ಕೋವಿಡ್‌ ಯೋಧರಿಗೆ ಸನ್ಮಾನ


Team Udayavani, Aug 16, 2020, 1:31 PM IST

ಕೋವಿಡ್‌ ಯೋಧರಿಗೆ ಸನ್ಮಾನ

ಚಾಮರಾಜನಗರ: ಕೋವಿಡ್ ತಡೆಗೆ ಶ್ರಮಿಸಿದ ಜಿಲ್ಲೆಯ ಕೋವಿಡ್ ಯೋಧರನ್ನು ಸಚಿವ ಎಸ್‌. ಸುರೇಶ್‌ಕುಮಾರ್‌ ಸನ್ಮಾನಿಸಿದರು. ನಗರದ ಡಾ. ಬಿ.ಆರ್‌. ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದಿಂದ ನಡೆದ 74ನೇ ಸ್ವಾತಂತ್ರೋತ್ಸವ ಕಾರ್ಯಕ್ರಮದಲ್ಲಿ ಡೀಸಿ ಡಾ.ಎಂ.ಆರ್‌. ರವಿ, ಜಿ.ಪಂ. ಸಿಇಒ ಹರ್ಷಲ್‌ ಬೋಯರ್‌ ನಾರಾಯಣರಾವ್‌, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ದಿವ್ಯಾ ಸಾರಾ ಥಾಮಸ್‌, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಂ.ಸಿ. ರವಿ, ವೈದ್ಯಕೀಯ ವಿಜ್ಞಾನ ಸಂಸ್ಥೆಯ ಡೀನ್‌ ಡಾ. ಸಂಜೀವ್‌ರನ್ನು ಸನ್ಮಾನಿಸಿದರು.

ವಾರಿಯರ್ಸ್‌ಗಳಾದ ಆರೋಗ್ಯ, ಕಂದಾಯ, ಪೊಲೀಸ್‌, ಆಶಾ, ಪೌರಕಾರ್ಮಿಕರು, ವಾಹನ ಚಾಲಕರು ಹಾಗೂ ಸ್ವಯಂ ಸೇವಕರನ್ನು ಸಹ ಜಿಲ್ಲಾಡಳಿತದಿಂದ ನೆನಪಿನ ಕಾಣಿಕೆ ನೀಡಿ ಆತ್ಮೀಯವಾಗಿ ಸನ್ಮಾನಿಸ ಲಾಯಿತು. ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದಿರುವ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.ಜಿಪಂ ಅಧ್ಯಕ್ಷೆ ಎಂ.ಅಶ್ವಿ‌ನಿ, ಉಪಾಧ್ಯಕ್ಷೆ ಶಶಿಕಲಾ, ಚುಡಾ ಆಧ್ಯಕ್ಷ ಕೆ.ಬಿ. ಶಾಂತಮೂರ್ತಿ, ತಾಪಂ ಅಧ್ಯಕ್ಷೆ ಎಚ್‌.ಎನ್‌. ಶೋಭಾ, ಉಪಾಧ್ಯಕ್ಷ ಕೆ.ರವೀಶ್‌, ಹೆಚ್ಚುವರಿ ಜಿಲ್ಲಾಧಿಕಾರಿ ಸಿ.ಎಲ್‌.ಆನಂದ್‌ ಉಪಸ್ಥಿತರಿದ್ದರು.

ಯಳಂದೂರಲ್ಲಿ  ಸ್ವಾತಂತ್ರ್ಯ ಸಂಭ್ರಮ  : ಪಟ್ಟಣ ಸೇರಿದಂತೆ ತಾಲೂಕಿನ ವಿವಿಧೆಡೆ ಶನಿವಾರ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಣೆ ಮಾಡಲಾಯಿತು. ಪಪಂ ಕಚೇರಿಯಲ್ಲಿ ಆಡಳಿತಾಧಿಕಾರಿ, ತಹಶೀಲ್ದಾರ್‌ ಚಿದಾನಂದ ಗುರುಸ್ವಾಮಿ ಧ್ವಜಾರೋಹಣ ನೆರವೇರಿಸಿದರು. ಕೊರೊನಾ ವಾರಿಯರ್ಸ್‌ಗಳಾದ ಪೌರಕಾರ್ಮಿಕರು ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಗೆ ಗೌರವಿಸಲಾಯಿತು. ಪಪಂ ಸದಸ್ಯರಾದ ವೈ.ಜಿ. ರಂಗನಾಥ, ಮಹದೇವನಾಯಕ, ಕೆ. ಮಲ್ಲಯ್ಯ, ಮಂಜು, ಬಿ. ರವಿ, ಸವಿತಾ, ಪ್ರಭಾವತಿ, ಮುಖ್ಯಾಧಿಕಾರಿ ಎಂ.ಸಿ. ನಾಗರತ್ನ, ಆರೋಗ್ಯಾಧಿಕಾರಿ ಮಹೇಶ್‌ಕುಮಾರ್‌, ನಂಜುಂಡಶೆಟ್ಟಿ, ನಾಗೇಂದ್ರ, ಮಲ್ಲಿಕಾರ್ಜುನ ಹಾಜರಿದ್ದರು. ತಾಲೂಕಿನ ವಿವಿಧ ಗ್ರಾಪಂ, ವಿದ್ಯಾರ್ಥಿನಿಲಯ, ಪೊಲೀಸ್‌ ಇಲಾಖೆ, ಸಾರ್ವಜನಿಕ ಆಸ್ಪತ್ರೆ ಸೇರಿದಂತೆ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ನಡೆಯಿತು.

