ಹರವೆಯಲ್ಲಿ ಆರೋಗ್ಯ ತಪಾಸಣೆ ಶಿಬಿರ


Team Udayavani, Dec 23, 2019, 3:00 AM IST

haraveyalli

ಚಾಮರಾಜನಗರ: ತಾಲೂಕಿನ ಹರವೆ ಗ್ರಾಮದಲ್ಲಿ ಶ್ರೀಚನ್ನಬಸವೇಶ್ವರ ವಿದ್ಯಾಸಂಸ್ಥೆ, ರೋಟರಿ ಸಂಸ್ಥೆ, ಜೆಎಸ್‌ಎಸ್‌ ಅಸ್ಪತ್ರೆ, ಜಿಲ್ಲಾ ಅಂಧತ್ವ ನಿಯಂತ್ರಣ ಸಂಸ್ಥೆ ಹಾಗೂ ಕೊಯತ್ತೂರು ಅರವಿಂದ ಕಣ್ಣಿನ ಅಸ್ಪತ್ರೆಯ ಸಹಯೋಗದಲ್ಲಿ ಆರೋಗ್ಯ ತಪಾಸಣೆ ಶಿಬಿರ ನಡೆದು, 604 ಮಂದಿ ಶಿಬಿರದ ಉಪಯೋಗ ಪಡೆದರು.

2019-20ನೇ ಸಾಲಿನ ರೋಟರಿ ಸಂಸ್ಥೆಯ 50ನೇ ಸೇವಾ ಕಾರ್ಯಕ್ರಮ ಇದಾಗಿದ್ದು, ಮೈಸೂರು ಹಾಗೂ ಚಾಮರಾಜನಗರ ಜೆಎಸ್‌ಎಸ್‌ ಅಸ್ಪತ್ರೆಯ ತಜ್ಞ ವೈದ್ಯರ ತಂಡ, ಅಸ್ಪತ್ರೆಯ ಅಧೀಕ್ಷಕರಾದ ಡಾ.ಕುಲದೀಪ್‌, ಡಾ.ಗುರುಪ್ರಸಾದ್‌ ನೇತೃತ್ವದಲ್ಲಿ 400ಕ್ಕೂ ಹೆಚ್ಚು ಮಂದಿಗೆ ವಿವಿಧ ತಪಾಸಣೆಗಳನ್ನು ಮಾಡಿ, ಸಲಹೆ ನೀಡುವ ಜೊತೆಗೆ ಔಷಧ ನೀಡಿದರು.

ಅಲ್ಲದೆ, ಕೊಯಮತ್ತೂರಿನ ಅರವಿಂದ ಕಣ್ಣಾಸ್ಪತ್ರೆ ವೈದ್ಯರ ತಂಡ ಕಣ್ಣಿನ ತೊಂದರೆಯುಳ್ಳ 200ಕ್ಕೂ ಹೆಚ್ಚು ಮಂದಿ ಪರೀಕ್ಷೆ ಮಾಡಿ, ಕಣ್ಣಿನ ಪೊರೆಯುಳ್ಳ 20 ಮಂದಿಯನ್ನು ಶಸ್ತ್ರ ಚಿಕಿತ್ಸೆಗಾಗಿ ಕೊಯಮತ್ತೂರಿನ ಅರವಿಂದ ಕಣ್ಣಾಸ್ಪತ್ರಗೆ ಕರೆದೊಯ್ದರು. ಹೋಬಳಿ ಕೇಂದ್ರವೊಂದರಲ್ಲಿ ಆರೋಗ್ಯ ತಪಾಸಣೆ ಶಿಬಿರ ವ್ಯವಸ್ಥಿತವಾಗಿ ನಡೆಯಿತು.

