ಗಣೇಶೋತ್ಸವ ಸಂಭ್ರಮ ಕುಗ್ಗಿಸಿದ ಬಿಗಿ ಷರತ್ತುಗಳು

ಬಯಲಿನಲ್ಲಿ 4 ಅಡಿ, ಮನೆಯಲ್ಲಿ 2 ಅಡಿ ಮೀರುವಂತಿಲ್ಲ; 5 ದಿನದೊಳಗೆ ಗಣೇಶ ವಿಗ್ರಹ ವಿಸರ್ಜನೆ ಕಡ್ಡಾಯ

Team Udayavani, Sep 9, 2021, 4:08 PM IST

ಗಣೇಶೋತ್ಸವ ಸಂಭ್ರಮ ಕುಗ್ಗಿಸಿದ ಬಿಗಿ ಷರತ್ತುಗಳು

ಚಾಮರಾಜನಗರ: ಗಣೇಶ ಚತುರ್ಥಿ ಹಬ್ಬವನ್ನು ಸರಳ ರೀತಿಯಲ್ಲಿ ದೇವಸ್ಥಾನ ಹಾಗೂ ತಮ್ಮ-ತಮ್ಮ ಮನೆಗಳಲ್ಲಿ ಅಥವಾ ಸರ್ಕಾರಿ ಖಾಸಗಿ ಸಾರ್ವಜನಿಕ ಬಯಲು ಪ್ರದೇಶಗಳಲ್ಲಿ ಕಡಿಮೆ ಜನರ ಉಪಸ್ಥಿತಿಯಲ್ಲಿ ಆಚರಿಸಲು ಸರ್ಕಾರ ಸೂಚನೆ ನೀಡಿದೆ. ಹೀಗಾಗಿ ಈ ಬಾರಿ ಗಣೇಶ ಹಬ್ಬದ ಸಂಭ್ರಮ ಕಡಿಮೆಯಾಗಿದೆ.

ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿಯನ್ನು ನಾಲ್ಕು ಅಡಿ ಎತ್ತರ ಮೀರದಂತೆ ಹಾಗೂ ಮನೆಯೊಳಗೆ2 ಅಡಿ ಮೀರದಂತೆ ಪ್ರತಿಷ್ಠಾಪಿಸುವ
ನಿಯಮ ವಿಧಿಸಲಾಗಿದೆ.

ನಗರ ಪ್ರದೇಶಗಳಲ್ಲಿ ವಾರ್ಡಿಗೆ ಒಂದರಂತೆ ಸಾರ್ವಜನಿಕ ಗಣೇಶೋತ್ಸವನ್ನುಮಾತ್ರಆಚರಿಸಲು ಪ್ರೋತ್ಸಾಹಿಸಲಾಗುತ್ತದೆ. ಗಣೇಶೋತ್ಸವ ವನ್ನು ಗರಿಷ್ಠ 5 ದಿನಗಳಿಗಿಂತ (ಸೆ. 10ರಿಂದ 14ರವರೆಗೆ ವರೆಗೆ ಮಾತ್ರ) ಹೆಚ್ಚಿನ ದಿನ ಆಚರಿಸುವಂತಿಲ್ಲ. ಇಂತಹ ಸ್ಥಳಗಳಲ್ಲಿ 20 ಜನಕ್ಕೆ ಸೀಮಿತವಾದಆವರಣವನ್ನು ನಿರ್ಮಿಸಬೇಕು. ಒಮ್ಮೆಲೆ 20ಕ್ಕಿಂತ ಹೆಚ್ಚಿನ ಜನ ಸೇರದಂತೆ ಅನುವು ಮಾಡಬೇಕು. ಗಣೇಶ ಆಚರಣೆಯ ಆಯೋಜಿತ ಸ್ಥಳಗಳಲ್ಲಿ ಸ್ಥಳೀಯ ಮಟ್ಟದಲ್ಲಿ ಆಯೋಜಕರು ಲಸಿಕೆ ಕಾರ್ಯಕ್ರಮ ಹಮ್ಮಿಕೊಳ್ಳಬೇಕು. ಸಾರ್ವಜನಿಕರಿಗೆ ಹಾಗೂ ವಾಹನ ಸಂಚಾರಕ್ಕೆ ಯಾವುದೇ ಅಡ್ಡಿಯಾಗದಂತೆ ಗಣೇಶ ಪ್ರತಿಷ್ಠಾಪಿಸಬೇಕು.

