ಸೇನೆ ಸೇರ ಬಯಸುವ ಯುವಜನತೆಗೆ ಉಚಿತ ತರಬೇತಿ

ಭಾರತೀಯ ಸೇನೆಯಲ್ಲಿ ಸುಮಾರು 17 ವರ್ಷ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದೇನೆ.

Team Udayavani, Jul 28, 2022, 6:17 PM IST

ಸೇನೆ ಸೇರ ಬಯಸುವ ಯುವಜನತೆಗೆ ಉಚಿತ ತರಬೇತಿ

ಪಿರಿಯಾಪಟ್ಟಣ: ಭಾರತೀಯ ಸೇನೆ ಹಾಗೂ ಪೊಲೀಸ್‌ ಇಲಾಖೆಗೆ ಸೇರ ಬಯಸುವ ನಿರುದ್ಯೋಗಿ ಯುವಕರಿಗೆ ಉಚಿತವಾಗಿ ತರಬೇತಿ ನೀಡುವ ಕಾರ್ಯದಲ್ಲಿ ಭುತನಹಳ್ಳಿ ಗ್ರಾಮದ ಮಾಜಿ ಸೈನಿಕ ಬಿ.ಸಿ.ತಮ್ಮಣೇಗೌಡ ಹಾಗೂ ರಾವಂದೂರು ಶಿವು ತಾಲೂಕಿಗೆ ಮಾದರಿಯಾಗಿದ್ದಾರೆ.

ಬಿ.ಸಿ.ತಮ್ಮಣೇಗೌಡ ಹಾಗೂ ರಾವಂದೂರು ಶಿವು ಮಾಜಿ ಸೈನಿಕರಾಗಿದ್ದು, ಇವರು ಸುಮಾರು 17 ವರ್ಷಗಳ ಕಾಲ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ನಂತರ ತಮ್ಮ ಖಾಸಗಿ ಬದುಕಿನ ಒತ್ತಡದ ನಡುವೆಯೂ ತಮ್ಮ ವಿಶಿಷ್ಟ ರೀತಿಯಲ್ಲಿ ಸಮಾಜಸೇವೆಯಲ್ಲಿ ತೊಡಗಿಸಿಕೊಂಡು ಆ ಮೂಲಕ ಭಾರತೀಯ ಸೇನೆ ಹಾಗೂ ಪೋಲಿಸ್‌ ಇಲಾಖೆಗೆ ಸೇರಬಯಸುವ ತಾಲೂಕಿನ ಯುವಕರಿಗೆ ತರಬೇತಿ ನೀಡುವ ಮೂಲಕ ಯುವಕರ ಪಾಲಿಗೆ ಆದರ್ಶಪ್ರಾಯವಾಗಿದ್ದಾರೆ.

ಪಿರಿಯಾಪಟ್ಟಣ ತಾಲೂಕಿನ ನೂರಾರು ನಿರುದ್ಯೋಗಿ ಯುವಕ ಹಾಗೂ ಯುವತಿಯರಿಗೆ ಪಿರಿಯಾಪಟ್ಟಣ ಹರವೆ ಮಲ್ಲರಾಜಪಟ್ಟಣದಲ್ಲಿರುವ ತಾಲೂಕು ಕ್ರೀಡಾಂಗಣ, ರಾವಂದೂರಿನ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನ, ಬೆಟ್ಟದಪುರದ ಶಾಲಾ-ಕಾಲೇಜು ಆವರಣ
ಗಳಲ್ಲಿ ಯುವಕರಿಗೆ ಉಚಿತವಾಗಿ ಸೇನೆ ಮತ್ತು ಪೊಲೀಸ್‌ ಇಲಾಖೆಗೆ ಸೇರ ಬಯಸುವ ಅಭ್ಯರ್ಥಿಗಳಿಗೆ ಉಚಿತವಾಗಿ ತರಬೇತಿ ಶಿಬಿರವನ್ನು ನಡೆಸುತ್ತಿದ್ದಾರೆ.

