ತುಕ್ಕು ಹಿಡಿಯುತ್ತಿವೆ ಕಸ ಸಂಗ್ರಹಣಾ ವಾಹನಗಳು! 


Team Udayavani, Jul 1, 2023, 2:53 PM IST

ತುಕ್ಕು ಹಿಡಿಯುತ್ತಿವೆ ಕಸ ಸಂಗ್ರಹಣಾ ವಾಹನಗಳು! 

ಯಳಂದೂರು: ಪಟ್ಟಣದಲ್ಲಿ ಕಸವನ್ನು ಸಂಗ್ರಹಿಸಲು ಪಟ್ಟಣ ಪಂಚಾಯಿತಿಯ ಬಳಿ ಇರುವ ಆಟೋ ಟಿಪ್ಪರ್‌, ಟ್ರ್ಯಾಕ್ಟರ್‌ ಟ್ರ್ಯಾಲಿಗಳು ತುಕ್ಕು ಹಿಡಿದಿದ್ದು ಕಸ ಸಂಗ್ರಹಿಸಲು ಇಲ್ಲಿನ ಸಿಬ್ಬಂದಿ ಹರಸಾಹಸ ಪಡುವ ಸ್ಥಿತಿ ನಿರ್ಮಾಣವಾಗಿದೆ.

ಪಟ್ಟಣದ 11 ವಾರ್ಡ್‌ಗಳಲ್ಲಿ 10 ಸಾವಿರಕ್ಕೂ ಹೆಚ್ಚು ಜನಸಂಖ್ಯೆಯನ್ನು ಹೊಂದಿರುವ 2000 ಸಾವಿರಕ್ಕೂ ಹೆಚ್ಚು ಕುಟುಂಬಗಳಿವೆ. ಮನೆ ಮನೆಗಳಿಗೆ ತೆರಳಿ ಕಸ ಸಂಗ್ರಹಿಸಲು ಇಲ್ಲಿ ಎರಡೇ ವಾಹನಗಳು ಬರುತ್ತಿವೆ. ಈ ವಾಹನಗಳ ಟ್ರ್ಯಾಲಿಗಳ ಬಾಗಿಲುಗಳು ತುಕ್ಕು ಹಿಡಿದಿದ್ದು ಇವು ಒಡೆದಿವೆ. ಹಾಗಾಗಿ ಇದರೊಳಗೆ ಕಸ ಹಾಕಿದರೆ ರಸ್ತೆ ತುಂಬೆಲ್ಲಾ ಇದು ಕೆಳಕ್ಕೆ ಬೀಳುತ್ತಿದ್ದು ಇಲ್ಲಿನ ಸಿಬ್ಬಂದಿಗೆ ಇದನ್ನು ವಿಲೇವಾರಿ ಮಾಡುವುದೇ ದೊಡ್ಡ ಸವಾಲಾಗಿ ಪರಿಣಮಿಸಿದೆ. ಈ ಬಗ್ಗೆ ಇಲ್ಲಿನ ಅಧಿಕಾರಿ ವರ್ಗ ಗಮನ ಹರಿಸುತ್ತಿಲ್ಲ ಎಂಬುದು ಸಾರ್ವಜನಿಕರ ದೂರಾಗಿದೆ.

ಕಳೆದ ಹಲವು ದಿನಗಳಿಂದ ಕಸ ಸಂಗ್ರಹ ಸ್ಥಗಿತ: ಪಟ್ಟಣದ ಮನೆಗಳಿಂದ ಕಸ ಸಂಗ್ರಹಿಸುತ್ತಿದ್ದ ಎರಡು ವಾಹಗಳು ತುಕ್ಕು ಹಿಡಿದಿರುವ ಕಾರಣ ಕಸವನ್ನು ಸಂಗ್ರಹ ಮಾಡುತ್ತಿಲ್ಲ ಇದರಿಂದ ಮನೆಗಳಿಗೆ ಕಸವನ್ನು ಯಾವುದೇ ರೀತಿಯ ವಿಗಂಡಣೆ ಮಾಡದೇ ಹಾಗೇ ಚರಂಡಿ, ಖಾಲಿ ನಿವೇಶನ ಸೇರಿದಂತೆ ಇತರೇ ಸಾರ್ವಜನಿಕ ಸ್ಥಳಗಳಿಗೆ ಹಾಕುತ್ತಿರುವ ಪರಿಣಾಮ ರಸ್ತೆಗಳು ಚರಂಡಿಗಳು ಗಬ್ಬು ನಾರುತ್ತಿವೆ. ಇಲ್ಲಿ ಕೇವಲ ಎರಡು ವಾಹನಗಳು ಮಾತ್ರ ಇದ್ದು ಇಲ್ಲಿನ ಜನಸಂಖ್ಯೆಗೆ ಇದು ಸಾಲುತ್ತಿಲ್ಲ. ಇನ್ನೆರಡು ವಾಹನಗಳು ಇಲ್ಲಿಗೆ ಬೇಕಿವೆ. ಈ ಬಗ್ಗೆ ಸಂಬಂಧಪಟ್ಟ ಜನಪ್ರತಿನಿಧಿಗಳು ಅಧಿಕಾರಿ ವರ್ಗ ಗಮನ ಹರಿಸಬೇಕು ಎಂಬುದು ಇಲ್ಲಿನ ನಾಗರಿಕರ ಆಗ್ರಹವಾಗಿದೆ.

