಾಪ ಹಾಕಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ
Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು
Minister K.J. George: ಒಂದೇ ದಿನದಲ್ಲಿ 2500 ಲೈನ್‌ಮ್ಯಾನ್ ನೇಮಕ ಸಂದರ್ಶನ
Bandipur: ಸಫಾರಿಯಲ್ಲಿ ಪ್ರವಾಸಿಗರ ಮುಂದೆಯೇ ಜಿಂಕೆ ಬೇಟೆಯಾಡಿದ ಚಿರತೆ
Birla Opus Paints: ಚಾಮರಾಜನಗರದಲ್ಲಿ ಬಿರ್ಲಾ ಒಪಸ್ ಪೇಂಟ್ಸ್ 4ನೇ ಕಾರ್ಖಾನೆ ಆರಂಭ
MUST WATCH
ಹೊಸ ಸೇರ್ಪಡೆ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.