ಚಾಮರಾಜನಗರ ಜಿಲ್ಲೆ: ಕೋವಿಡ್‌ನಿಂದ ಮೊದಲ ಸಾವು


Team Udayavani, Jul 11, 2020, 11:15 PM IST

Dead-730

ಚಾಮರಾಜನಗರ: ಜಿಲ್ಲೆಯಲ್ಲಿ ಕೋವಿಡ್‌ನಿಂದ ಮೊದಲ ಸಾವು ಸಂಭವಿಸಿದೆ.

ಕೊಳ್ಳೇಗಾಲ ತಾಲೂಕಿನ ಕೊಂಗರಹಳ್ಳಿ ಗ್ರಾಮದ 58 ವರ್ಷದ ವ್ಯಕ್ತಿ ಶ್ವಾಸಕೋಶದ ಸೋಂಕಿನ ಕಾರಣ ಕೊಳ್ಳೇಗಾಲ ಉಪವಿಭಾಗ ಆಸ್ಪತ್ರೆಗೆ ದಾಖಲಾಗಿದ್ದು ಶನಿವಾರ ಮೃತಪಟ್ಟಿದ್ದಾರೆ.

ಈ ವ್ಯಕ್ತಿ ಮೃತಪಟ್ಟ ಬಳಿಕ ಲಭ್ಯವಾದ ಅವರ ಗಂಟಲು ದ್ರವ ಮಾದರಿ ಪರೀಕ್ಷೆಯ ಫಲಿತಾಂಶದಲ್ಲಿ ಪಾಸಿಟಿವ್ ಬಂದಿದೆ.

ಉಸಿರಾಟದ ತೊಂದರೆ ಕಾರಣದಿಂದ ಈ ವ್ಯಕ್ತಿ ಜು.8ರಂದು ಕೊಳ್ಳೇಗಾಲ ಉಪ ವಿಭಾಗ ಆಸ್ಪತ್ರೆಗೆ ದಾಖಲಾಗಿದ್ದರು. ಉಸಿರಾಟದ ತೊಂದರೆಯಿದ್ದ ಕಾರಣ ಅಂದೇ ಅವರ ಗಂಟಲು ದ್ರವ ಮಾದರಿಯನ್ನು ಸಂಗ್ರಹಿಸಿ ಆರ್‌ಟಿ-ಪಿಸಿಆರ್ ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಆದರೆ ಪರೀಕ್ಷೆಯ ಫಲಿತಾಂಶ ಬರುವ ಮುನ್ನವೇ ಶನಿವಾರ ಬೆಳಿಗ್ಗೆ 9.30ರಲ್ಲಿ ಮೃತಪಟ್ಟರು.

ಹೀಗಾಗಿ ಮರಣೋತ್ತರವಾಗಿ ಮತ್ತೊಮ್ಮೆ ಗಂಟಲು ದ್ರವ ಮಾದರಿಯನ್ನು ಟ್ರೂನಾಟ್ (ಶೀಘ್ರ ವರದಿ ದೊರಕುವ ವಿಧಾನದ )ಪರೀಕ್ಷೆಗೆ ಒಳಪಡಿಸಲಾಯಿತು. ಇದರಲ್ಲಿ ಆ ವ್ಯಕ್ತಿಗೆ ಕೋವಿಡ್-19 ದೃಢಪಟ್ಟಿತು. ಆದರೂ ಶನಿವಾರ ರಾತ್ರಿಯವರೆಗೂ ಆರ್‌ಟಿ-ಪಿಸಿಆರ್ ವರದಿ ನಿರೀಕ್ಷಿಸಲಾಗಿತ್ತು. ಶನಿವಾರ ರಾತ್ರಿ 10.30ರಲ್ಲಿ ಆ ವರದಿ ಲಭ್ಯವಾಗಿ, ಅದರಲ್ಲೂ ಕೋವಿಡ್ 19 ದೃಢಪಟ್ಟಿತು ಎಂದು ಜಿಲ್ಲಾಧಿಕಾರಿ ಡಾ.ಎಂ.ಆರ್. ರವಿ ತಿಳಿಸಿದ್ದಾರೆ.

ಈ ವ್ಯಕ್ತಿಯ ಶವ ಸಂಸ್ಕಾರವನ್ನು ಕೋವಿಡ್ ಮೃತದೇಹ ವಿಲೇವಾರಿ ಮಾರ್ಗಸೂಚಿಯ ಅನುಸಾರ ನಗರದ ಎಡಬೆಟ್ಟದ ಸಮೀಪ ಶನಿವಾರ ರಾತ್ರಿ ನಡೆಸಲಾಯಿತು. ಈ ವ್ಯಕ್ತಿ ಚಿಕಿತ್ಸೆ ಪಡೆಯುತ್ತಿದ್ದ ಆಸ್ಪತ್ರೆಯ ವಾರ್ಡ್ ಅನ್ನು ಸ್ಯಾನಿಟೈಸ್ ಮಾಡಿ, ಸೀಲ್‌ಡೌನ್ ಮಾಡಲಾಗಿದೆ.

ಈ ವ್ಯಕ್ತಿಗೆ ಚಿಕಿತ್ಸೆ ನೀಡಿದ ಆಸ್ಪತ್ರೆಯ ವೈದ್ಯರು, ವೈದ್ಯೇತರ ಸಿಬ್ಬಂದಿ, ಸಂಬಂಧಿಕರು ಹಾಗೂ ಆತನನ್ನು ಸಂಪರ್ಕಿಸ್ದಿ ಎಲ್ಲರನ್ನೂ ಕಡ್ಡಾಯ ಗೃಹ ಕ್ವಾರಂಟೀನ್‌ನಲ್ಲಿ ಇರಿಸಲಾಗಿದ್ದು, ಅವರೆಲ್ಲರ ಕೋವಿಡ್ ಪರೀಕ್ಷೆ ನಡೆಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಈ ವ್ಯಕ್ತಿಗೆ ಕೋವಿಡ್ ಸೋಂಕು ಹೇಗೆ ತಗುಲಿರಬಹುದೆಂಬ ಬಗ್ಗೆ ಇನ್ನೂ ಖಚಿತವಾಗಿಲ್ಲ.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

6-gundlupete

Gundlupete: ಕಾರು ಡಿಕ್ಕಿ ಹೊಡೆದು ಪಾದಾಚಾರಿ ಸಾವು

Kollegala-Archaka

Kollegala: ತೀರ್ಥ ಸ್ನಾನಕ್ಕೆ ಹೋದ ಅರ್ಚಕ ಕಾವೇರಿಯಲ್ಲಿ ಮುಳುಗಿ ಸಾವು

7-hanur

Hanur: ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಒಣ ಗಾಂಜಾ ಸಂಗ್ರಹಣೆ ಮಾಡಿದ್ದ ವ್ಯಕ್ತಿಯ ಬಂಧನ

5

Hanur: ಗಾಂಜಾ ಸಾಗಣೆ ಮಾಡುತ್ತಿದ್ದ ವ್ಯಕ್ತಿ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.