ಚಾಮರಾಜನಗರ: ವೈದ್ಯಾಧಿಕಾರಿಯಿಂದ ಲೈಂಗಿಕ ಕಿರುಕುಳ: ನರ್ಸಿಂಗ್ ಟ್ರೈನಿ ದೂರು
Team Udayavani, Dec 30, 2021, 9:40 PM IST
ಸಾಂದರ್ಭಿಕ ಚಿತ್ರ
ಚಾಮರಾಜನಗರ: ನಗರದ ಸರ್ಕಾರ ವೈದ್ಯಕೀಯ ಕಾಲೇಜು ಬೋಧನಾ ಆಸ್ಪತ್ರೆಯ (ಸಿಮ್‌ಸ್) ವೈದ್ಯಾಧಿಕಾರಿಯೊಬ್ಬರು ನರ್ಸಿಂಗ್ ಟ್ರೈನಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು ಈ ಬಗ್ಗೆ ಡೀನ್ ಅವರಿಗೆ ದೂರು ನೀಡಲಾಗಿದೆ.
ಕಣ್ಣಿನ ಚಿಕಿತ್ಸಾ ವಿಭಾಗದ ಮುಖ್ಯಸ್ಥ ಡಾ.ಮಹೇಶ್ವರ್ ಅವರು ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ನರ್ಸಿಂಗ್ ತರಬೇತಿ ಪಡೆಯುತ್ತಿರುವ ಯುವತಿ ಸಿಮ್‌ಸ್ ಜಿಲ್ಲಾ ಸರ್ಜನ್ ಮತ್ತು ಡೀನ್ ಗೆ ದೂರು ನೀಡಿದ್ದಾರೆ.
ಎರಡು ದಿನಗಳ ಹಿಂದೆ ಘಟನೆ ನಡೆದಿದೆ. ಸಂಸ್ಥೆಯ ಬೋಧನಾ ಆಸ್ಪತ್ರೆಯಲ್ಲಿ ಡಾ.ಮಹೇಶ್ವರ್ ಲೈಂಗಿಕ ಕಿರುಕುಳ ನೀಡಲು ಯತ್ನಿಸಿ, ಅಶ್ಲೀಲವಾಗಿ ವರ್ತಿಸಿದರು. ಅವರು ಟ್ರೈನಿ ನರ್ಸ್ ಅನ್ನು ಎಳೆದಾಡಿದ ಸಂದರ್ಭದಲ್ಲಿ ಆಕೆ ಜೋರಾಗಿ ಕಿರುಚಿಕೊಂಡರು. ನರ್ಸಿಂಗ್ ತರಬೇತಿ ಪಡೆಯುತ್ತಿದ್ದ ಇತರರು ಧಾವಿಸಿ ಆಕೆಯನ್ನು ರಕ್ಷಿಸಿದರು ಎಂದು ತಿಳಿದುಬಂದಿದೆ.
ಈ ಬಗ್ಗೆ ಪ್ರತಿಕ್ರಿಯಿಸಿದ ಸಂಸ್ಥೆಯ ಡೀನ್ ಡಾ.ಸಂಜೀವ್, ದೂರು ಬಂದಿದೆ. ತನಿಖೆಗಾಗಿ ಸಮಿತಿಯೊಂದನ್ನು ರಚಿಸಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chamarajnagar: ಸಾಮಾಜಿಕ ಬಹಿಷ್ಕಾರ: ಗ್ರಾಮಸ್ಥರ ಸಭೆ ನಡೆಸಿದ ಅಧಿಕಾರಿಗಳು
Chamarajanagar: ದಲಿತರಿಗೆ ಬಾಡಿಗೆ ಮನೆ ನೀಡಿದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ
Gundlupete: ವಿದ್ಯುತ್ ಕಂಬಕ್ಕೆ ಗುದ್ದಿದ್ದ ಕಾರು: ಸ್ಥಳದಲ್ಲೇ ಇಬ್ಬರು ಸಾವು
Bandipur: ಸಫಾರಿ ವೇಳೆ ನಾಲ್ಕು ಮರಿ ಜೊತೆ ತಾಯಿ ಹುಲಿ ದರ್ಶನ
Cabinet Meeting: ಮೊದಲ ಬಾರಿ ಮಲೆ ಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.