ಶಿಕಕ್ಷರ ಕಾರ್ಯಕಾರಿ ಸಮಿತಿಗೆ ಡಿ.6ರಂದು ಚುನಾವಣೆ
Team Udayavani, Nov 28, 2020, 12:03 PM IST
ಹನೂರು: ತಾಲೂಕು ವ್ಯಾಪ್ತಿಯ ಪ್ರಾಥಮಿಕ ಶಾಲೆಗಳಲ್ಲಿ 483 ಶಿಕ್ಷಕರು ಕಾರ್ಯನಿರ್ವಹಿಸುತ್ತಿದ್ದು, ಪ್ರತಿ 50 ಶಿಕ್ಷಕರಿಗೆ ಓರ್ವ ಸದಸ್ಯನನ್ನುಆಯ್ಕೆಮಾಡಲು ಅವಕಾಶವಿದೆ. 10 ಜನಕಾರ್ಯಕಾರಿ ಸಮಿತಿ ಸದಸ್ಯರ ಆಯ್ಕೆಗೆ ಚುನಾವಣೆ ಪ್ರಕ್ರಿಯೆ ನಡೆಯುತ್ತಿದೆ ಎಂದು ಚುನಾವಣಾಧಿಕಾರಿ ಹಾಗೂ ನಿವೃತ್ತ ಮುಖ್ಯ ಶಿಕ್ಷಕ ಶಿವಮಾದಯ್ಯ ತಿಳಿಸಿದರು.
ಪಟ್ಟಣದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಚುನಾವಣಾ ಪ್ರಕ್ರಿಯೆಗೆ ಚಾಲನೆ ನೀಡಿ ಮಾತನಾಡಿದ ಅವರು, ತಾಲೂಕುವ್ಯಾಪ್ತಿಯಿಂದ 10 ಶಿಕ್ಷಕರು ಸದಸ್ಯರಾಗಿ ಆಯ್ಕೆಯಾಗಬಹುದಾಗಿದ್ದು,ಈ ಪೈಕಿ 3 ಸ್ಥಾನಗಳು ಮಹಿಳೆಯರಿಗೆ ಮೀಸಲಾಗಿವೆ. ಇನ್ನು7 ಸ್ಥಾನಗಳು ಸಾಮಾನ್ಯ ಸ್ಥಾನಗಳಾಗಿದ್ದು, ಪ್ರತಿ ಶಿಕ್ಷಕರೂ ತಲಾ 10 ಮತಗಳನ್ನು ಚಲಾಯಿಸಲು ಅವಕಾಶವಿದೆ. ಕಾರ್ಯಕಾರಿ ಸಮಿತಿ ಸದಸ್ಯರ ಆಯ್ಕೆಗೆ ಶುಕ್ರವಾರದಿಂದ ನಾಮಪತ್ರ ಸಲ್ಲಿಸಬಹುದು. ಶನಿವಾರ ಅಂತಿಮ ದಿನವಾಗಿದೆ. ನಾಮಪತ್ರ ಸಲ್ಲಿಕೆಗೆ ಮೊದಲ ದಿನವಾದ ಶುಕ್ರವಾರ 24 ಶಿಕ್ಷಕರು ನಿಗದಿತ ಶುಲ್ಕದೊಂದಿಗೆ ನಾಮಪತ್ರ ಪಡೆದಿದ್ದು, 17 ಶಿಕ್ಷಕರು ನಾಮಪತ್ರ ಸಲ್ಲಿಸಿದ್ದಾರೆ. ಭಾನುವಾರ ಉಮೇದುವಾರಿಕೆ ಹಿಂಪಡೆಯಲು ಅವಕಾಶವಿದ್ದು, 10 ಮಂದಿಗಿಂತ ಹೆಚ್ಚು ಶಿಕ್ಷಕರು ಸ್ಪರ್ಧಾ ಕಣದಲ್ಲಿ ಉಳಿದಿದ್ದರೆ ಡಿ.6ರಂದುಚುನಾವಣೆ ನಡೆಯಲಿದ್ದು, ಅಂದೇ ಫಲಿತಾಂಶ ಹೊರಬೀಳಲಿದೆ ಎಂದರು.
ನಾಮಪತ್ರ ಸಲ್ಲಿಸಿದ ಶಿಕ್ಷಕರು: ಕಾರ್ಯಕಾರಿ ಸಮಿತಿ ಸದಸ್ಯರ ಸ್ಥಾನಕ್ಕೆ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಗುರುಸ್ವಾಮಿ, ಬಡ್ತಿ ಮುಖ್ಯಶಿಕ್ಷಕರ ಸಂಘದ ಅಧ್ಯಕ್ಷ ನಂಜುಂಡಸ್ವಾಮಿ, ಹಾಲಿ ಉಪಾಧ್ಯಕ್ಷ ಶಿವಮೂರ್ತಿ, ಕಾರ್ಯದರ್ಶಿ ಗಿರೀಶ್, ಬಿಆರ್ಪಿಗಳಾದ ಸತೀಶ್, ವೆಂಕಟರಾಜು ಹಾಗೂ ಶಿಕ್ಷಕರಾದ ನಾಗಸುಂದರ್, ಚಿನ್ನರಾಜು,ರವಿಚಂದ್ರ, ಕೃಷ್ಣನಾಯ್ಕ, ವೆಂಕಟನಾರಾಯಣ್, ಸಾಮ್ಯುಯೆಲ್ ಕಮಲ್ನಾಥ್, ಮೋಕ್ಷರಾಣಿ, ಮಾದೇಶ್.ಸಿ, ಮಹೇಶ್.ಕೆ, ಮಹದೇಶ್.ಆರ್, ಮುನಿಯನಾಯ್ಕ ನಾಮಪತ್ರ ಸಲ್ಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?
Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.