ಮನುಷ್ಯನಿಗೆ ಆರೋಗ್ಯ ಮುಖ್ಯ: ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವ ಮೂಲಕ ಶಿಬಿರಕ್ಕೆ ಚಾಲನೆ ನೀಡಿದ ವಿರಕ್ತ ಮಠದ ಅಧ್ಯಕ್ಷ ಸರ್ಪಭೂಷಣ ಸ್ವಾಮೀಜಿ ಮಾತನಾಡಿ, ಮನುಷ್ಯನಿಗೆ ಆರೋಗ್ಯ ಬಹಳ ಮುಖ್ಯ. ಗ್ರಾಮಾಂತರ ಪ್ರದೇಶದ ಜನರು ಅನೇಕ ಜಂಜಾಟಗಳಲ್ಲಿ ಆರೋಗ್ಯದ ಕಾಳಜಿಯನ್ನು ಮರೆತು ಬಿಡುತ್ತಾರೆ. ಇದರಿಂದ ಅನೇಕ ತೊಂದರೆಗಳಿವೆ. ಅವರನ್ನು ನಂಬಿದ್ದ ಕುಟುಂಬಗಳು ಅನಾಥವಾಗುತ್ತಿವೆ. ಹೀಗಾಗಿ ಪ್ರತಿಯೊಬ್ಬರೂ ನಿಯಮಿತವಾಗಿ ತಮ್ಮ ಆರೋಗ್ಯ ಪರೀಕ್ಷೆ ಮಾಡಿಸಿಕೊಂಡು ವೈದ್ಯರ ಸಲಹೆ, ಸೂಚನೆಗಳನ್ನು ಪಾಲನೆ ಮಾಡಿದರೆ, ಆರೋಗ್ಯವಂತ ಜೀವನ ನಡೆಸಲು ಸಾಧ್ಯವಿದೆ ಎಂದರು.

ಕಲುಷಿತ ವಾತಾವರಣದಿಂದ ತೊಂದರೆ: ಇತ್ತೀಚಿನ ಆಹಾರ ಪದ್ಧತಿ ಹಾಗೂ ಕಲುಷಿತ ವಾತಾವರಣದಿಂದ ನಮ್ಮ ದೇಹದಲ್ಲಿ ನಮಗೆ ಅರಿವೇ ಇಲ್ಲದೆ ಅನೇಕ ತೊಂದರೆಗಳು ಉಲ್ಬಣಿಸುತ್ತಿವೆ. ಇದನ್ನು ಹತೋಟಿಗೆ ತಂದು ಆರೋಗ್ಯವಂತ ಜೀವನ ನಡೆಸಲು ಆರೋಗ್ಯ ತಪಾಸಣೆ ಶಿಬಿರಗಳು ಪ್ರಯೋಜನವಾಗುತ್ತಿದೆ.

ಈ ಶಿಬಿರದಲ್ಲಿ ಪ್ರಮುಖವಾಗಿ ಹೃದಯ ತಪಾಸಣೆ, ಮಧುಮೇಹ, ಬಿಪಿ, ಕೀಲು ಮತ್ತು ಮೂಳೆ, ಸಾಮಾನ್ಯ ವೈದ್ಯಕೀಯ ಮತ್ತು ಶಸ್ತ್ರ ಚಿಕಿತ್ಸೆ, ಸ್ತ್ರೀರೋಗ, ಪ್ರಸೂತಿ ಸಮಸ್ಯೆ, ಕಿವಿ, ಮೂಗು, ಗಂಟಲಿನ ಸಮಸ್ಯೆ, ಕಣ್ಣಿನ ತಪಾಸಣೆಯನ್ನು ಒಂದೇ ಶಿಬಿರದಲ್ಲಿ ಆಯೋಜನೆ ಮಾಡುವ ಮೂಲಕ ಈ ಭಾಗದ ಜನರಿಗೆ ಅನುಕೂಲ ಮಾಡಿಕೊಡಲಾಗಿದೆ. ಅಲ್ಲದೆ, ಉಚಿತವಾಗಿ ಔಷಧಿಗಳನ್ನು ವಿತರಣೆ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ರೋಟರಿ ಅಧ್ಯಕ್ಷ ಆರ್‌.ಎಂ.ಸ್ವಾಮಿ, ಜಿಪಂ ಸದಸ್ಯ ಕೆರೆಹಳ್ಳಿ ನವೀನ್‌, ರೋಟರಿಯನ್‌ಗಳಾದ ಕಾಗಲವಾಡಿ ಚಂದ್ರು, ಎಲ್‌. ನಾಗರಾಜು, ಪ್ರಕಾಸ್‌, ಚಂದ್ರಪ್ರಭ ಜೈನ್‌, ಮೋಹನ್‌, ಯೋಗರಾಜ್‌, ಸುರೇಶ್‌, ನಾರಾಯಣ್‌, ವೆಂಕಟೇಶ್‌ ಹಾಜರಿದ್ದರು.

