ಶಿಕ್ಷಣದ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ತೊಡಗಿ

Team Udayavani, Sep 14, 2019, 3:00 AM IST

shikshanada

ಚಾಮರಾಜನಗರ: ಶಿಕ್ಷಣದಲ್ಲಿ ಸಾಧಿಸುವುದರ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಾಗ ಮಾತ್ರ ಒಬ್ಬ ವಿದ್ಯಾರ್ಥಿ ವೈಯಕ್ತಿಕ ನೆಲೆಯಲ್ಲಿ ವಿಕಾಸಗೊಳ್ಳಲು ಸಾಧ್ಯ ಎಂದು ಶಾಸಕ ಸಿ.ಪುಟ್ಟರಂಗಶೆಟ್ಟಿ ಅಭಿಪ್ರಾಯಪಟ್ಟರು.

ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಜೆ.ಎಚ್‌. ಪಟೇಲ್‌ ಸಭಾಂಗಣದಲ್ಲಿ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಆಯೋಜಿಸಿದ್ದ ಸಾಂಸ್ಕೃತಿಕ, ಕ್ರೀಡೆ, ರಾಷ್ಟ್ರೀಯ ಸೇವಾ ಯೋಜನೆ, ಸ್ಕೌಟ್ಸ್‌ ಮತ್ತು ಗೈಡ್ಸ್‌ ಹಾಗೂ ರೆಡ್‌ಕ್ರಾಸ್‌ ಚಟುವಟಿಕೆಗಳ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.

ಎಲ್ಲಾ ಕೋರ್ಸ್‌ ಲಭ್ಯ: ಹಿಂದೆ ಉನ್ನತ ಶಿಕ್ಷಣವನ್ನರಸಿ ನಮ್ಮ ಜಿಲ್ಲೆಯ ಮಕ್ಕಳು ಮೈಸೂರು, ಬೆಂಗಳೂರಿಗೆ ಹೋಗಬೇಕಾಗಿತ್ತು. ಆದರೆ ಇಂದು ಚಾಮರಾಜನಗರದಲ್ಲೇ ಎಲ್ಲಾ ಕೋರ್ಸ್‌ಗಳು ಲಭ್ಯವಿದೆ. ನಮ್ಮ ಜಿಲ್ಲೆ ಸಹ ಶೈಕ್ಷಣಿಕವಾಗಿ ವರ್ಧಮಾನಕ್ಕೆ ಬರುತ್ತಿದೆ ಎಂದರು.

ಹೆಣ್ಣುಮಕ್ಕಳು ಸಬಲರಾಗಲಿ: ಹೆಣ್ಣು ಮಕ್ಕಳಿಗೆ ಶಿಕ್ಷಣದ ಮಹತ್ವವನ್ನು ಅರಿತು ಜಿಲ್ಲೆಯಲ್ಲಿ ಹೆಣ್ಣುಮಕ್ಕಳಿಗಾಗಿ ಸರ್ಕಾರಿ ಕಾಲೇಜನ್ನು ಆರಭಿಸಲಾಯಿತು. ಅಲ್ಪಸಂಖ್ಯೆಯಿಂದ ಪ್ರಾರಂಭವಾದ ಈ ಕಾಲೇಜು ಇಂದು ದೊಡ್ಡ ಮಟ್ಟದಲ್ಲಿ ಬೆಳೆದು ನಿಂತಿದೆ. ಅಲ್ಲದೇ ವಸತಿ ನಿಲಯಗಳನ್ನು ಸಹ ನಿರ್ಮಿಸಲಾಗಿದೆ. ಇದರಿಂದ ಶೈಕ್ಷಣಿಕವಾಗಿ ಹೆಣ್ಣುಮಕ್ಕಳು ಸಬಲರಾಗಲಿದ್ದಾರೆ ಎಂದು ತಿಳಿಸಿದರು.

ಪಠ್ಯೇತರ ಚಟುವಟಿಕೆ ಸಹಕಾರಿ: ಗುಂಡ್ಲುಪೇಟೆ ಜೆಎಸ್‌ಎಸ್‌ ಕಲಾ ಮತ್ತು ವಾಣಿಜ್ಯ ಪದವಿ ಕಾಲೇಜಿನ ಪ್ರಾಂಶುಪಾಲ ಡಾ. ಎನ್‌. ಮಹದೇವಸ್ವಾಮಿ ಮಾತನಾಡಿ, ಪಠ್ಯೇತರ ಚಟುವಟಿಕೆಗಳು ವಿದ್ಯಾರ್ಥಿಯ ಸರ್ವಾಂಗೀಣ ಬೆಳವಣಿಗೆಗೆ ಸಹಕಾರಿಯಾಗುತ್ತದೆ. ವಿದ್ಯಾರ್ಥಿಯಲ್ಲಿರುವ ಸೃಜನಾತ್ಮಕ ಚಿಂತನೆಯನ್ನು ಹೊರಗೆಳೆಯುವುದಲ್ಲದೇ, ಅವರ ವ್ಯಕ್ತಿತ್ವ ವಿಕಸನದಲ್ಲೂ ಸಹಾಯ ಮಾಡುತ್ತದೆ ಎಂದರು.

