ದಿವ್ಯಾಂಗ ಕಲಾವಿದರಿಗೆ ದಿನಸಿ, ಸಹಾಯಧನ
Team Udayavani, Jun 11, 2020, 4:49 AM IST
ಚಾಮರಾಜನಗರ: ಕೋವಿಡ್-19ನಿಂದ ಆರ್ಥಿಕ ಸಂಕಷ್ಟದಲ್ಲಿರುವ ಅನಾರೋಗ್ಯಪೀಡಿತ ಹಾಗೂ ದಿವ್ಯಾಂಗ ಕಲಾವಿದರಿಗೆ ಜಿಲ್ಲಾಡಳಿತ, ಕರ್ನಾಟಕ ಜಾನಪದ ಪರಿಷತ್ತು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಆದಿಚುಂಚನಗಿರಿ ಮಹಾಸಂಸ್ಥಾನದ ಸಹ ಯೋಗದಲ್ಲಿ ಆಹಾರ ಪದಾರ್ಥಗಳ ಕಿಟ್ ಮತ್ತು ಧನಸಹಾಯದ ಚೆಕ್‌ಗಳನ್ನು ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ವಿತರಿಸಿದರು.
ಬಳಿಕ ಮಾತನಾಡಿದ ಜಿಲ್ಲಾಧಿಕಾರಿ ಡಾ.ರವಿ, ಜಾನ ಪದ ಕಲಾಪ್ರಕಾರಗಳಾದ ತಂಬೂರಿ ಹಾಗೂ ಸೋಬಾನೆ ಪದಗಳನ್ನು ಚಿಕ್ಕಂದಿನಿಂದ ಕಲಿತ ಬಗೆ, ಕಲಿಸಿದ ಗುರು ಗಳು, ಅದನ್ನು ಮುಂದುವರೆಸಿಕೊಂಡು ಬರುತ್ತಿರುವ ಮತ್ತು ಇಂತಹ ಕಲೆಗಳನ್ನು ಮುಂದಿನ ಪೀಳಿಗೆಗೂ ಉಳಿಸುವ ಬಗ್ಗೆ ಸ್ವತಃ ಕಲಾವಿದರಿಂದಲೇ ಮಾಹಿತಿ ಪಡೆದರು.
ಜಾನಪದ ಅಕಾಡಮಿ ಜಿಲ್ಲಾಧ್ಯಕ್ಷ ನರಸಿಂಹ ಮೂರ್ತಿ ಮಾತನಾಡಿ, ಕೋವಿಡ್-19 ಹಿನ್ನೆಲೆಯಲ್ಲಿ ಲಾಕ್‌ಡೌನ್ ಜಾರಿಯಲ್ಲಿದ್ದರಿಂದ ಜಿಲ್ಲೆಯ ಕಲಾವಿ ದರು ಅರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಅವರಿಗೆ ನೆರ ವಾಗುವ ಸಲುವಾಗಿ ಜಿಲ್ಲಾಡಳಿತದಿಂದ 200 ಮಂದಿ ಕಲಾ ವಿದರಿಗೆ ಆಹಾರ ಪದಾರ್ಥಗಳ ದಿನಸಿ ಕಿಟ್ ವಿತರಿಸಲಾಗುತ್ತಿದೆ.
ಅಲ್ಲದೆ ಕರ್ನಾಟಕ ಜಾನಪದ ಅಕಾಡೆಮಿ 50 ಸಾವಿರ ರೂ.ಗಳ ಧನಸಹಾಯ ನೀಡಿದ್ದು, ಅರ್ಥಿಕ ಸಂಕಷ್ಟದಲ್ಲಿರುವ ದಿವ್ಯಾಂಗರಿಗೆ ತಲಾ 1 ಸಾವಿರ ರೂ. ಚೆಕ್ ವಿತರಿಸಲಾಗುತ್ತಿದೆ ಎಂದರು. ಈ ವೇಳೆ ಎಸ್ಪಿ ಆನಂದ್ ಕುಮಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಗಿರೀಶ್, ಕರ್ನಾಟಕ ಜಾನಪದ ಪರಿಷತ್ ತಾಲೂಕು ಅಧ್ಯಕ್ಷ ಕಲೆ ನಟರಾಜು ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ
Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ
Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು
Minister K.J. George: ಒಂದೇ ದಿನದಲ್ಲಿ 2500 ಲೈನ್‌ಮ್ಯಾನ್ ನೇಮಕ ಸಂದರ್ಶನ
Bandipur: ಸಫಾರಿಯಲ್ಲಿ ಪ್ರವಾಸಿಗರ ಮುಂದೆಯೇ ಜಿಂಕೆ ಬೇಟೆಯಾಡಿದ ಚಿರತೆ
MUST WATCH
ಹೊಸ ಸೇರ್ಪಡೆ
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್ ಟೂರಿಸಂ ಹಬ್ಬ!
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.