ರಾವಂ ದೂರಿ ನಲ್ಲಿ ಈಗಾಗಲೇ ಆರು ತಿಂಗಳಿನಿಂದ ಸುಮಾರು 60 ರಿಂದ 70 ಯುವಕ ಹಾಗೂ ಯುವತಿಯರು ಈ ತರಬೇತಿಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಜೊತೆಗೆ ಇವರು ಪಿರಿಯಾಪಟ್ಟಣ ಹಾಗೂ ಬೆಟ್ಟದಪುರ ಎರಡು ಕೇಂದ್ರಗಳಲ್ಲಿ ತರಬೇತಿ ಶಿಬಿರಗಳನ್ನು ನಡೆಸುತ್ತಿದ್ದಾರೆ.

ಭಾರತೀಯ ಸೇನೆಯಲ್ಲಿ ಸುಮಾರು 17 ವರ್ಷ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದೇನೆ. ಈಗಲೂ ದೇಶ ಸೇವೆಯನ್ನು ನಾನು ನಿಲ್ಲಿಸುವುದಿಲ್ಲ. ಸೇನೆಗೆ ಸೇರ ಬಯಸುವ ಆಸಕ್ತ ಯುವಕರಿಗೆ ತರಬೇತಿ ನೀಡುತ್ತಿದ್ದೇನೆ. ನಮಗೆ ಸಾರ್ವಜನಿಕರು ಬೆನ್ನೆಲುಬಾಗಿ ನಿಂತರೆ ನಮ್ಮ ತಾಲೂಕಿನ ಯುವಜನತೆ ಎಷ್ಟೇ ಪ್ರಮಾಣದಲ್ಲಿ ತರಬೇತಿಗೆ ಬಂದರೂ ಅವರಿಗೆ ತರಬೇತಿಯನ್ನು ನೀಡುವ ಮೂಲಕ ಅವರನ್ನು ದೇಶ ಸೇವೆಗೆ ಪ್ರೇರೇಪಿಸುತ್ತೇವೆ.
● ರಾವಂದೂರು ಶಿವು, ಮಾಜಿ ಸೈನಿಕ

ಪಿರಿಯಾಪಟ್ಟಣದ ತಾಲೂಕು ಆಡಳಿತ, ಜನಪ್ರತಿನಿಧಿಗಳು ಹಾಗೂ ಸ್ವಯಂ ಸೇವಾ ಸಂಸ್ಥೆಗಳು ತಾಲೂಕಿನಲ್ಲಿರುವ ನಿರುದ್ಯೋಗಿ ಸಮಸ್ಯೆಯನ್ನು ಹೋಗಲಾಡಿಸಲು ನಮ್ಮೊಡನೆ ಸಹಕರಿಸಿದರೆ ತಾಲೂಕಿನ ನಿರುದ್ಯೋಗಿ ಯುವಕ, ಯುವತಿಯರಿಗೆ ಸೇನೆ ಸೇನೆ ಹಾಗೂ ಪೊಲೀಸ್‌ ಇಲಾಖೆ ಸೇರಲು ಅಗತ್ಯ ತರಬೇತಿ ಹಾಗೂ ಮಾರ್ಗದರ್ಶನ ನೀಡಲು ಸದಾ ಸಿದ್ಧರಿದ್ದೇವೆ.
● ಬಿ.ಸಿ.ತಮ್ಮಣ್ಣೇಗೌಡ, ಮಾಜಿ ಸೈನಿಕ, ಭೂತನಹಳ್ಳಿ