ಟಾಪ್ ನ್ಯೂಸ್

Women-Mesure

Proposes: ಪುರುಷ ಟೈಲರ್‌ ಮಹಿಳೆಯರ ಬಟ್ಟೆ ಅಳತೆ ತೆಗೆದುಕೊಳ್ಳುವಂತಿಲ್ಲ: ಮಹಿಳಾ ಆಯೋಗ

1-qweeqw

Lucky car; ಅದೃಷ್ಟ ತಂದ ಕಾರಿನ ಸಮಾಧಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ 1,500 ಜನರು!!

1-qweewqe

TV Actor; 35 ನೇ ವಯಸ್ಸಿನಲ್ಲೆ ಜನಪ್ರಿಯ ಕಿರುತೆರೆ ನಟ ನಿತಿನ್ ಚೌಹಾಣ್ ನಿಧ*ನ

1-ewewqe

Deve Gowda; ನನಗೀಗ ವಯಸ್ಸು 92.. ಮೊಮ್ಮಗ ಗೆದ್ದ ನಂತರ ಮನೆಯಲ್ಲಿ ಮಲಗುವುದಿಲ್ಲ..

KL Rahul and Athiya Shetty to welcome their first child in 2025

Our beautiful blessing..; ಚೊಚ್ಚಲ ಮಗುವಿನ ಖುಷಿ ಹಂಚಿಕೊಂಡ ರಾಹುಲ್‌ – ಅಥಿಯಾ ಶೆಟ್ಟಿ

supreem

Supreme Court; ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್

BGT Series: Indians Should not forget the battle of Pujara at the Gabba

BGT Series: ಚೇತೇಶ್ವರ ಪೂಜಾರ ಅಂದು ತಿಂದ ಪೆಟ್ಟಿನ ನೋವು ಭಾರತೀಯರು ಮರೆಯುವುದುಂಟೇ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-kollegala

Kollegala: ಕಲುಷಿತ ನೀರು ಸೇವಿಸಿ ನಾಲ್ವರು ಆಸ್ಪತ್ರೆಗೆ ದಾಖಲು

Elephanat-1

Chamarajanagara: ವಕ್ರದಂತ ಹೊಂದಿದ್ದ ಕಾಡಾನೆ ಸ್ವಾಭಾವಿಕ ಸಾವು

Gundlupete: ನಿಯಂತ್ರಣ ತಪ್ಪಿ ಬೈಕ್‌ನಿಂದ ಬಿದ್ದ ಸವಾರ ಸಾವು

Gundlupete: ನಿಯಂತ್ರಣ ತಪ್ಪಿ ಬೈಕ್‌ನಿಂದ ಬಿದ್ದ ಸವಾರ ಸಾವು

Kollegala: ಬೆಂಗಳೂರಿನಿಂದ ತಮಿಳುನಾಡಿಗೆ ತಿಮಿಂಗಿಲದ ವಾಂತಿ ಸಾಗಾಟ… ಇಬ್ಬರ ಬಂಧನ

Kollegala: ಬೆಂಗಳೂರಿನಿಂದ ತಮಿಳುನಾಡಿಗೆ ತಿಮಿಂಗಿಲದ ವಾಂತಿ ಸಾಗಾಟ… ಇಬ್ಬರ ಬಂಧನ

5

Gundlupete: ಎರಡು ಬೈಕ್ ಗಳ ನಡುವೆ ಅಪಘಾತ; ಇಬ್ಬರು ಸಾವು

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

byndoor

Udupi: ಬೈಕಿಗೆ ಕಾರು ಢಿಕ್ಕಿ; ಸವಾರನಿಗೆ ಗಾಯ

dw

Puttur: ಕೆರೆಗೆ ಬಿದ್ದು ವ್ಯಕ್ತಿ ಸಾವು

Women-Mesure

Proposes: ಪುರುಷ ಟೈಲರ್‌ ಮಹಿಳೆಯರ ಬಟ್ಟೆ ಅಳತೆ ತೆಗೆದುಕೊಳ್ಳುವಂತಿಲ್ಲ: ಮಹಿಳಾ ಆಯೋಗ

1-qweeqw

Lucky car; ಅದೃಷ್ಟ ತಂದ ಕಾರಿನ ಸಮಾಧಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ 1,500 ಜನರು!!

1-qweewqe

TV Actor; 35 ನೇ ವಯಸ್ಸಿನಲ್ಲೆ ಜನಪ್ರಿಯ ಕಿರುತೆರೆ ನಟ ನಿತಿನ್ ಚೌಹಾಣ್ ನಿಧ*ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.