ಆದೇಶ ಕಟ್ಟುನಿಟ್ಟಾಗಿ ಪಾಲಿಸಿ
Team Udayavani, Apr 6, 2020, 12:19 PM IST
ಚಾಮರಾಜನಗರ: ಕೋವಿಡ್ 19 ಹರಡದಂತೆ ಮುಂಜಾಗರೂಕತೆ ವಹಿಸುವ ಎಲ್ಲಾ ನಿರ್ದೇಶನಗಳನ್ನು ಅಧಿಕಾರಿಗಳು ಕಟ್ಟುನಿಟ್ಟಾಗಿ ಪಾಲಿಸುವಂತೆ ಪೌಡಾಳಿತ ನಿರ್ದೇಶನಾಲಯದ ನಿರ್ದೇಶಕಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಬಿ.ಬಿ.ಕಾವೇರಿ ಸೂಚಿಸಿದರು.
ನಗರದಲ್ಲಿ ಕೋವಿಡ್ 19 ತಡೆಗಾಗಿ ಜಿಲ್ಲೆಯಲ್ಲಿ ಕೈಗೊಂಡಿರುವ ಕ್ರಮಗಳ ಕುರಿತು ನಡೆದ ಸಭೆಯಲ್ಲಿ ಮಾತನಾಡಿದಅವರು, ಕೋವಿಡ್-19 ತಡೆಯಲು ಸರ್ಕಾರ ಸೂಚಿಸಿರುವ ಎಲ್ಲಾ ಬಗೆಯ ಮುಂಜಾಗರೂಕತಾ ಕ್ರಮಗಳನ್ನು ಚಾಚೂ ತಪ್ಪದೆ ಅನುಷ್ಠಾನ ಮಾಡಬೇಕು, ಯಾವುದೇ ಪರಿಸ್ಥಿತಿ ನಿಭಾಯಿಸಲು ಆಸ್ಪತ್ರೆಗಳಲ್ಲಿ ಎಲ್ಲ ಸೌಲಭ್ಯಗಳು ಲಭ್ಯವಿರುವಂತೆ ನೋಡಿಕೊಳ್ಳಬೇಕು, ಮಾಸ್ಕ್, ಸ್ಯಾನಿಟೈಸರ್ ಇತರೆ ಸುರಕ್ಷತಾ ಸಾಧನಗಳು ಎಲ್ಲೆಡೆ ಲಭ್ಯವಾಗಬೇಕು ಎಂದು ತಿಳಿಸಿದರು.
ಚೆಕ್‌ಪೋಸ್ಟ್‌ಗಳಲ್ಲಿ ಕಟ್ಟುನಿಟ್ಟಿನ ತಪಾಸಣೆ ಮಾಡಬೇಕು. ಅವಶ್ಯಕ ವಸ್ತು ಗಳ ಸಾಗಣೆಗೆ ಯಾವುದೇ ಅಡಚಣೆಯಾಗಬಾರದು. ತರಕಾರಿ, ಹಣ್ಣು, ದಿನಸಿ ವಸ್ತುಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳಿಗೆ ಕೊರತೆಯಾಗ ಬಾರದು. ಕೃಷಿ ಚಟುವಟಿಕೆಗಳಿಗೆ ಅವಶ್ಯ ವಿರುವ ಪರಿಕರ ಒದಗಿಸುವಂತೆ ತಿಳಿಸಿದರು.
ಜಿಲ್ಲಾಧಿಕಾರಿ ಡಾ.ರವಿ, ಎಡೀಸಿ ಆನಂದ್, ಜಿಪಂ ಸಿಇಒ ನಾರಾಯಣರಾವ್, ಉಪ ವಿಭಾಗಾಧಿ ಕಾರಿ ನಿಖೀತಾ, ಡಿಎಚ್‌ಒ ಡಾ.ರವಿ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ
Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು
Minister K.J. George: ಒಂದೇ ದಿನದಲ್ಲಿ 2500 ಲೈನ್‌ಮ್ಯಾನ್ ನೇಮಕ ಸಂದರ್ಶನ
Bandipur: ಸಫಾರಿಯಲ್ಲಿ ಪ್ರವಾಸಿಗರ ಮುಂದೆಯೇ ಜಿಂಕೆ ಬೇಟೆಯಾಡಿದ ಚಿರತೆ
Birla Opus Paints: ಚಾಮರಾಜನಗರದಲ್ಲಿ ಬಿರ್ಲಾ ಒಪಸ್ ಪೇಂಟ್ಸ್ 4ನೇ ಕಾರ್ಖಾನೆ ಆರಂಭ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.