ಚುನಾವಣೆ: ಗಡಿ ರಾಜ್ಯಗಳ ಅಧಿಕಾರಿಗಳೊಂದಿಗೆ ಡೀಸಿ ಸಭೆ

Team Udayavani, Feb 20, 2023, 1:30 PM IST

tdy-14

ಚಾಮರಾಜನಗರ: ಮುಂಬರುವ ವಿಧಾನಸಭಾ ಸಾರ್ವತ್ರಿಕ ಚುನಾವಣಾ ವೇಳೆ ಕಟ್ಟುನಿಟ್ಟಾಗಿ ಮಾದರಿ ನೀತಿ ಸಂಹಿತೆ ಅನುಷ್ಠಾನ ಮಾಡುವ ಸಂಬಂಧ ಜಿಲ್ಲೆಯ ಗಡಿ ಭಾಗಗಳಲ್ಲಿ ಹೊಂದಿಕೊಂಡಿರುವ ನೆರೆರಾಜ್ಯಗಳ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿ ಡಿ.ಎಸ್‌. ರಮೇಶ್‌ ವರ್ಚ್ಯುವಲ್‌ ಸಭೆ ನಡೆಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ, ನೆರೆ ರಾಜ್ಯದ ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ವರ್ಚ್ಯುವಲ್‌ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿ ಕಾರಿ ಡಿ.ಎಸ್‌. ರಮೇಶ್‌, ಬರಲಿರುವ ವಿಧಾನಸಭಾ ಚುನಾವಣೆಯನ್ನು ನ್ಯಾಯಸಮ್ಮತ, ಪಾರದರ್ಶಕ ಹಾಗೂ ಶಾತಿಯುತ ಮತದಾನಕ್ಕೆ ಅವಕಾಶ ಕಲ್ಪಿಸಲು ಕಟ್ಟುನಿಟ್ಟಾಗಿ ಮಾದರಿ ನೀತಿ ಸಂಹಿತೆ ಅನುಷ್ಠಾನಕ್ಕೆ ಕೈ ಜೋಡಿಸುವಂತೆ ತಿಳಿಸಿದರು.

ಚಾಮರಾಜನಗರ ಜಿಲ್ಲೆಯು ತಮಿಳುನಾಡು ಹಾಗೂ ಕೇರಳ ರಾಜ್ಯಗಳೊಂದಿಗೆ ಗಡಿ ಪ್ರದೇಶ ಗಳನ್ನು ಹೊಂದಿದೆ. ಗಡಿ ಭಾಗದಲ್ಲಿ 11 ಚೆಕ್‌ಪೋಸ್ಟ್‌ ಗಳನ್ನು ಗುರುತಿಸಲಾಗಿದ್ದು, ಇದಕ್ಕಾಗಿ ನೋಡಲ್‌ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಗಡಿ ಭಾಗಗಳ ಚೆಕ್‌ಪೋಸ್ಟ್‌ಗಳಲ್ಲಿ ರಾಜ್ಯಕ್ಕೆ ಬರುವ ಹಾಗೂ ಇಲ್ಲಿಂದ ಹೊರ ಹೋಗುವ ವಾಹನಗಳ ಮೇಲೆ ನಿಗಾ ಇಡಬೇಕಾಗುತ್ತದೆ. ಇದಕ್ಕಾಗಿ ಗಡಿ ಭಾಗದ ರಾಜ್ಯಗಳ ಗಡಿ ಜಿಲ್ಲೆಗಳಿಂದಲೂ ನೋಡಲ್‌ ಅಧಿಕಾರಿಗಳನ್ನು ನೇಮಕ ಮಾಡುವಂತೆ ಜಿಲ್ಲಾಧಿಕಾರಿ ತಿಳಿಸಿದರು.

ಚೆಕ್‌ಪೋಸ್ಟ್‌ಗಳಲ್ಲಿ 24/7 ಕಾರ್ಯ ನಿರ್ವಹಿಸ ಬೇಕಾಗುತ್ತದೆ. ಜಿಲ್ಲೆಯಿಂದ ನಿಯೋಜಿಸಲಾದ ನೋಡಲ್‌ ಅಧಿಕಾರಿಗಳೊಂದಿಗೆ ಹೊರ ಜಿಲ್ಲೆಗಳ ಅಧಿಕಾರಿಗಳು ಸಮನ್ವಯದಿಂದ ಕರ್ತವ್ಯ ಕೈಗೊಳ್ಳಬೇಕಾಗುತ್ತದೆ. ನೇಮಕ ಮಾಡಲಾಗುವ ಹೊರ ಜಿಲ್ಲೆಗಳ ಅಧಿಕಾರಿಗಳ ಮಾಹಿತಿಯನ್ನು ಜಿಲ್ಲಾಡಳಿತ ಪೊಲೀಸ್‌, ಅಬಕಾರಿ ಇಲಾಖೆಗಳ ಕಚೇರಿಗೆ ಸಲ್ಲಿಸಬೇಕು ಎಂದರು.

ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳು, ಅಕ್ರಮ ಚಟುವಟಿಕೆಗಳು ಕಂಡು ಬಂದಲ್ಲಿ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸಬೇಕಾಗುತ್ತದೆ. ಮತದಾನದ ಹಿಂದಿನ 72 ಗಂಟೆಗಳ ಅವಧಿಯಲ್ಲಿ ಚೆಕ್‌ಪೋಸ್ಟ್‌ನಲ್ಲಿ ಕರ್ತವ್ಯ ನಿರತ ಅಧಿಕಾರಿಗಳು ಅತ್ಯಂತ ಜಾಗರೂಕತೆಯಿಂದ ಕಾರ್ಯ ನಿರ್ವಹಿಸಬೇಕಿದೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ನಿಷ್ಪಕ್ಷಪಾತವಾಗಿ ಚುನಾವಣೆ ನಡೆಸುವ ಸಂಬಂಧ ಎಲ್ಲಾ ಸಹಕಾರ ನೀಡುವಂತೆ ಜಿಲ್ಲಾಧಿಕಾರಿ ಡಿ.ಎಸ್‌. ರಮೇಶ್‌ ಮನವಿ ಮಾಡಿದರು.

ಉಪವಿಭಾಗಾಧಿಕಾರಿ ಗೀತಾ ಹುಡೇದ, ಡಿವೈಎಸ್‌ಪಿ ಪ್ರಿಯದರ್ಶಿನಿ ಸಾಣೆಕೊಪ್ಪ, ಅಬಕಾರಿ ಉಪ ಆಯುಕ್ತ ನಾಗಶಯನ, ತಹಶೀಲ್ದಾರರಾದ ರವಿಶಂಕರ್‌, ಮಂಜುಳಾ, ತಮಿಳುನಾಡು ರಾಜ್ಯದ ನೀಲಗಿರಿ, ಸತ್ಯಮಂಗಲ, ಕೃಷ್ಣಗಿರಿ, ಈರೋಡ್‌, ಧರ್ಮಪುರಿ, ಕೇರಳ ರಾಜ್ಯದ ವೈನಾಡು ಜಿಲ್ಲೆಗಳ ಪೊಲೀಸ್‌, ಅಬಕಾರಿ, ಅರಣ್ಯ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

Pushpa 2: 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Uttar Pradesh: ಸಂಭಲ್‌ನ ಪ್ರಾಚೀನ ಬಾವಿಯ ಉತ್ಖನನ, ನವೀಕರಣಕ್ಕೆ ಚಾಲನೆ

Uttar Pradesh: ಸಂಭಲ್‌ನ ಪ್ರಾಚೀನ ಬಾವಿಯ ಉತ್ಖನನ, ನವೀಕರಣಕ್ಕೆ ಚಾಲನೆ

Uttarakhand ಹೈಕೋರ್ಟ್‌ ಸಿ.ಜೆ. ಆಗಿ ನರೇಂದ್ರ ಪ್ರಮಾಣ ವಚನ ಸ್ವೀಕಾರ

Uttarakhand ಹೈಕೋರ್ಟ್‌ ಸಿ.ಜೆ. ಆಗಿ ನರೇಂದ್ರ ಪ್ರಮಾಣ ವಚನ ಸ್ವೀಕಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-

Gundlupete: ಬೋನಿಗೆ ಬಿದ್ದ ಗಂಡು ಚಿರತೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

6-gundlupete

Gundlupete: ಬೈಕ್ ಗೆ ಗುದ್ದಿದ ಪಿಕ್ ಅಪ್; ಸವಾರರ ಕಾಲು ಮುರಿತ

Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ

Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ

Gundlupet Bus Stand: ಮೂಲ ಸೌಲಭ್ಯ ವಂಚಿತ ಬೇಗೂರು ಬಸ್‌ ನಿಲ್ದಾಣ

Gundlupet Bus Stand: ಮೂಲ ಸೌಲಭ್ಯ ವಂಚಿತ ಬೇಗೂರು ಬಸ್‌ ನಿಲ್ದಾಣ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

Pushpa 2: 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.