Gundlupete:ಮರಿಯಾನೆ ಬೇಟೆಗೆ ಹೊಂಚುಹಾಕುತ್ತಿದ್ದ ಹುಲಿ ಮೇಲೆ ತಾಯಿ ಆನೆ ದಾಳಿ:ವಿಡಿಯೋ ವೈರಲ್
Team Udayavani, Nov 26, 2024, 4:31 PM IST
ಗುಂಡ್ಲುಪೇಟೆ(ಚಾಮರಾಜನಗರ): ಮರಿಯಾನೆ ಬೇಟೆಗೆ ಹೊಂಚು ಹಾಕುತ್ತಿದ್ದ ಹುಲಿ ಮೇಲೆ ತಾಯಿಯಾನೆ ದಾಳಿಗೆ ಮುಂದಾದಾಗ ಹುಲಿರಾಯ ಓಟಕ್ಕಿತ್ತ ಘಟನೆ ತಾಲೂಕಿನ ಬಂಡೀಪುರ ಅಭಯಾರಣ್ಯದಲ್ಲಿ ನಡೆದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಅಗಿದೆ.
ಬಂಡೀಪುರ ಅಭಯಾರಣ್ಯ ಸಫಾರಿ ಜೋನ್ ನಲ್ಲಿ ತಾಯಿಯಾನೆ ತನ್ನ ಮರಿ ಜೊತೆಯಲ್ಲಿದ್ದ ವೇಳೆ ಹುಲಿಯೊಂದು ಸಮೀಪದಲ್ಲಿ ನಿಂತು ಆನೆಮರಿ ಬೇಟೆಗೆ ಹೊಂಚು ಹಾಕಿದೆ. ಇದನ್ನು ಸೂಕ್ಷ್ಮವಾಗಿ ಗಮನಿಸಿದ ತಾಯಿಯಾನೆ ಹುಲಿಯ ಮೇಲೆರಗಲು ಮುಂದಾಗಿದೆ. ಈ ವೇಳೆ ಹುಲಿ ಹೆದರಿ ಎಸ್ಕೇಪ್ ಆಗಿದೆ. ಈ ದೃಶ್ಯವನ್ನು ಸಫಾರಿಗೆ ತೆರಳಿದ ಪ್ರವಾಸಿಯೋರ್ವರು ತಮ್ಮ ಕ್ಯಾಮರದಲ್ಲಿ ಸೆರೆ ಹಿಡಿದು, ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಹೆಚ್ಚು ವನ್ಯಪ್ರಾಣಿಗಳ ದರ್ಶನ: ಬಂಡೀಪುರ ಸಫಾರಿಯಲ್ಲಿ ಕಳೆದೊಂದು ತಿಂಗಳಿಂದ ಹುಲಿ, ಚಿರತೆ, ಕಾಡಾನೆಗಳ ಹಿಂಡು, ಕಾಡೆಮ್ಮೆ, ನವಿಲು, ಜಿಂಕೆ ಸೇರಿದಂತೆ ಹಲವು ವನ್ಯಜೀವಿಗಳು ಹೆಚ್ಚಿನ ಸಂಖ್ಯೆಯಲ್ಲಿ ಕಾಣಿಸಿಕೊಳ್ಳುತ್ತಿವೆ. ಇವುಗಳನ್ನು ಕಂಡು ಪುಳಕಿತರಾಗುತ್ತಿರುವ ಪ್ರವಾಸಿಗರು ಅಧಿಕ ಸಂಖ್ಯೆಯಲ್ಲಿ ಸಫಾರಿ ವೀಕ್ಷಣೆಗೆ ಆಗಮಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.