ಮಲೆ ಮಹದೇಶ್ವರ ಬೆಟ್ಟದಲ್ಲಿ ಅಗ್ನಿ ಅವಘಡ: 3 ಅಂಗಡಿಗಳು ಬೆಂಕಿಗಾಹುತಿ
Team Udayavani, Jun 9, 2022, 11:14 AM IST
ಹನೂರು: ಆಕಸ್ಮಿಕ ಬೆಂಕಿ ತಗುಲಿ 3 ಅಂಗಡಿಗಳು ಸುಟ್ಟು ಕರಕಲಾಗಿರುವ ಘಟನೆ ಮಲೆ ಮಹದೇಶ್ವರ ಬೆಟ್ಟದಲ್ಲಿ ಗುರುವಾರ ಮುಂಜಾನೆ ನಡೆದಿದೆ.
ಮಲೆ ಮಹದೇಶ್ವರ ಬೆಟ್ಟದ ಮುಡಿಶೆಡ್‍ನ ಎದುರುಗಡೆಯ ಹನುಮಂತು ಎಂಬುವವರಿಗೆ ಸೇರಿದ 3 ಅಂಗಡಿಗಳಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿದೆ. ದಟ್ಟ ಹೊಗೆ ಆವರಸಿರುವುದನ್ನು ಗಮನಿಸಿದ ಸಾರ್ವಜನಿಕರು ಕೂಡಲೇ ಪ್ರಾಧಿಕಾರದ ವಾಟರ್ ಟ್ಯಾಂಕ್‍ನಲ್ಲಿ ನೀರನ್ನು ತರಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಘಟನೆಯಿಂದಾಗಿ ಹನುಮಂತು ಎಂಬುವವರಿಗೆ ಸೇರಿದ 2 ಬಟ್ಟೆ ಅಂಗಡಿ, 1 ದಿನಸಿ ಸಾಮಾಗ್ರಿ ಅಂಗಡಿ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಘಟನೆಯಿಂದಾಗಿ ಅಂಗಡಿಯಲ್ಲಿದ್ದ ಬಟ್ಟೆಗಳು, ಜ್ಯೂಸ್ ಬಾಟಲಿಗಳು, ರೆಫ್ರಿಜರೇಟರ್, ದಿನನಿತ್ಯ ಬಳಕೆಯ ವಸ್ತುಗಳು ಸಂಪೂರ್ಣವಾಗಿ ನಾಶವಾಗಿದ್ದು, ಅಂದಾಜು 10ಲಕ್ಷರೂ ನಷ್ಟ ಉಂಟಾಗಿದೆ ಎನ್ನಲಾಗುತ್ತಿದೆ.
ಇದನ್ನೂ ಓದಿ:ನಕಲಿ ದಾಖಲೆ ಸೃಷ್ಟಿಸಿ ಸೈಟ್ ಮಾರಾಟ: ಐವರ ಬಂಧನ
ಶಾಸಕರಿಂದ ಸೂಚನೆ: ಘಟನೆಯ ಬಗ್ಗೆ ಮಾಹಿತಿ ತಿಳಿದ ಶಾಸಕ ನರೇಂದ್ರ, ಪ್ರಾಧಿಕಾರದ ಕಾರ್ಯದರ್ಶಿ ಕಾತ್ಯಾಯಿನಿದೇವಿ ಮತ್ತು ಉಪಕಾರ್ಯದರ್ಶಿ ಬಸವರಾಜು ಆವರೊಂದಿಗೆ ದೂರವಾಣಿ ಮೂಲಕ ಮಾತನಾಡಿ ಕೂಡಲೇ ಸ್ಥಳಕ್ಕೆ ತೆರಳಿ ಘಟನೆಯ ಬಗ್ಗೆ ಪ್ರಾಥಮಿಕ ವರದಿ ನೀಡುವಂತೆ ಮತ್ತು ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸುವಂತೆ ಸೂಚನೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Ranking: ಐಸಿಸಿ ನೂತನ ರ್‍ಯಾಂಕಿಂಗ್ ಪ್ರಕಟ: ಶಾಹೀನ್ ಅಫ್ರಿದಿ ಮತ್ತೆ ನಂ.1
Kalidas Samman: ವರ್ಣಚಿತ್ರಕಾರ ರಘುಪತಿ ಭಟ್ ಅವರಿಗೆ ರಾಷ್ಟ್ರೀಯ ಕಾಳಿದಾಸ್ ಪ್ರಶಸ್ತಿ
Hockey: ವನಿತಾ ಏಷ್ಯಾ ಚಾಂಪಿಯನ್ಸ್ ಹಾಕಿ… ಇಂದು ಭಾರತಕ್ಕೆ ಥಾಯ್ಲೆಂಡ್ ಎದುರಾಳಿ
Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…
T20: ತಿಲಕ್ ವರ್ಮ ಸ್ಫೋಟಕ ಶತಕ… ಭಾರತ ಆರು ವಿಕೆಟಿಗೆ 219
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.