ಸರ್ಕಾರಿ ಆಸ್ಪತ್ರೆ ಸೀಲ್‌ಡೌನ್
Team Udayavani, Jul 10, 2020, 5:36 AM IST
ಯಳಂದೂರು: ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಗಂಟಲು ದ್ರವ ಪರೀಕ್ಷೆ ಮಾಡುತ್ತಿದ್ದ ಆಸ್ಪತ್ರೆ ಸಿಬ್ಬಂದಿಗೆ ಸೋಂಕು ಖಚಿತವಾದ ಹಿನ್ನೆಲೆಯಲ್ಲಿ ಆಸ್ಪತ್ರೆಯನ್ನು ಗುರುವಾರ ಸೀಲ್‌ಡೌನ್ ಮಾಡಲಾಗಿದೆ. ಇಲ್ಲಿನ ಲ್ಯಾಬ್‌ನಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಗೆ ಅನಾರೋಗ್ಯ ಕಾಡಿತ್ತು. ಈ ಹಿನ್ನೆಲೆಯಲ್ಲಿ ರಜೆಯಲ್ಲಿದ್ದರು. ಇವರಿಗೆ ಕೋವಿಡ್ 19 ದೃಢವಾಗಿದೆ.
ಈ ವಿಷಯ ತಿಳಿಯುತ್ತಿದ್ದಂತೆಯೇ ಇಲ್ಲಿನ ಲ್ಯಾಬ್ ಸೇರಿದಂತೆ ಆಸ್ಪತ್ರೆ, ಆರೋಗ್ಯ ಇಲಾಖೆ ಕಚೇರಿ, ವೈದ್ಯರ ವಸತಿ ಗೃಹಗಳಿಗೆ ಔಷಧಿ ಸಿಂಪಡಿಸಲಾಗಿದೆ. ಅಲ್ಲದೇ, ಆಸ್ಪತ್ರೆ ವೈದ್ಯರು, ನರ್ಸ್‌ಗಳು, ಸಿಬ್ಬಂದಿ ಸ್ವಯಂ ಪ್ರೇರಿತರಾಗಿ ತಮ್ಮ ಗಂಟಲು ದ್ರವವನ್ನು ಪರೀಕ್ಷೆಗೆ ನೀಡಿದ್ದಾರೆ. ಆಸ್ಪತ್ರೆಗೆ ಬರುತ್ತಿದ್ದ ರೋಗಿಗಳು ಮತ್ತು ಸಾರ್ವಜನಿಕರಿಗೆ ಆತಂಕ ಉಂಟಾಗಿದೆ.
ಮತ್ತೆ ಕೋವಿಡ್ 19 ದೃಢ: ಜು.3ರಂದು ಪಟ್ಟಣದ ಆಶ್ರಯ ಬಡಾವಣೆ ನಿವಾಸಿಗೆ ಮೊದಲ ಸೋಂಕು ಕಾಣಿಸಿಕೊಂಡಿತ್ತು. ಈಗ ಶಿಕ್ಷಕಿಯಾಗಿರುವ ಇವರ ಮಡದಿ ಹಾಗೂ ಒಬ್ಬ ಹೆಣ್ಣು ಮಗುವಿಗೂ ಕೋವಿಡ್ 19 ದೃಢಪಟ್ಟಿದೆ. ಅಲ್ಲದೆ, ತಾಲೂಕಿನ ಯರಗಂಬಳ್ಳಿ ಗ್ರಾಮದ ಯುವಕನಿಗೂ ಕೋವಿಡ್ 19 ದೃಢಪಟ್ಟಿದ್ದು, ಈತ ಬೆಂಗಳೂರಿನಿಂದ ತನ್ನ ಸ್ವಗ್ರಾಮಕ್ಕೆ ಬಂದಿದ್ದ ಎನ್ನಲಾಗಿದೆ.
ಒಟ್ಟು ತಾಲೂಕಿನಲ್ಲಿ ಗುರುವಾರ ಒಂದೇ ದಿನ 4 ಪ್ರಕರಣಗಳು ಪಾಸಿಟಿವ್ ಬಂದಿದೆ. ಇದರಿಂದ ಸಾರ್ವಜನಿಕರು ಆತಂಕದಲ್ಲಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಯರಗಂಬಳ್ಳಿ ಗ್ರಾಮದ ಲಿಂಗಾಯಿತರ ಬೀದಿಯನ್ನು ಕಂಟೈನ್ಮೆಂಟ್ ಝೋನ್‌ಗಳಾಗಿ ಪರಿವರ್ತಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gundlupete: ವಿದ್ಯುತ್ ಕಂಬಕ್ಕೆ ಗುದ್ದಿದ್ದ ಕಾರು: ಸ್ಥಳದಲ್ಲೇ ಇಬ್ಬರು ಸಾವು
Bandipur: ಸಫಾರಿ ವೇಳೆ ನಾಲ್ಕು ಮರಿ ಜೊತೆ ತಾಯಿ ಹುಲಿ ದರ್ಶನ
Cabinet Meeting: ಮೊದಲ ಬಾರಿ ಮಲೆ ಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ
Kollegala: ದ್ವಿಚಕ್ರ ವಾಹನದಲ್ಲಿ ಗಾಂಜಾ ಸಾಗಾಟ… ಸೊತ್ತು ಸಮೇತ ಆರೋಪಿ ಬಂಧನ
New Year: ಡಿ.31, ಜ. 1ರಂದು ಬಂಡೀಪುರದಲ್ಲಿ ಪ್ರವಾಸಿಗರ ವಾಸ್ತವ್ಯ ನಿರ್ಬಂಧ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ಗುತ್ತಿಗೆದಾರ ಸಚಿನ್ ಪ್ರಕರಣ; ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್
Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.