6 ಅಡಿ ಅಂತರವಿರುವ 1 ಡೆಸ್ಕ್ನನಲ್ಲಿ ಓರ್ವ ವಿದ್ಯಾರ್ಥಿಗೆ ಮಾತ್ರ ಅವಕಾಶ
Team Udayavani, Jul 19, 2021, 8:08 PM IST
ಚಾಮರಾಜನಗರ: ಜಿಲ್ಲೆಯ 85 ಕೇಂದ್ರಗಳಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆನಡೆಯಲಿದ್ದು ಇದಕ್ಕಾಗಿ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಎಂ.ಆರ್. ರವಿ ತಿಳಿದರು.ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಜಿಲ್ಲೆಯಲ್ಲಿಈ ಬಾರಿ 6,440 ಬಾಲಕರು , 5,749 ಬಾಲಕಿಯರು ಸೇರಿದಂತೆ 12,189ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. 115 ದಿವ್ಯಾಂಗ ವಿದ್ಯಾರ್ಥಿಗಳು ಇದ್ದಾರೆ..
ಚಾಮರಾಜನಗರ ತಾಲೂಕಿನಲ್ಲಿ27, ಗುಂಡ್ಲುಪೇಟೆ21, ಹನೂರು16,ಕೊಳ್ಳೇಗಾಲ14, ಯಳಂದೂರು ತಾಲೂಕಿನ 7 ಪರೀûಾ ಕೇಂದ್ರಗಳು ಇವೆ. ಪ್ರತಿ ತಾಲೂಕಿನಲ್ಲಿ 2ಪರೀಕ್ಷಾ ಕೇಂದ್ರಗಳಂತೆ ಒಟ್ಟು10ಕಾಯ್ದಿರಿಸಿದ ಪರೀûಾಕೇಂದ್ರಗಳು ಸಹ ಇವೆ.ಪ್ರತಿ ಕೊಠಡಿಯಲ್ಲಿ 12 ವಿದ್ಯಾರ್ಥಿಗಳಿಗೆ ಆಸನದ ವ್ಯವಸ್ಥೆ ಮಾಡಲಾಗಿದೆ. ಪ್ರತಿಡೆಸ್ಕ್ಗೆ ಒಬ್ಬ ವಿದ್ಯಾರ್ಥಿಯಂತೆ ಅಭ್ಯರ್ಥಿಗಳ ನಡುವೆ 6 ಅಡಿ ಸಾಮಾಜಿಕ ಅಂತರಕಾಪಾಡಲಾಗಿದೆ. ಪ್ರತಿ ಪರೀಕ್ಷಾ ಕೇಂದ್ರದಲ್ಲಿ 2 ವಿಶೇಷ ಕೊಠಡಿಗಳು ಇರಲಿವೆ.
ಪ್ರತಿಕೇಂದ್ರದಲ್ಲಿ ಕೆಮ್ಮು, ಜ್ವರ, ನೆಗಡಿ ಲಕ್ಷಣವಿರುವ ಮಕ್ಕಳು ಪರೀಕ್ಷೆ ಬರೆಯಲು ವಿಶೇಷಕೊಠಡಿಗಳಲ್ಲಿ ವ್ಯವಸ್ಥೆ ಮಾಡಲಾಗಿದೆ. ಪಾಸಿಟಿವ್ ವಿದ್ಯಾರ್ಥಿ ಇಚ್ಛೆಪಟ್ಟಲ್ಲಿ ಪೋಷಕರಒಪ್ಪಿಗೆ ಹಾಗೂ ವೈದ್ಯಕೀಯ ಸಲಹೆ ಮೇರೆಗೆ ಕೋವಿಡ್ ಕೇರ್ ಸೆಂಟರ್‌ನಲ್ಲಿ ಪರೀಕ್ಷೆಬರೆಯಲು ಅವಕಾಶಕಲ್ಪಿಸಲಾಗುವುದು ಎಂದರು.
ಸಕಾಲದಲ್ಲಿ ಪರೀಕ್ಷೆ ಹಾಜರಾಗಲು ವಿದ್ಯಾರ್ಥಿಗಳಿಗೆ ಸಾರಿಗೆ ಸಂಸ್ಥೆಯಿಂದ ಬಸ್‌ಸೌಕರ್ಯ ಕಲ್ಪಿಸಲಾಗಿದೆ. ಯಾವುದೇ ವಿದ್ಯಾರ್ಥಿ ವಾಹನ ಸೌಲಭ್ಯದ ಕೊರತೆಯ ಕಾರಣದಿಂದ ಪರೀಕ್ಷೆಗೆ ಗೈರು ಹಾಜರಾಗದಂತೆ ನೋಡಿಕೊಳ್ಳಲು ಸೂಚಿಸಲಾಗಿದೆ ಎಂದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gundlupete: ವಿದ್ಯುತ್ ಕಂಬಕ್ಕೆ ಗುದ್ದಿದ್ದ ಕಾರು: ಸ್ಥಳದಲ್ಲೇ ಇಬ್ಬರು ಸಾವು
Bandipur: ಸಫಾರಿ ವೇಳೆ ನಾಲ್ಕು ಮರಿ ಜೊತೆ ತಾಯಿ ಹುಲಿ ದರ್ಶನ
Cabinet Meeting: ಮೊದಲ ಬಾರಿ ಮಲೆ ಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ
Kollegala: ದ್ವಿಚಕ್ರ ವಾಹನದಲ್ಲಿ ಗಾಂಜಾ ಸಾಗಾಟ… ಸೊತ್ತು ಸಮೇತ ಆರೋಪಿ ಬಂಧನ
New Year: ಡಿ.31, ಜ. 1ರಂದು ಬಂಡೀಪುರದಲ್ಲಿ ಪ್ರವಾಸಿಗರ ವಾಸ್ತವ್ಯ ನಿರ್ಬಂಧ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.