ಪೋಷಕರ ಬಗ್ಗೆ ಕಾಳಜಿ ಇರಲಿ: ಸರ್ಕಾರಿ ರೇಷ್ಮೆ ಬಿತ್ತನೆ ಕೋಠಿಯ ರೇಷ್ಮೆ ಕೃಷಿ ಉಪನಿರ್ದೇಶಕ‌ ಲಕ್ಷ್ಮೀ ನರಸಿಂಹಯ್ಯ ಮಾತನಾಡಿ, ಪ್ರತಿಯೊಬ್ಬ ಮಕ್ಕಳಿಗೂ ತಾನು ಶಿಕ್ಷಣದ ನಂತರ ಏನು ಮಾಡಬೇಕು, ಯಾವ ಉದ್ಯೋಗದಲ್ಲಿ ತೊಡಗಿಸಿಕೊಳ್ಳಬೇಕು ಎಂಬ ಅರಿವಿರಬೇಕು. ಆಗ ಓದಿದ ವಿದ್ಯೆ ಸಾರ್ಥಕಗೊಳ್ಳುತ್ತದೆ. ಮಕ್ಕಳ ಒಳಿತಿಗೆ ಸದಾ ಶ್ರಮಿಸುವ ಪೋಷಕರ ಬಗ್ಗೆ ಕಾಳಜಿ ಇರಬೇಕಾದ್ದು ಬಹು ಮುಖ್ಯ. ಈ ಎಲ್ಲದರ ಪಾಲನೆಯಿಂದ ಒಬ್ಬ ಉತ್ತಮ ನಾಗರಿಕ ರೂಪುಗೊಳ್ಳುತ್ತಾನೆ ಎಂದು ಹೇಳಿದರು.

ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ಎಂ. ಆರ್‌. ಸುಮತಿ ಕಡಿಮೆ ಸಂಖ್ಯೆಯ ವಿದ್ಯಾರ್ಥಿಗಳಿದ್ದ ನಮ್ಮ ಕಾಲೇಜು ಇಂದು ಬೃಹದಾಕಾರವಾಗಿ ಬೆಳೆದಿದೆ. ಶೈಕ್ಷಣಿಕವಾಗಿ ಅಷ್ಟೇ ಅಲ್ಲದೇ ಪಠ್ಯೇತರ ಚಟುವಟಿಕೆಗಳಲ್ಲೂ ನಮ್ಮ ವಿದ್ಯಾರ್ಥಿನಿಯರು ಮುಂಚೂಣಿಯಲ್ಲಿದ್ದಾರೆ. ಇದೆಲ್ಲಾ ನಮ್ಮ ಕಾಲೇಜು ತೋರಿದ ಒಗ್ಗಟ್ಟಿನಿಂದ ಸಾಧ್ಯವಾಗಿದೆ ಎಂದರು. ಕಾಲೇಜಿಗೆ ಒದಗಿಸಬೇಕಾಗಿರುವ ಸೌಕರ್ಯಗಳ ಕುರಿತು ಶಾಸಕ ಸಿ. ಪುಟ್ಟರಂಗಶೆಟ್ಟಿ ಅವರಿಗೆ ಮನವಿ ಸಲ್ಲಿಸಿದರು.

ಜಿಲ್ಲಾ ಪಂಚಾಯಿತಿ ಸದಸ್ಯರಾದ ಸದಾಶಿವಮೂರ್ತಿ, ಸಾಂಸ್ಕೃತಿಕ ಸಂಚಾಲಕ ಟಿ. ಆರ್‌. ಜಯಣ್ಣ, ಸ್ಕೌಟ್ಸ್‌ ಮತ್ತು ಗೈಡ್ಸ್‌ ಸಂಚಾಲಕಿ ಡಾ. ಎಂ. ಸಿ. ಪ್ರಭಾವತಿ, ಕ್ರೀಡಾ ಮತ್ತು ರೆಡ್‌ಕ್ರಾಸ್‌ ಸಂಚಾಲಕ ಹೆಗಡೆ ಮಂಜುನಾಥ್‌ ಗಣಪತಿ, ರಾಷ್ಟ್ರೀಯ ಸೇವಾ ಯೋಜನೆ ಸಂಚಾಲಕಿ ಎಂ. ಪಾರ್ವತಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

