ನಿರಂಜನಕುಮಾರ್ ಪರ ನಟ ಕಿಚ್ಚ ಸುದೀಪ್ ರೋಡ್ ಶೋ ನಡೆಸಿ ಅಬ್ಬರದ ಪ್ರಚಾರ
Team Udayavani, May 5, 2023, 12:28 PM IST
ಗುಂಡ್ಲುಪೇಟೆ(ಚಾಮರಾಜನಗರ): ಪಟ್ಟಣದಲ್ಲಿ ಬಿಜೆಪಿ ಅಭ್ಯರ್ಥಿ ಸಿ.ಎಸ್.ನಿರಂಜನಕುಮಾರ್ ಪರ ಚಿತ್ರನಟ ಕಿಚ್ಚ ಸುದೀಪ್ ರೋಡ್ ಶೋ ನಡೆಸುವ ಮೂಲಕ ಅಬ್ಬರದ ಪ್ರಚಾರ ನಡೆಸಿದರು.
ಪಟ್ಟಣದ ಮಡಹಳ್ಳಿ ವೃತ್ತದ ಬಳಿ ಆಗಮಿಸಿದ ಕಿಚ್ಚ ಸುದೀಪ್ ಅವರನ್ನು ಬಿಜೆಪಿ ಅಭ್ಯರ್ಥಿ ನಿರಂಜನಕುಮಾರ್ ಮತ್ತು ಪುರಸಭಾ ಅಧ್ಯಕ್ಷ ಪಿ.ಗಿರೀಶ್ ಸ್ವಾಗತಿಸಿ ಬರಮಾಡಿಕೊಂಡರು. ನಟ ಸುದೀಪ್ ವಿಧಾನ ಪರಿಷತ್ ಸದಸ್ಯ ಚಲವಾದಿ ನಾರಾಯಣ ಸ್ವಾಮಿ ಅವರೊಟ್ಟಿಗೆ ತೆರೆದ ಪ್ರಚಾರ ವಾಹನ ವೇರುತ್ತಿದ್ದಂತೆ ಅಭಿಮಾನಿಗಳು, ಬಿಜೆಪಿ ಕಾರ್ಯಕರ್ತರು ಕೇಕೆ, ಶಿಳ್ಳೆ, ಚಪ್ಪಾಳೆ ಹಾಕುವ ಮೂಲಕ ಸಂಭ್ರಮಿಸಿದರು.
ಈ ವೇಳೆ ಮಾತನಾಡಿದ ಚಿತ್ರನಟ ಕಿಚ್ಚ ಸುದೀಪ್, ಗೆದ್ದೆ ಗೆಲ್ಲೆವೆವು ನಾವು ಒಂದು ದಿನ- ಗೆಲ್ಲಲೇಬೇಕು ಒಳ್ಳೆತನ ಎಂದು ಹೇಳುವ ಮೂಲಕ ಸತತವಾಗಿ ಸೋತರು ಗೆದ್ದ ನಿರಂಜನಕುಮಾರ್ ಈ ಬಾರಿಯೂ ಗೆಲ್ಲಿಸಿಕೊಡಬೇಕೆಂದು ಮನವಿ ಮಾಡಿದರು.
ನಾನು ಚಿತ್ರರಂಗದಲ್ಲಿ ಇವತ್ತು ಸಹ ಬಣ್ಣಹಚ್ಚಲು ನಿಮ್ಮ ಈ ಪ್ರೀತಿ ಅಭಿಮಾನವೇ ಕಾರಣ ನಿಮ್ಮ ಈ ಋಣವನ್ನ ನಾನೆಂದಿಗೂ ತೀರಿಸಲು ಸಾಧ್ಯವಿಲ್ಲ. ನಿಮ್ಮ ಈ ಜಯಘೋಷಗಳನ್ನ ಸಹೋದರ ನಿರಂಜನ್ ಗೆಲುವಿನಲ್ಲಿ ಕೇಳಲು ಬಯಸುತ್ತೇನೆ ಎಂದು ಸಂತಸ ವ್ಯಕ್ತಪಡಿಸಿದರು.
ರೋಡ್ ಶೋ ವೇಳೆ ನೆರೆದಿದ್ದ ಸಾವಿರಾರು ಅಭಿಮಾನಿಗಳು ಕಿಚ್ಚ ಕಿಚ್ಚ ಎಂದು ಘೋಷಣೆ ಕೂಗಿದರು. ಈ ವೇಳೆ ಸುದೀಪ್ ವೀರ ಮದಕರಿ ಎಂದು ಸಿನಿಮಾ ಡೈಲಾಗ್ ಹೊಡೆದು ಅಭಿಮಾನಿಗಳನ್ನು ಹುಚ್ಚೆಬ್ಬಿಸಿದ್ದರು.
ಮಡಹಳ್ಳಿ ವೃತ್ತದಿಂದ ಆರಂಭವಾದ ರೋಡ್ ಶೋ ಹಳೇ ಬಸ್ ನಿಲ್ದಾಣದಲ್ಲಿ ಅಂತ್ಯಗೊಂಡಿತು. ವಾಹನದಿಂದ ಸುದೀಪ್ ಕೆಳಗಿಳಿಯುತ್ತಿದ್ದಂತೆ ನೂಕುನುಗ್ಗಲು ಉಂಟಾಯಿತು. ಈ ವೇಳೆ ಜನರನ್ನು ಚದುರಿಸಲು ಪೊಲೀಸರು ಲಾಠಿ ಬೀಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
Vijay Hazare Trophy: ಮಯಾಂಕ್ ಅಗರ್ವಾಲ್ ಶತಕದಾಟ; ಪಂಜಾಬ್ ಕೈನಿಂದ ಜಯ ಕಸಿದ ಕರ್ನಾಟಕ
Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ
Maulana Masood: 26/11 ದಾಳಿಯ ಮಾಸ್ಟರ್ ಮೈಂಡ್: ಭಯೋ*ತ್ಪಾದಕ ಮಸೂದ್ ಗೆ ಹೃದಯಾಘಾತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.