ಕಸ ಸಂಗ್ರಹಿಸಲು ಇನ್ನೂ ವಾಹನ ಬೇಕು: ಪಟ್ಟಣದಲ್ಲಿ ಎರಡು ಹಸಿ ಹಾಗೂ ಒಣ ಕಸಗಳನ್ನು ಸಂಗ್ರಹಿಸುವ ವಾಹನಗಳು ಮನೆ ಮನೆಗೆ ಹೋಗಿ ಸಂಗ್ರಹ ಮಾಡದ ಕಾರಣ ಕಸವನ್ನು ಅಕ್ಕ ಪಕ್ಕದ ಖಾಲಿ ನಿವೇಶನ ಸ್ಥಳ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಸುರಿಯುತ್ತಿದ್ದು ಇದರಿಂದ ಸಾಕಷ್ಟು ಸಮಸ್ಯೆಯಾಗುತ್ತಿದೆ. ಈ ಬಗ್ಗೆ ಮೇಲಧಿಕಾರಿಗಳು ಪಟ್ಟಣ ವ್ಯಾಪ್ತಿಗೆ ಇನ್ನೂ ಕಸ ತುಂಬುವ ವಾಹನದ ವ್ಯವಸ್ಥೆಯನ್ನು ಹೆಚುವ ನಿಟ್ಟಿನಲ್ಲಿ ಗಮನಹರಿಸಬೇಕಾಗಿದೆ.

ಹೆಸರಿಗಷ್ಟೇ ಪ್ಲಾಸ್ಟಿಕ್‌ ನಿಷೇಧ: ಪ್ಲಾಸ್ಟಿಕ್‌ ಕವರಗಳ ಮಾರಾಟ, ಬಳಕೆ ನಿಷೇಧವಿದ್ದರೂ ಇದು ಎಗ್ಗಿಲ್ಲದೆ ಮಾರಾಟ ವಾಗುತ್ತಿದೆ. ಪಟ್ಟಣ ವ್ಯಾಪ್ತಿಯ ಕಲ್ಯಾಣ ಮಂಟಪ, ಹೊಟೇಲ್‌, ಅಂಗಡಿ, ಚಿಲ್ಲರೆ ಅಂಗಡಿ, ಬೇಕರಿ, ಹಣ್ಣಿನ ಅಂಗಡಿ, ಟೀ ಅಂಗಡಿ ಸೇರಿದಂತೆ ಇತರೆಡೆ ಇದರ ಬಳಕೆ ಅವ್ಯಾಹತವಾಗಿ ಬಳಕೆಯಾಗುತ್ತಿದೆ. ಆದರೆ ಇದನ್ನು ತಡೆಯಬೇಕಿರುವ ಅಧಿಕಾರಿಗಳು ಮಾತ್ರ ಕಣ್ಣುಚ್ಚಿ ಕುಳಿತ್ತಿದ್ದಾರೆ. ಅಧಿಕಾರಿಗಳು ಮಾತ್ರ ನಿಷೇಧಿತ ಪ್ಲಾಸ್ಟಿಕ್‌ ಮಾರಾಟ, ಬಳಕೆಯ ಬಗ್ಗೆ ನಿಗಾ ವಹಿಸುತ್ತಿಲ್ಲ, ಇದರಿಂದ ರಾಜರೋಷವಾಗಿ ಪ್ಲಾಸ್ಟಿಕ್‌ ಮಾರಾಟ, ಬಳಕೆ ಮಾಡಲಾಗುತ್ತಿದ್ದು ಇದು ಕೂಡ ಕಸ ಹೆಚ್ಚು ಮಾಡುತ್ತಿದ್ದು ಇದರ ವಿಲೇವಾರಿಯೂ ಆಗದ ಕಾರಣ ಇಲ್ಲೇ ಹರಿಯುವ ಸುವರ್ಣಾವತಿ ನದಿಗೆ ಇದು ಮಾರಕವಾಗಿ ಪರಿಣಮಿಸುವ ಸಾಧ್ಯತೆಯೂ ಅಲ್ಲಗೆಳೆಯುವಂತಿಲ್ಲ.

