Gundlupete: ನಿಂತಿದ್ದ ಬೈಕ್ ಗೆ ಕಾರು ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು
Team Udayavani, Aug 13, 2024, 8:25 PM IST
ಗುಂಡ್ಲುಪೇಟೆ (ಚಾಮರಾಜನಗರ): ರಸ್ತೆ ಬದಿ ನಿಂತಿದ್ದ ಬೈಕ್ ಗೆ ಕಾರು ಗುದ್ದಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಪಟ್ಟಣದ ಹೊರ ವಲಯದ ಊಟಿ-ಮೈಸೂರು ರಾಷ್ಟ್ರೀಯ ಹೆದ್ದಾರಿ-766ರಲ್ಲಿ ಆ.13ರ ಮಂಗಳವಾರ ನಡೆದಿದೆ.
ಅರಕಲಗೂಡು ತಾಲೂಕಿನ ಕಂಠಪುರ ಗ್ರಾಮದ ಗಣೇಶ್(23) ಮೃತ ಬೈಕ್ ಸವಾರಿ.
ಗಣೇಶ್ ಹೆದ್ದಾರಿ ರಸ್ತೆಬದಿ ಬೈಕ್ ನಿಲ್ಲಿಸಿದ್ದ. ಈ ವೇಳೆ ಹಿಂಬದಿಯಿಂದ ಬಂದ ಕೇರಳ ನೋಂದಣಿಯ ಕಾರು ಬೈಕ್ ಗೆ ಗುದ್ದಿದ್ದು, ಈ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ.
ಮಾಹಿತಿ ತಿಳಿದ ಗುಂಡ್ಲುಪೇಟೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮೃತದೇಹವನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿ ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ಹಸ್ತಾಂತರಿಸಿದ್ದಾರೆ.
ಈ ಸಂಬಂಧ ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.