ಪಿ.ಎನ್‌.ದೇವೇಗೌಡ ಪಿರಿಯಾಪಟ್ಟಣ

ಟಾಪ್ ನ್ಯೂಸ್

FIR–Court

FIR Register: ಜಡ್ಜ್ ಹೆಸರಲ್ಲಿ ಲಂಚಕ್ಕೆ ಬೇಡಿಕೆಯ ಆರೋಪ: ವಕೀಲೆ ವಿರುದ್ಧ ದೂರು

Uttar Pradesh: 6 ಪುರುಷರ ವರಿಸಿ ವಂಚಿಸಿದ ಯುವತಿಯ ಗ್ಯಾಂಗ್‌ ಜೈಲಿಗೆ

Uttar Pradesh: 6 ಪುರುಷರ ವರಿಸಿ ವಂಚಿಸಿದ ಯುವತಿಯ ಗ್ಯಾಂಗ್‌ ಜೈಲಿಗೆ

BGv-Cong-Ses

Congress Session: “ಜೈ ಬಾಪು, ಜೈ ಭೀಮ, ಜೈ ಸಂವಿಧಾನ’ ಸಮಾವೇಶ

Shiradi

Road Project: ಶಿರಾಡಿ ಘಾಟ್‌ ಸುರಂಗ ಯೋಜನೆಗೆ ಡಿಪಿಆರ್‌ ರಚಿಸಿ: ಕೇಂದ್ರ ಸೂಚನೆ

Kusuma-RR-Nagar

Egg Thrown: “ಮೊಟ್ಟೆ ಅಟ್ಯಾಕ್‌’ ಚಿತ್ರದ ರಚನೆ, ನಿರ್ಮಾಣ ಸ್ವತಃ ಅವರದ್ದೇ: ಕುಸುಮಾ

santhosh

Sushasana Day: ಕಾಂಗ್ರೆಸ್‌ ಆಡಳಿತದಲ್ಲಿ ಜಂಗಲ್‌ ರಾಜ್‌ ಸೃಷ್ಟಿ: ಬಿ.ಎಲ್‌.ಸಂತೋಷ್‌

Hosur ವಿಮಾನ ನಿಲ್ದಾಣಕ್ಕೆ 2 ಸ್ಥಳ ನಿಗದಿಪಡಿಸಿದ ತಮಿಳುನಾಡು

Hosur ವಿಮಾನ ನಿಲ್ದಾಣಕ್ಕೆ 2 ಸ್ಥಳ ನಿಗದಿಪಡಿಸಿದ ತಮಿಳುನಾಡು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-

Gundlupete: ಬೋನಿಗೆ ಬಿದ್ದ ಗಂಡು ಚಿರತೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

6-gundlupete

Gundlupete: ಬೈಕ್ ಗೆ ಗುದ್ದಿದ ಪಿಕ್ ಅಪ್; ಸವಾರರ ಕಾಲು ಮುರಿತ

Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ

Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ

Gundlupet Bus Stand: ಮೂಲ ಸೌಲಭ್ಯ ವಂಚಿತ ಬೇಗೂರು ಬಸ್‌ ನಿಲ್ದಾಣ

Gundlupet Bus Stand: ಮೂಲ ಸೌಲಭ್ಯ ವಂಚಿತ ಬೇಗೂರು ಬಸ್‌ ನಿಲ್ದಾಣ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

FIR–Court

FIR Register: ಜಡ್ಜ್ ಹೆಸರಲ್ಲಿ ಲಂಚಕ್ಕೆ ಬೇಡಿಕೆಯ ಆರೋಪ: ವಕೀಲೆ ವಿರುದ್ಧ ದೂರು

Uttar Pradesh: 6 ಪುರುಷರ ವರಿಸಿ ವಂಚಿಸಿದ ಯುವತಿಯ ಗ್ಯಾಂಗ್‌ ಜೈಲಿಗೆ

Uttar Pradesh: 6 ಪುರುಷರ ವರಿಸಿ ವಂಚಿಸಿದ ಯುವತಿಯ ಗ್ಯಾಂಗ್‌ ಜೈಲಿಗೆ

BGv-Cong-Ses

Congress Session: “ಜೈ ಬಾಪು, ಜೈ ಭೀಮ, ಜೈ ಸಂವಿಧಾನ’ ಸಮಾವೇಶ

Shiradi

Road Project: ಶಿರಾಡಿ ಘಾಟ್‌ ಸುರಂಗ ಯೋಜನೆಗೆ ಡಿಪಿಆರ್‌ ರಚಿಸಿ: ಕೇಂದ್ರ ಸೂಚನೆ

Kusuma-RR-Nagar

Egg Thrown: “ಮೊಟ್ಟೆ ಅಟ್ಯಾಕ್‌’ ಚಿತ್ರದ ರಚನೆ, ನಿರ್ಮಾಣ ಸ್ವತಃ ಅವರದ್ದೇ: ಕುಸುಮಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.