ಇದನ್ನೂ ಓದಿ:ತೆರೆ ಮೇಲೆ ‘ದಾದಾ’ ದಿನಗಳು : ಸಿದ್ಧವಾಗಲಿದೆ ಗಂಗೂಲಿ ಬಯೋಪಿಕ್

ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ ಸ್ಥಳದಲ್ಲಿ ಯಾವುದೇ ರೀತಿಯ ಸಾಂಸ್ಕೃತಿಕ, ಸಂಗೀತ, ನೃತ್ಯ ಹಾಗೂ ಮುಖ್ಯವಾಗಿ ಡಿ.ಜೆ.ಯ ಮೂಲಕ ಹಾಗೂ ಇನ್ನಿತರೆ ಯಾವುದೇ ಮನರಂಜನಾ ಕಾರ್ಯಕ್ರಮಗಳನ್ನು ಆಯೋಜಿಸಲು ಅವಕಾಶವಿರುವುದಿಲ್ಲ.

ಗಣೇಶ ಮೂರ್ತಿಗಳನ್ನು ತರುವಾಗ ಹಾಗೂ ವಿಸರ್ಜಿಸುವಾಗ ಯಾವುದೇ ಕಾರಣಕ್ಕಾಗಲಿ ಅಥವಾ ಯಾವುದೇ ಸಂದರ್ಭದಲ್ಲಿ ಯಾವುದೇ ಮೆರವಣಿಗೆ ಮಾಡುವುದನ್ನು ಸಂಪೂರ್ಣವಾಗಿ ನಿರ್ಬಂಧಿಸಿದೆ. ಪಾರಂಪರಿಕ ಗಣೇಶ ಮೂರ್ತಿ ಮತ್ತು ಮನೆಯಲ್ಲಿ ವಿಗ್ರಹಗಳನ್ನು ಪೂಜಿಸುವುದು.
ಅವುಗಳನ್ನು ಮನೆಯಲ್ಲಿಯೇ ವಿಸರ್ಜಿಸುವುದು ಮತ್ತು ಸರ್ಕಾರಿ, ಖಾಸಗಿ ಬಯಲು ಪ್ರದೇಶಗಳಲ್ಲಿ ಪ್ರತಿಷ್ಠಾಪಿಸುವ ಗಣೇಶ ಮೂರ್ತಿಗಳನ್ನು ಅತಿ ಕನಿಷ್ಠ ಜನಸಂಖ್ಯೆಯೊಂದಿಗೆ ಸಮೀಪವಾಗುವಂತಹ ಮಾರ್ಗಗಳನ್ನು ಬಳಸಿಕೊಂಡು ಜಿಲ್ಲಾಡಳಿತ, ಹತ್ತಿರದ ಸ್ಥಳೀಯ ಸಂಸ್ಥೆಗಳು, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ಈಗಾಗಲೇ ನಿರ್ಮಿಸಲಾದ ಹೊಂಡ ಅಥವಾ ಮೊಬೈಲ್‌ ಟ್ಯಾಂಕ್‌ಗಳಲ್ಲಿ ಅಥವಾ ಕೃತಕ ವಿಸರ್ಜನಾ ಟ್ಯಾಂಕ್‌ಗಳಲ್ಲಿ ವಿಸರ್ಜಿಸಬೇಕು.

ಆಸಕ್ತಿಯನ್ನೇ ತೊರಡ ಮಂಡಳಿಗಳು: ಕೋವಿಡ್‌ ಷರತ್ತುಗಳು ಗಣಪತಿ ಮಂಡಳಿಗಳ ಉತ್ಸಾಹವನ್ನು ತಗ್ಗಿಸಿದೆ. ಮೆರವಣಿಗೆ ಇಲ್ಲದೇ ಗಣೇಶೋತ್ಸವಕ್ಕೆ ಸಂಭ್ರಮ ಇಲ್ಲ. ಹೀಗಾಗಿ ನಿಯಮಾನುಸಾರ ಸರಳ ರೀತಿಯಲ್ಲಿ ಆಚರಿಸಲು ಕೆಲ ಮಂಡಳಿಗಳು ಮುಂದಾಗಿವೆ. ಇನ್ನು ಕೆಲ ಬಡಾವಣೆಗಳ ಸಂಘ, ಸಂಸ್ಥೆಗಳು ಈ ಬಾರಿ ಗಣೇಶೋತ್ಸವ ನಡೆಸಲು ಆಸಕ್ತಿಯನ್ನೇ ತೋರಿಸುತ್ತಿಲ್ಲ

