ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆನೆ ದಾಳಿ: ರೈತನಿಗೆ ಗಂಭೀರ ಗಾಯ
Team Udayavani, Jan 2, 2023, 5:53 PM IST
ಗುಂಡ್ಲುಪೇಟೆ(ಚಾಮರಾಜನಗರ): ರೈತರೊಬ್ಬರ ಮೇಲೆ ಒಂಟಿ ಸಲಗ ದಾಳಿ ನಡೆಸಿದ ಪರಿಣಾಮ ರೈತನಿಗೆ ತೀವ್ರತರವಾದ ಗಾಯಗಳಾಗಿರುವ ಘಟನೆ ಬಂಡೀಪುರ ಅಭಯಾರಣ್ಯದ ಗುಂಡ್ಲುಪೇಟೆ ಬಫರ್ ಝೋನ್ ವ್ಯಾಪ್ತಿಯ ಬೆಟ್ಟದಮಾದಹಳ್ಳಿ ಗ್ರಾಮದ ರೈತರ ಜಮೀನೊಂದರಲ್ಲಿ ನಡೆದಿದೆ.
ಬೆಟ್ಟದಮಾದಹಳ್ಳಿ ಗ್ರಾಮದ ರೈತ ದೇವರಾಜಪ್ಪ ತಮ್ಮ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಒಂಟಿ ಸಲಗ ಏಕಾಏಕಿ ದಾಳಿ ನಡೆಸಿದೆ. ಘಟನೆಯಿಂದ ರೈತನ ಬೆನ್ನಿಗೆ ತೀವ್ರತರವಾದ ಗಾಯಗಳಾಗಿದೆ ಎನ್ನಲಾಗುತ್ತಿದ್ದು, ಗಾಯಾಳುವನ್ನು ಮೈಸೂರಿನ ಜೆಎಸ್ಎಸ್ ಆಸ್ಪತ್ರೆಗೆ ರವಾನಿಸಲಾಗಿದೆ.
ಆನೆಯು ಬೆಟ್ಟದಮಾದಹಳ್ಳಿ ವ್ಯಾಪ್ತಿಯ ರೈತರ ಜಮೀನಿನ ಬಾಳೆ ಬೆಳೆ, ಹುರುಳಿ ಸೇರಿದಂತೆ ಇನ್ನಿತರ ಕಡೆ ಲಗ್ಗೆಯಿಟ್ಟಿದ್ದು, ಹಲವು ಜಮೀನುಗಳಲ್ಲಿ ಅಳವಡಿಕೆ ಮಾಡಿದ್ದ ತಂತಿ ಬೇಲಿಯನ್ನು ತುಳಿದು ಹಾಕಿದೆ ಎನ್ನಲಾಗಿದೆ. ಒಂಟಿ ಸಲಗ ಬಾಳೆ ತೋಟದಲ್ಲಿ ಬೀಡು ಬಿಟ್ಟ ಹಿನ್ನಲೆ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದಾರೆ.
ಇದನ್ನೂ ಓದಿ: ಪಣಜಿ: ಮಹದಾಯಿ ನೀರು ನಿರ್ವಹಣಾ ಪ್ರಾಧಿಕಾರ ರಚಿಸುವಂತೆ ಕೇಂದ್ರಕ್ಕೆ ಗೋವಾ ಸರಕಾರ ಒತ್ತಾಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
T20: ತಿಲಕ್ ವರ್ಮ ಸ್ಫೋಟಕ ಶತಕ… ಭಾರತ ಆರು ವಿಕೆಟಿಗೆ 219
Ranaji Trophy: ಉತ್ತರ ಪ್ರದೇಶ ವಿರುದ್ಧ ಕರ್ನಾಟಕಕ್ಕೆ ಮುನ್ನಡೆ
Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್ ತೆರೆದೀರಿ ಜೋಕೆ!
Vitla:ಮಾಣಿ -ಮೈಸೂರು ರಾಜ್ಯ ಹೆದ್ದಾರಿಯಲ್ಲಿ ಲಾರಿ ಮೇಲೆ ಮರ ಬಿದ್ದು ರಸ್ತೆ ಸಂಪೂರ್ಣ ಬ್ಲಾಕ್
Self Treatment!: ಸ್ವಯಂ ಚಿಕಿತ್ಸೆಯ ಮೂಲಕ ಸ್ತನ ಕ್ಯಾನ್ಸರ್ ಗೆದ್ದ ವಿಜ್ಞಾನಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.