![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Nov 30, 2021, 3:39 PM IST
ಗುಂಡ್ಲುಪೇಟೆ: ತಾಲೂಕಿನ ಕೊಡಗಾಪುರ ಶಾಲೆಯ ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಇದು ಇನ್ನುಳಿದ ಮಕ್ಕಳ ಪೋಷಕರ ಆತಂಕಕ್ಕೆ ಕಾರಣವಾಗಿದೆ.
ಕಬ್ಬಹಳ್ಳಿ ಶಾಲಾ ಶಿಕ್ಷಕರಾದ ಉಮೇಶ್ ಎಂಬುವವರು ಕೊಡಗಾಪುರದಲ್ಲಿ ವಾಸಿಯಾಗಿದ್ದಾರೆ. ಅವರಿಗೆ ಕೊರೊನಾ ಧೃಡಪಟ್ಟಿತು. ಈ ಹಿನ್ನೆಲೆ ಪರೀಕ್ಷೆ ಮಾಡಿಸಿದಾಗ ಕೊಡಗಾಪುರ ಶಾಲೆಯಲ್ಲಿ ಓದುತ್ತಿದ್ದ ಅವರ ಇಬ್ಬರು ಮಕ್ಕಳಿಗೂ ಸೋಂಕು ಕಾಣಿಸಿಕೊಂಡಿದೆ ಎಂದು ತಿಳಿದು ಬಂದಿದೆ.
ಶಾಲೆಯಲ್ಲಿ ಒಟ್ಟು 73 ಮಕ್ಕಳಿದ್ದು, ಮೂವರು ಶಿಕ್ಷಕರು, ಇಬ್ಬರು ಅಡುಗೆ ಸಿಬ್ಬಂದಿ ಸೇರಿದಂತೆ ಎಲ್ಲರಿಗೂ ಮಾದಾಪಟ್ಟಣದ ವೈದ್ಯರಾದ ಡಾ.ದೀಪಕ್ ಮತ್ತು ತಂಡದಿಂದ ಆರ್‍ಟಿಪಿಸಿಆರ್ ಟೆಸ್ಟ್ ಮಾಡಿಸಲಾಗಿದ್ದು, ರಜೆ ನೀಡಿ ಮನೆಗೆ ಕಳುಹಿಸಲಾಗಿದೆ. ಬುಧವಾರ ವರದಿ ಬರಲಿದ್ದು, ನಂತರ ಶಾಲೆ ತೆರೆಯುವ ಬಗ್ಗೆ ತೀರ್ಮಾನಿಸಲಾಗುವುದು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಸಿ.ಶಿವಮೂರ್ತಿ ಮಾಹಿತಿ ನೀಡಿದರು.
ಮುನ್ನೆಚ್ಚರಿಕೆ ಕ್ರಮವಾಗಿ ಈಗಾಗಲೇ ಶಾಲೆಯನ್ನು ಸಂಪೂರ್ಣ ಸ್ಯಾನಿಟೈಸರ್ ಮಾಡಿಸಲಾಗಿದೆ. ವಿದ್ಯಾರ್ಥಿಗಳ ಪೋಷಕರು ಸಹ ಮಕ್ಕಳಿಗೆ ಯಾವುದೇ ಸಮಸ್ಯೆ ಇಲ್ಲ ಆರೋಗ್ಯವಾಗಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. ಈ ಹಿನ್ನೆಲೆ ಗ್ರಾಮಸ್ಥರು ಭಯ ಪಡುವ ಅಗತ್ಯವಿಲ್ಲ. ತಾವೂ ಸಹ ಖುದ್ಧಾಗಿ ಶಾಲೆಗೆ ಭೇಟಿ ನೀಡಿ ಅಗತ್ಯ ಮುನ್ನೆಚ್ಚರಿಕೆ ವಹಿಸಲು ಶಾಲಾಡಳಿಕ್ಕೆ ಸೂಚನೆ ನೀಡಿದ್ದೇನೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಸಿ.ಶಿವಮೂರ್ತಿ ತಿಳಿಸಿದರು.
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
You seem to have an Ad Blocker on.
To continue reading, please turn it off or whitelist Udayavani.