Gundlupete: ಅಕ್ರಮವಾಗಿ 3 ಕೆ.ಜಿ. 100 ಗ್ರಾಂ ಗಾಂಜಾ ಸಾಗಣೆ: ಬಂಧನ
Team Udayavani, Jan 5, 2025, 4:07 PM IST
ಗುಂಡ್ಲುಪೇಟೆ(ಚಾಮರಾಜನಗರ): ಕಾರಿನಲ್ಲಿ ಅಕ್ರಮವಾಗಿ 3 ಕೆ.ಜಿ 100 ಗ್ರಾಂ ಗಾಂಜಾ ಸಾಗಣೆ ಮಾಡುತ್ತಿದ್ದ ಆರೋಪಿಯನ್ನು ಗುಂಡ್ಲುಪೇಟೆ ಠಾಣೆ ಪೊಲೀಸರು ಪಟ್ಟಣದ ಹೊರ ವಲಯದ ಗುಂಡ್ಲುಪೇಟೆ-ಮೈಸೂರು ಹೆದ್ದಾರಿಯ ಕೆಬ್ಬೆಕಟ್ಟೆ ಶನೇಶ್ವರ ದೇವಾಲಯದ ಬಳಿ ಮಾಲು ಸಮೇತ ಹಿಡಿದು ಬಂಧಿಸಿದ ಘಟನೆ ಜ.5ರ ರವಿವಾರ ನಡೆದಿದೆ.
ಹನೂರು ತಾಲೂಕಿನ ಮಂಚಾಪುರ ಗ್ರಾಮದ ಗೋಪಾಲಕೃಷ್ಣ(47) ಬಂಧಿತ ಆರೋಪಿ. ಈತ ಲಾರಿ ಡ್ರೈವರ್ ಆಗಿದ್ದು, ಪ್ರಸ್ತುತ ಬೆಂಗಳೂರಿನ ರಾಜರಾಜೇಶ್ವರಿ ನಗರದ ವಾಸಿಯಾಗಿದ್ದಾನೆ.
ಆರೋಪಿಯು ಗಾಂಜಾ ಸಾಗಣೆ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕವಿತಾ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶಶಿಧರ್ ಹಾಗೂ ಪೊಲೀಸ್ ಉಪಾಧೀಕ್ಷಕ ಲಕ್ಷ್ಮಯ್ಯ ಮಾರ್ಗದರ್ಶನದಲ್ಲಿ ಗುಂಡ್ಲುಪೇಟೆ ಠಾಣೆ ಆರಕ್ಷಕ ನಿರೀಕ್ಷಕ ಎಸ್.ಪರಶಿವಮೂರ್ತಿ ನೇತೃತ್ವದ ತಂಡ ಮೈಸೂರು ಕಡೆಯಿಂದ ಬರುತ್ತಿದ್ದ ಕಾರನ್ನು ತಡೆದು ಪರಿಶೀಲನೆ ನಡೆಸಿದಾಗ 3 ಕೆ.ಜಿ 100 ಗ್ರಾಂ ಒಣ ಗಾಂಜಾ ಪತ್ತೆಯಾಗಿದೆ.
ನಂತರ ಆತನನ್ನು ಬಂಧಿಸಿ, ಮಾಲು ಸಮೇತ ಕಾರನ್ನು ವಶಕ್ಕೆ ಪಡೆಯಲಾಗಿದೆ. ಈ ಸಂಬಂಧ ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾರ್ಯಾಚರಣೆಯಲ್ಲಿ ಸಬ್ ಇನ್ಸ್ ಪೆಕ್ಟರ್ ಸಾಹೇಬಗೌಡ, ಪೇದೆಗಳಾದ ಗಂಗಾಧರ್, ಚಿನ್ನಸ್ವಾಮಿ, ಮಂಜುನಾಥ, ಶಶಿಧರಮೂರ್ತಿ, ಮಹೇಶ, ಸುಬ್ರಮಣ್ಯ, ಲಕ್ಷ್ಮಣ ಗೊಳಸಂಗಿ, ಚಾಮರಾಜನಗರ ಡಿಎಸ್‍ಬಿ ಶಾಖೆಯ ಸಿಬ್ಬಂದಿ ನಾಗರಾಜು, ಜಯಶಂಕರಮೂರ್ತಿ, ಜಯಕುಮಾರ್ ಇತರರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chamarajnagar: ಸಾಮಾಜಿಕ ಬಹಿಷ್ಕಾರ: ಗ್ರಾಮಸ್ಥರ ಸಭೆ ನಡೆಸಿದ ಅಧಿಕಾರಿಗಳು
Chamarajanagar: ದಲಿತರಿಗೆ ಬಾಡಿಗೆ ಮನೆ ನೀಡಿದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ
Gundlupete: ವಿದ್ಯುತ್ ಕಂಬಕ್ಕೆ ಗುದ್ದಿದ್ದ ಕಾರು: ಸ್ಥಳದಲ್ಲೇ ಇಬ್ಬರು ಸಾವು
Bandipur: ಸಫಾರಿ ವೇಳೆ ನಾಲ್ಕು ಮರಿ ಜೊತೆ ತಾಯಿ ಹುಲಿ ದರ್ಶನ
Cabinet Meeting: ಮೊದಲ ಬಾರಿ ಮಲೆ ಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ
ಆಪರೇಷನ್ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.