ಗುಣಮಟ್ಟದ ಕಾಮಗಾರಿಗೆ ಆದ್ಯತೆ ನೀಡಿ: ಶಾಸಕ
Team Udayavani, Jul 12, 2022, 5:54 PM IST
ಗುಂಡ್ಲುಪೇಟೆ: ತಾಲೂಕಿನ ಬರಗಿ ಗ್ರಾಮದಲ್ಲಿ 50 ಲಕ್ಷ ರೂ. ವೆಚ್ಚದಲ್ಲಿ ಆಯ್ದ ಭಾಗಗಳಲ್ಲಿ ಸಿಸಿ ರಸ್ತೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಸಿ.ಎಸ್. ನಿರಂಜನಕುಮಾರ್ ಭೂಮಿಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಸಿ.ಎಸ್. ನಿರಂಜನಕುಮಾರ್, ಪಂಚಾಯತ್ ರಾಜ್ ಇಲಾಖೆಯಿಂದ ಲೆಕ್ಕ ಶೀರ್ಷಿಕೆ 50-54 ಯೋಜನೆಯಲ್ಲಿಬರಗಿ ಗ್ರಾಮದಲ್ಲಿ 50 ಲಕ್ಷ ರೂ. ವೆಚ್ಚದಲ್ಲಿ ಸಿಸಿ ರಸ್ತೆ ಮತ್ತು ಚರಂಡಿ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ.ಗುತ್ತಿಗೆದಾರರು ಗುಣಮಟ್ಟದಿಂದ ಕಾಮಗಾರಿ ಯನ್ನುನೆರವೇರಿಸಬೇಕು. ಲೋಪ ಕಂಡು ಬಂದರೆ ಕೂಡಲೇ ಅದನ್ನು ಸರಿಪಡಿಸಲು ಸ್ಥಳೀಯರು ತಿಳಿಸಿ ಉತ್ತಮ ರಸ್ತೆ ಮಾಡಿಸಿಕೊಳ್ಳಬೇಕು ಎಂದರು.
ಈಗಾಗಲೇ ತಾಲೂಕಿಗೆ ಸುಮಾರು 50 ಕೋಟಿಗಿಂತಲೂ ಹೆಚ್ಚಿನ ವಿಶೇಷ ಅನುದಾನ ತಂದು ಎಸ್ಸಿ, ಎಸ್ಟಿ ಸಮುದಾಯದ ಬೀದಿಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸಿ ಅಭಿವೃದ್ಧಿ ಪಡಿಸಲಾಗಿದೆ. ಅಂತೆಯೇ ಸಾಮಾನ್ಯ ಜನರ ಬೀದಿಗಳಲ್ಲಿ ರಸ್ತೆ ನಿರ್ಮಾಣಕ್ಕೆ ಬಿ.ಎಸ್ .ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ವೇಳೆ ಮನವಿ ಮಾಡಿದ ಹಿನ್ನೆಲೆ 22 ಕೋಟಿ ರೂ. ವಿಶೇಷ ಅನುದಾನ ಬಿಡುಗಡೆ ಮಾಡಿದರು. ಅದರಲ್ಲಿ ತಾಲೂಕಿನ 60 ಗ್ರಾಮಗಳ ಸಾಮಾನ್ಯ ಬೀದಿಗಳಿಗೆ ಆಯ್ಕೆ ಮಾಡಿ 50ಲಕ್ಷ ಹಣ ಮಂಜೂರು ಮಾಡಲಾಗಿತ್ತು. ಅದರಂತೆಇದೀಗ ರಸ್ತೆ ನಿರ್ಮಾಣಕ್ಕೆ ಚಾಲನೆ ನೀಡಲಾಗುತ್ತಿದೆ ಎಂದು ತಿಳಿಸಿದರು.
ಮಂಡಲ ಅಧ್ಯಕ್ಷ ದೊಡ್ಡಹುಂಡಿ ಜಗದೀಶ್, ಬಿಜೆಪಿ ಮುಖಂಡರಾದ ಕನ್ನೇಗಾಲ ಸ್ವಾಮಿ, ಸುಜೇಂದ್ರ, ಮಂಚಹಳ್ಳಿ ಬಾಬು, ಅಲತ್ತೂರು ರಾಜೇಶ್, ಮಾಡ್ರಹಳ್ಳಿ ನಾಗೇಂದ್ರ, ಮಿಂಚು ಮಹಾದೇವಪ್ಪ,ಚೆನ್ನಂಜಯ್ಯನಹುಂಡಿ ಬಸವಣ್ಣ, ಮಹದೇವಪ್ರಸಾದ್,ಮಲ್ಲಿಕಾರ್ಜುನ ಸ್ವಾಮಿ, ಪಂಚಾಯತ್ ರಾಜ್ ಇಲಾಖೆ ಎಇಇ ಸಂತೋಷ್ ಕುಮಾರ್ ಸೇರಿದಂತೆ ಸ್ಥಳೀಯ ಮುಖಂಡರು, ಬಿಜೆಪಿ ಕಾರ್ಯಕರ್ತರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್ ಡಿಕ್ಕಿ: ಮೊಪೆಡ್ ಸವಾರ ಸಾವು
Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ
Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ
Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು
Minister K.J. George: ಒಂದೇ ದಿನದಲ್ಲಿ 2500 ಲೈನ್‌ಮ್ಯಾನ್ ನೇಮಕ ಸಂದರ್ಶನ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.