ಗೃಹಲಕ್ಷ್ಮೀ: ಪಡಿತರ ಚೀಟಿ ತಿದ್ದುಪಡಿಗಾಗಿ ಮುಗಿಬಿದ್ದ ಜನರು
Team Udayavani, Jul 25, 2023, 3:56 PM IST
ಗುಂಡ್ಲುಪೇಟೆ: ಪಡಿತರ ಚೀಟಿ ತಿದ್ದುಪಡಿಗಾಗಿ ಪಟ್ಟಣದ ತಾಲೂಕು ಕಚೇರಿಯ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಕಚೇರಿ ಮುಂದೆ ತಾಲೂಕಿನ ವಿವಿಧ ಗ್ರಾಮಗಳಿಂದ ಆಗಮಿಸಿದ್ದ ನೂರಾರು ಮಂದಿ ಗಂಟೆಗಟ್ಟಲೇ ಕಾಯುವ ಪರಿಸ್ಥಿತಿ ಸೋಮವಾರ ನಿರ್ಮಾಣವಾಗಿತ್ತು. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಹಾಕಲು ತಾಯಿ ಅಥವಾ ಪತ್ನಿ ಕುಟುಂಬದ ಮುಖ್ಯಸ್ಥೆ ಆಗಿರಬೇಕು ಎಂಬ ನಿಯಮವಿರುವ ಕಾರಣ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಕಚೇರಿ ಮುಂದೆ ಪಡಿತರದಾರರು ಬೆಳಗ್ಗೆಯೇ ಆಗಮಿಸಿ ಸಾಲಿನಲ್ಲಿ ನಿಂತಿದ್ದರು.
ಗೊಂದಲದ ಗೂಡು: ಬೆಳಗ್ಗೆ 11 ಗಂಟೆ ವೇಳೆ ನೂರಾರು ಮಂದಿ ಒಮ್ಮೆಲೆ ಜಮಾಯಿಸಿದ ಕಾರಣದಿಂದ ಗೊಂದ ಲದ ಗೂಡಾಯಿತು. ಜನ ಜಗುಳಿ ಹೆಚ್ಚಿದ್ದ ಕಾರಣದಿಂದ ಅಧಿಕಾರಿಗಳು ಕಚೇರಿ ಬಾಗಿಲು ಬಂದ್ ಮಾಡಿ ಕಿಟಕಿ ಮೂಲಕ ಅರ್ಜಿ ಸ್ವೀಕರಿಸಿ ದರು. ಈ ವೇಳೆ ಜನರನ್ನು ನಿಯಂತ್ರಿ ಸಲು ಪೊಲೀಸರು ಹೈರಾಣಾದರು. ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಹಾಕಿ ಮೊದಲೇ ಸೌಲಭ್ಯ ಪಡೆಯಬೇಕು ಎಂಬ ಉದ್ದೇಶದಿಂದ ಹಲವು ಮಂದಿ ಬೆಳಗ್ಗೆ 8 ಗಂಟೆಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಕಚೇರಿ ಮುಂದೆ ತಿಂಡಿ, ಊಟ ಮಾಡದೆ ಸಾಲಿನಲ್ಲಿ ಕಾದು ನಿಂತಿದ್ದರು. ಈ ಮಧ್ಯೆ ಜನರು ನಡುವೆ ನೂಕಾಟ ತಳ್ಳಾಟವೂ ನಡೆಯಿತು. ಈ ಸಂದರ್ಭ ಗೊಂದಲ ಸೃಷ್ಟಿಯಾಯಿತು. ನಂತರ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು ಮಧ್ಯೆ ಪ್ರವೇಶಿಸಿ ಜನರನ್ನು ಸಮಾಧಾನ ಪಡಿಸಿದರು. ಕೆಲವರು ಮಕ್ಕಳ ಸಮೇತ ಆಗಮಿದ್ದ ಕಾರಣ ತಾಯಿ ಮತ್ತು ಮಕ್ಕಳು ಪರದಾಡುವಂತಾಯಿತು.
ಪಡಿತರ ಚೀಟಿ ತಿದ್ದುಪಡಿಗಾಗಿ ಪಡಿತ ಕಾರ್ಡ್, ಆಧಾರ್ ಕಾರ್ಡ್ ನಕಲು ಪ್ರತಿ ಸಲ್ಲಿಸಬೇಕಾಗಿರುವ ಕಾರಣ ಪಟ್ಟಣದ ವಿವಿಧ ಜೆರಾಕ್ಸ್ ಅಂಗಡಿಗಳ ಮುಂದೆಯೂ ಜನ ಜಂಗುಳಿ ಕಂಡು ಬಂತು. ಮಾಲಿಕರು ಹಾಗೂ ಕೆಲಸಗಾ ರರು ಎಲ್ಲರೂ ಜೆರಾಕ್ಸ್ ಮಾಡುವ ಮೂಲಕ ಜನ ಸಂದಣಿ ತಗ್ಗಿಸಿದರು. ಇದರಿಂದ ಜೆರಾಕ್ಸ್ ಅಂಗಡಿಗಳಿಗೂ ಉತ್ತಮ ಆದಾಯವಾಯಿತು.
ನಾಡಕಚೇರಿಯಲ್ಲೂ ಜನ ಸಂದಣಿ: ಗೃಹಲಕ್ಷ್ಮೀ ಸೇರಿದಂತೆ ಇನ್ನಿತರ ಹಲವು ಯೋಜನೆ ಪಡೆಯಲು ಆಧಾರ್ ಕಡ್ಡಾಯವಾಗಿರುವ ಕಾರಣ, ತಿದ್ದುಪಡಿಗಾಗಿ ತೆರಕಣಾಂಬಿ ನಾಡ ಕಚೇರಿ ಮುಂದೆ ಮಹಿಳೆಯರು ಮತ್ತು ಮಕ್ಕಳು ಸಾಲುಗಟ್ಟಿ ನಿಂತಿದ್ದರು. ನಾಡ ಕಚೇರಿಗೆ ಆಧಾರ್ ಕಾರ್ಡ್‌ಗೆ ಮೊಬೈಲ್ ಸಂಖ್ಯೆ ಜೋಡಣೆ, ವಿಳಾಸ ತಿದ್ದುಪಡಿ, ಆಧಾರ್ ಅಪ್ ಡೇಟ್ ಮತ್ತು ಹೆಬ್ಬೆಟ್ಟಿನ ಗುರುತು ನೀಡಲು ಅಧಿಕ ಜನರು ಬಂದ ಕಾರಣ ಕೆಲಕಾಲ ನೂಕು ನುಗ್ಗಲು ಉಂಟಾಯಿತು. ಆಧಾರ್ ತಿದ್ದುಪಡಿಗಾಗಿ ಪ್ರತಿನಿತ್ಯ ನೂರಾರು ಮಂದಿ ನಾಡ ಕಚೇರಿಗೆ ಆಗಮಿಸುತ್ತಿರುವುದರಿಂದ ಗಂಟೆಗಟ್ಟಲೇ ಕಾಯುವಂತಾಗಿದೆ. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಮತ್ತೂಂದು ಕೌಂಟರ್ ತೆರೆಯುವ ಮೂಲಕ ಜನದಟ್ಟಣೆ ಕಡಿಮೆ ಮಾಡಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕೆಂದು ಮಹಿಳೆಯರು ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.