BGT 2024: Aussie squad announced for remaining two matches: Aussies make three changes

BGT 2024: ಉಳಿದೆರಡು ಪಂದ್ಯಗಳಿಗೆ ಆಸೀಸ್‌ ತಂಡ ಪ್ರಕಟ: ಮೂರು ಬದಲಾವಣೆ ಮಾಡಿದ ಆಸ್ಟ್ರೇಲಿಯಾ

Parcel: ಮಹಿಳೆಯ ಮನೆಗೆ ಬಂದ ಪಾರ್ಸೆಲ್ ನಲ್ಲಿತ್ತು ಮೃತದೇಹ… 1.3 ಕೋಟಿ ರೂ.ಗೆ ಬೇಡಿಕೆ

Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !

Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ

Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

25-kota

CT Ravi ಬಂಧನ ಪ್ರಕರಣ; ಗೃಹ ಸಚಿವರು ಸ್ಪಷ್ಟನೆ ನೀಡಲಿ: ಕೋಟ

Mandya:ಕನ್ನಡ ಸಾಹಿತ್ಯ ಸಮ್ಮೇಳನ-ಕನ್ನಡ ಸಂಕಷ್ಟದಲ್ಲಿದೆ ಎಂಬುದಕ್ಕೆ ಕಾರಣ ತಿಳಿಯಬೇಕು: ಸಿಎಂ

Mandya:ಕನ್ನಡ ಸಾಹಿತ್ಯ ಸಮ್ಮೇಳನ-ಕನ್ನಡ ಸಂಕಷ್ಟದಲ್ಲಿದೆ ಎಂಬುದಕ್ಕೆ ಕಾರಣ ತಿಳಿಯಬೇಕು: ಸಿಎಂ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-gundlupete

Gundlupete: ಬೈಕ್ ಗೆ ಗುದ್ದಿದ ಪಿಕ್ ಅಪ್; ಸವಾರರ ಕಾಲು ಮುರಿತ

Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ

Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ

Gundlupet Bus Stand: ಮೂಲ ಸೌಲಭ್ಯ ವಂಚಿತ ಬೇಗೂರು ಬಸ್‌ ನಿಲ್ದಾಣ

Gundlupet Bus Stand: ಮೂಲ ಸೌಲಭ್ಯ ವಂಚಿತ ಬೇಗೂರು ಬಸ್‌ ನಿಲ್ದಾಣ

1-eewqe

Kollegala; ಮಾಜಿ ಶಾಸಕ ಎಸ್.ಜಯಣ್ಣ ಅಂತಿಮ ದರ್ಶನ ಪಡೆದ ಸಿಎಂ

Gundlupete: ಬೈಕ್- ಕೆಎಸ್‌ಆರ್‌ಟಿಸಿ ಬಸ್ ನಡುವೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Gundlupete: ಬೈಕ್- ಕೆಎಸ್‌ಆರ್‌ಟಿಸಿ ಬಸ್ ನಡುವೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

International Conference ಅತ Buntakal Technical College: Student Symposium

Buntakal Technical College: ಅಂತಾರಾಷ್ಟ್ರೀಯ ಸಮ್ಮೇಳನ ;ವಿದ್ಯಾರ್ಥಿ ವಿಚಾರ ಸಂಕಿರಣ

Mandya:ಟಿಪ್ಪು ಆಳ್ವಿಕೆ- ಪ್ರವಾಸಿಗರ ಕಣ್ಮನ ಸೆಳೆಯುವ ಜಾಮೀಯಾ ಮಸೀದಿ, ಬೇಸಿಗೆ ಅರಮನೆ

Mandya:ಟಿಪ್ಪು ಆಳ್ವಿಕೆ- ಪ್ರವಾಸಿಗರ ಕಣ್ಮನ ಸೆಳೆಯುವ ಜಾಮೀಯಾ ಮಸೀದಿ, ಬೇಸಿಗೆ ಅರಮನೆ

BGT 2024: Aussie squad announced for remaining two matches: Aussies make three changes

BGT 2024: ಉಳಿದೆರಡು ಪಂದ್ಯಗಳಿಗೆ ಆಸೀಸ್‌ ತಂಡ ಪ್ರಕಟ: ಮೂರು ಬದಲಾವಣೆ ಮಾಡಿದ ಆಸ್ಟ್ರೇಲಿಯಾ

Parcel: ಮಹಿಳೆಯ ಮನೆಗೆ ಬಂದ ಪಾರ್ಸೆಲ್ ನಲ್ಲಿತ್ತು ಮೃತದೇಹ… 1.3 ಕೋಟಿ ರೂ.ಗೆ ಬೇಡಿಕೆ

Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !

KD

Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.