ಕಸ ಸಂಗ್ರಹಿಸುವ ವಾಹನಗಳು ಸುತ್ತಲು ತುಕ್ಕು ಹಿಡಿದು ಕಸ ಸಂಗ್ರಹಿಸಲು ಸಾಧ್ಯವಾಗುತ್ತಿಲ್ಲ. ಈ ಪರಿಣಾಮ ಮನೆಗಳಿಂದ ಕಸವನ್ನು ಸಂಗ್ರಹಿಸುವ ಕೆಲಸ ಸ್ಥಗಿತಗೊಂಡಿದೆ. ಸಾರ್ವಜನಿಕರು ಅಕ್ಕ ಪಕ್ಕದ ಖಾಲಿ ಸ್ಥಳಗಳಲ್ಲಿ ಕಸ ಹಾಕುತ್ತಿದ್ದಾರೆ. ಈ ಬಗ್ಗೆ ತಕ್ಷಣ ತುಕ್ಕು ಹಿಡಿದಿರುವ ವಾಹನವನ್ನು ತಕ್ಷಣ ಸುರಸ್ತಿಪಡಿಸಿ ಕಸ ಸಂಗ್ರಹಿಸುವ ಕೆಲಸವನ್ನು ಅಧಿಕಾರಿಗಳು ಗಮನಹರಿಸಬೇಕಾಗಿದೆ. ●ವೈ.ಜಿ.ರಂಗನಾಥ, ಪಟ್ಟಣ ಪಂಚಾಯಿತಿ 2ನೇ ಸದಸ್ಯ

ಕಸ ವಿಲೆವಾರಿ ವಾಹನಗಳು ತುಕ್ಕು ಹಿಡಿದಿರುವ ಪರಿಣಾಮ ಮನೆಗಳಿಂದ ಕಸ ಸಂಗ್ರಹಿಸಲು ತೊಂದರೆಯಾಗುತ್ತಿ ರುವ ಬಗ್ಗೆ ಗಮನಹರಿಸಲಾಗುವುದು. ತಕ್ಷಣ ಇದರ ದುರಸ್ತಿಗೆ ಕ್ರಮ ವಹಿಸಲಾಗುವುದು. ●ರವಿಕೀರ್ತಿ, ಪಪಂ ಮುಖ್ಯಾಧಿಕಾರಿ, ಯಳಂದೂರು

-ಫೈರೋಜ್‌ಖಾನ್‌

ಟಾಪ್ ನ್ಯೂಸ್

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-gundlupete

Gundlupete: ಬೈಕ್ ಗೆ ಗುದ್ದಿದ ಪಿಕ್ ಅಪ್; ಸವಾರರ ಕಾಲು ಮುರಿತ

Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ

Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ

Gundlupet Bus Stand: ಮೂಲ ಸೌಲಭ್ಯ ವಂಚಿತ ಬೇಗೂರು ಬಸ್‌ ನಿಲ್ದಾಣ

Gundlupet Bus Stand: ಮೂಲ ಸೌಲಭ್ಯ ವಂಚಿತ ಬೇಗೂರು ಬಸ್‌ ನಿಲ್ದಾಣ

1-eewqe

Kollegala; ಮಾಜಿ ಶಾಸಕ ಎಸ್.ಜಯಣ್ಣ ಅಂತಿಮ ದರ್ಶನ ಪಡೆದ ಸಿಎಂ

Gundlupete: ಬೈಕ್- ಕೆಎಸ್‌ಆರ್‌ಟಿಸಿ ಬಸ್ ನಡುವೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Gundlupete: ಬೈಕ್- ಕೆಎಸ್‌ಆರ್‌ಟಿಸಿ ಬಸ್ ನಡುವೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

4

Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

3(1

Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ

Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು

Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.