ಗಣೇಶ ಮೂರ್ತಿಗಳಿಗೆ ಬೇಡಿಕೆ ಇಲ್ಲ
ಕೊನೆಗಳಿಗೆಯಲ್ಲಿ ಸಾರ್ವಜನಿಕ ಗಣೇಶೋತ್ಸವಕ್ಕೆ ಅವಕಾಶ ನೀಡಿದ್ದರಿಂದ ಗಣೇಶ ಮೂರ್ತಿ ಮಾರಾಟಗಾರರು ಎರಡು ದಿನದಿಂದ ಮಳಿಗೆ ತೆರೆದಿದ್ದಾರೆ. ಕಳೆದ ವರ್ಷವೂ ಗಣೇಶ ಮೂರ್ತಿ ಮಾರಾಟ ಬಹಳಕಡಿಮೆಯಾಗಿದ್ದರಿಂದ ಕಳೆದ ಬಾರಿ ಮಾರಾಟವಾಗದೇ ಉಳಿದಿದ್ದ ಗಣೇಶನನ್ನೇ ಈಗ ಮಾರುತ್ತಿದ್ದೇವೆ ಎಂದು ಗಣಪತಿ ಮಾರಾಟಗಾರರೊಬ್ಬರು ತಿಳಿಸಿದರು. ಗಣೇಶೋತ್ಸವ ಇಲ್ಲ ಎಂದಿದ್ದರು. ಈಗ ಎರಡು ದಿನದ ಹಿಂದೆ ಪ್ರಕಟಿಸಿದರು. 15 ದಿನಗಳ ಹಿಂದೆಯೇ ಗಣೇಶ ಮೂರ್ತಿ ಮಾರಾಟ ಶುರುವಾಗುತ್ತಿತ್ತು. ಈಗ ಐದು ದಿನಗಳೂ ಅವಕಾಶವಿಲ್ಲ. ನಿನ್ನೆಯಿಂದ 5 ಗಣೇಶ ಮಾರಾಟವಾಗಿವೆ. ದೊಡ್ಡ ಮೂರ್ತಿಗಳನ್ನು ಕೇಳುವವವರೇ ಇಲ್ಲ. ಈ ಬಾರಿಯೂ ನಮಗೆ ತುಂಬ ನಷ್ಟವಾಗುತ್ತದೆ ಎಂದು ಮಾರಾಟಗಾರ ಮಹೇಶ್‌ ಬೇಸರ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ

Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾವು, 20 ಮಂದಿ ರಕ್ಷಣೆ

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ

Basavaraj-horatti

Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್‌ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?

BGV-Gandhi-bharatha

Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ

1-horoscope

Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-

Gundlupete: ಬೋನಿಗೆ ಬಿದ್ದ ಗಂಡು ಚಿರತೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

6-gundlupete

Gundlupete: ಬೈಕ್ ಗೆ ಗುದ್ದಿದ ಪಿಕ್ ಅಪ್; ಸವಾರರ ಕಾಲು ಮುರಿತ

Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ

Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ

Gundlupet Bus Stand: ಮೂಲ ಸೌಲಭ್ಯ ವಂಚಿತ ಬೇಗೂರು ಬಸ್‌ ನಿಲ್ದಾಣ

Gundlupet Bus Stand: ಮೂಲ ಸೌಲಭ್ಯ ವಂಚಿತ ಬೇಗೂರು ಬಸ್‌ ನಿಲ್ದಾಣ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ

Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ

2-shirva

Shirva ಹ‌ಳೆವಿದ್ಯಾರ್ಥಿ ಸಂಘ; ಡಿ.29: ದಶಮಾನೋತ್ಸವ, ನೂತನ ಉಪಹಾರ ಗೃಹ ಸಮರ್ಪಣೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾವು, 20 ಮಂದಿ ರಕ್ಷಣೆ

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.