ಸರ್ಕಾರದ ಬೊಕ್ಕಸ ಖಾಲಿ ಆಗಿಲ್ಲ: ಸಚಿವ ಅಶೋಕ್
Team Udayavani, Dec 13, 2022, 9:36 PM IST
ಹನೂರು: ಕೆಲವರು ನಮ್ಮ ಸರ್ಕಾರದ ಬೊಕ್ಕಸ ಖಾಲಿಯಾಗಿದೆ ಎನ್ನುತ್ತಾರೆ. ಆದರೆ, ಯಾವುದೇ ಸರ್ಕಾರದ ಅವಧಿಯಲ್ಲಿ ಬರದಷ್ಟು ಹಣ ಖಜಾನೆಗೆ ಹರಿದುಬರುತ್ತಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ವಿಪಕ್ಷಗಳಿಗೆ ತಿರುಗೇಟು ನೀಡಿದರು.
ಪಟ್ಟಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ಅಶೋಕ್, ಯಾವುದೇ ಸರ್ಕಾರದ ಅವಧಿಯಲ್ಲಿ ಬರದಷ್ಟು ಹಣ ತೆರಿಗೆ ರೂಪದಲ್ಲಿ ಬಿಜೆಪಿ ಸರ್ಕಾರದ ಬೊಕ್ಕಸಕ್ಕೆ ಬರುತ್ತಿದೆ. ಅದರಲ್ಲಿ ರಸ್ತೆ, ಕುಡಿಯುವ ನೀರು, ನೀರಾವರಿ ಯೋಜನೆಗಳಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ ಎಂದು ತಿಳಿಸಿದರು.
ರಾಜ್ಯದಲ್ಲಿ ಕಳೆದ 15-20 ವರ್ಷಗಳಿಂದ ಮೀಸಲಾತಿ ಹೆಚ್ಚಳ ನನೆಗುದಿಗೆ ಬಿದ್ದಿತ್ತು. ಹಲವು ಸಮಿತಿಗಳು ವರದಿ aನೀಡಿದರೂ ಜಾರಿ ಮಾಡಿರಲಿಲ್ಲ. ನಮ್ಮ ಸಿಎಂ ಬಸವರಾಜ ಬೊಮ್ಮಾಯಿ ಅವರು ಅದನ್ನು ಜಾರಿಗೊಳಿಸಲು ಮುಂದಾದಾಗ ಹಲವರು ಅದಕ್ಕೆ ಕೈಹಾಕಬೇಡಿ, ಅದು ಜೇನುಗೂಡಿನಂತೆ ಎಂದು ಹೇಳಿದರು. ಆದರೆ, ಇದ್ಯಾವುದಕ್ಕೂ ಹೆದರದೇ ಎಸ್ಸಿ, ಎಸ್ಟಿ ಮೀಸಲಾತಿ ಹೆಚ್ಚಳ ಮಾಡಿ, ಆ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ಒದಗಿಸಿದ್ದಾರೆ ಎಂದು ಹೇಳಿದರು.
ಸಚಿವ ಸೋಮಣ್ಣಗೆ ಬಹುಪರಾಕ್: ಕಾರ್ಯಕ್ರಮದಲ್ಲಿ ಸಚಿವ ಆರ್.ಅಶೋಕ್ ಅವರು ವಸತಿ ಸಚಿವ ಸೋಮಣ್ಣ ಅವರಿಗೆ ಬಹುಪರಾಕ್ ಹಾಕಿದರು. ಅವರನ್ನು ನಾವೆಲ್ಲಾ ವಿಜಯನಗರದ ವೀರಪುತ್ರ ಎನ್ನುತ್ತೇವೆ. ಅವರು ವಿಜಯನಗರದ ವೀರಪುತ್ರ ಮಾತ್ರ ಅಲ್ಲ, ಜಗದೇಕವೀರ ಎಂದು ಬಣ್ಣಿಸಿದರು. ಸಚಿವ ಸೋಮಣ್ಣ ಅವರು ಬಂದ ಕಡೆ ಅಭಿವೃದ್ಧಿ ತಾನಾಗೇ ನಡೆಯುತ್ತದೆ ಎಂದು ಹೊಗಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.