 ಚಾ.ನಗರದಲ್ಲಿ ಸರಳ ಸ್ವಾತಂತ್ರ್ಯ ದಿನಾಚರಣೆ : ಕೋವಿಡ್‌ ಹಿನ್ನೆಲೆಯಲ್ಲಿ ಜಿಲ್ಲಾ ಕೇಂದ್ರದಲ್ಲಿ ಜಿಲ್ಲಾಡಳಿತದಿಂದ ಸ್ವಾತಂತ್ರ್ಯೊತ್ಸವವನ್ನು ಸರಳವಾಗಿ ಆಚರಿಸಲಾಯಿತು. ಜಿಲ್ಲಾ ಅಂಬೇಡ್ಕರ್‌ ಕ್ರೀಡಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಸಚಿವ ಎಸ್‌. ಸುರೇಶ್‌ಕುಮಾರ್‌ ಧ್ವಜಾರೋಹಣ ನೆರವೇರಿಸಿದರು. ಕೋವಿಡ್‌ ಹಿನ್ನೆಲೆಯಲ್ಲಿ ಶಾಲಾ ಮಕ್ಕಳ ಪಥ ಸಂಚಲನ, ಸಾಂಸ್ಕೃತಿಕ ಕಾರ್ಯಕ್ರಮ ಇರಲಿಲ್ಲ. ಸಮಾರಂಭದ ಸ್ಥಳಕ್ಕೆ ಜನಪ್ರತಿನಿಧಿಗಳು, ಅಧಿಕಾರಿಗಳು, ಸನ್ಮಾನಿತರು, ಸಂಘ, ಸಂಸ್ಥೆಗಳ ಮುಖಂಡರು ಹಾಗೂ ಮಾಧ್ಯಮದ ಪ್ರತಿನಿಧಿಗಳಿಗೆ ಮಾತ್ರ ಅವಕಾಶ ನೀಡಲಾಗಿತ್ತು. ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಸಚಿವ ಎಸ್‌. ಸುರೇಶ್‌ಕುಮಾರ್‌, ಸ್ವಾತಂತ್ರ್ಯ ಹೋರಾಟ, ತ್ಯಾಗ, ಬಲಿದಾನಗೈದವರನ್ನು ಸ್ಮರಿಸಿದರು. ಅಲ್ಲದೇ ಜಿಲ್ಲೆಯ ಸ್ವಾತಂತ್ರ್ಯ ಸೇನಾನಿಗಳನ್ನು ನೆನೆದರು.

ಈ ಸಂದರ್ಭದಲ್ಲಿ ಶಾಸಕ ಸಿ. ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಜಿಪಂ ಅಧ್ಯಕ್ಷೆ ಅಶ್ವಿ‌ನಿ, ಉಪಾಧ್ಯಕ್ಷೆ ಶಶಿಕಲಾ, ಚುಡಾ ಅಧ್ಯಕ್ಷ ಕೆ.ಬಿ. ಶಾಂತಮೂರ್ತಿ, ತಾಪಂ ಅಧ್ಯಕ್ಷೆ ಶೋಭಾ, ಉಪಾಧ್ಯಕ್ಷ ಕೆ. ರವೀಶ್‌, ಡೀಸಿ ಡಾ.ಎಂ.ಆರ್‌. ರವಿ, ಜಿಲ್ಲಾ ಎಸ್ಪಿ ದಿವ್ಯಾ ಥಾಮಸ್‌, ಜಿಪಂ ಸಿಇಒ ಹರ್ಷಲ್‌ ಭೋಯರ್‌ ನಾರಾಯಣರಾವ್‌, ಹೆಚ್ಚುವರಿ ಜಿಲ್ಲಾಧಿಕಾರಿ ಆನಂದ್‌ ಇದ್ದರು.

ಟಾಪ್ ನ್ಯೂಸ್

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

1-rcb

RCB ತಂಡಕ್ಕೆ ಸೇರಿದ ಫಿಲ್ ಸಾಲ್ಟ್, ಜಿತೇಶ್ ಶರ್ಮ, ಹ್ಯಾಜಲ್‌ವುಡ್‌

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Ullala-Auto-Accident

Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು

1-maha

Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಚಾಲಕ ಸಾವು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಸವಾರ ಸಾವು

Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ

Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Minister K.J. George: ಒಂದೇ ದಿನದಲ್ಲಿ 2500 ಲೈನ್‌ಮ್ಯಾನ್‌ನೇಮಕ ಸಂದರ್ಶನ

Minister K.J. George: ಒಂದೇ ದಿನದಲ್ಲಿ 2500 ಲೈನ್‌ಮ್ಯಾನ್‌ ನೇಮಕ ಸಂದರ್ಶನ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

1-rcb

RCB ತಂಡಕ್ಕೆ ಸೇರಿದ ಫಿಲ್ ಸಾಲ್ಟ್, ಜಿತೇಶ್ ಶರ್ಮ, ಹ್ಯಾಜಲ್‌ವುಡ್‌

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.