ಹಿಜಾಬ್‌ಗ ನಿರಾಕರಣೆ ಖಂಡಿಸಿ ಪ್ರತಿಭಟನೆ
Team Udayavani, Feb 8, 2022, 1:10 PM IST
ಚಾಮರಾಜನಗರ: ಕಾಲೇಜುಗಳಲ್ಲಿ ವಿದ್ಯಾರ್ಥಿನಿಯರಿಗೆ ಹಿಜಾಬ್ (ಶಿರವಸ್ತ್ರ) ಧರಿಸಲು ಅವಕಾಶ ನಿರಾಕರಣೆ ಖಂಡಿಸಿ ಜಿಲ್ಲಾ ಮಹಿಳಾ ಒಕ್ಕೂಟದ ವತಿಯಿಂದ ಮುಸ್ಲಿಂವಿದ್ಯಾರ್ಥಿನಿಯರು, ಮಹಿಳೆಯರು ತಮ್ಮ ಮಕ್ಕಳೊಂದಿಗೆ ನಗರದಲ್ಲಿ ಸೋಮವಾರ ಬೃಹತ್ ಪ್ರತಿಭಟನೆ ನಡೆಸಿದರು.
ನಗರದ ಲಾರಿ ನಿಲ್ದಾಣದಲ್ಲಿ ಸಮಾವೇಶಗೊಂಡ ಪ್ರತಿಭಟನಾನಿರತರು, ಅಲ್ಲಿಂದ ಮೆರವಣಿಗೆಹೊರಟು ಡೀವಿಯೇಷನ್ ರಸ್ತೆ, ಭುವನೇಶ್ವರಿ ವೃತ್ತ, ಬಿ.ರಾಚಯ್ಯ ಜೋಡಿ ರಸ್ತೆ ಮೂಲಕ ಜಿಲ್ಲಾಡಳಿತ ಭವನಕ್ಕೆ ತೆರಳಿ ಕೆಲ ಕಾಲ ಪ್ರತಿಭಟಿಸಿದರು. ಬಳಿಕಹೆಚ್ಚುವರಿ ಜಿಲ್ಲಾಧಿಕಾರಿ ಕಾತ್ಯಾಯಿನಿದೇವಿ ಅವರಿಗೆ ಮನವಿ ಸಲ್ಲಿಸಿದರು.
ಪದವಿಪೂರ್ವ ಮತ್ತು ಪದವಿ ಕಾಲೇಜುಗಳಲ್ಲಿ ಹೆಣ್ಣು ಮಕ್ಕಳಿಗೆ ಸಮವಸ್ತ್ರದ ಜೊತೆಗೆ ಅದೇ ಬಣ್ಣದ ಶಿರವಸ್ತ್ರ ಧರಿಸಲು ಅನುಮತಿ ನೀಡಬೇಕು. ಪದವಿಪೂರ್ವ ಶಿಕ್ಷಣ ಇಲಾಖೆಯ 2021-22 ರಮಾರ್ಗಸೂಚಿಯ ಅನುಸಾರವಾಗಿ ಸಮವಸ್ತ್ರಕಡ್ಡಾಯವಾಗಿರುವುದಿಲ್ಲ. ಸಮವಸ್ತ್ರವನ್ನುಆಯಾಯ ಕಾಲೇಜಿನ ಆಡಳಿತ ಮಂಡಳಿ ಅಥವಾ ಪ್ರಾಂಶುಪಾಲರು ಕಡ್ಡಾಯಗೊಳಿದರೆ ಕಾನೂನು ಬಾಹಿರವೆಂದು ಉಲ್ಲೇಖೀಸಿ, ಸಮವಸ್ತ್ರ ಕಡ್ಡಾಯಗೊಳಿಸಿದಲ್ಲಿ ಗಂಭೀರವಾಗಿ ಪರಿಗಣಿಸುವಸೂಚನೆಯನ್ನು ಸಹ ನೀಡಲಾಗಿತ್ತು. ಅದರೆ ಉಡುಪಿ ಪದವಿಪೂರ್ವ ಕಾಲೇಜಿನಲ್ಲಿ ಸಮವಸ್ತ್ರದ ನೆಪವನ್ನಿಟ್ಟುಕೊಂಡು ಮುಸ್ಲಿಂ ವಿದ್ಯಾರ್ಥಿನಿಯರ ಸಮವಸ್ತ್ರದ ಜೊತೆ ಶಿರವಸ್ತ್ರ ಧರಿಸಿದ ಏಕೈಕಕಾರಣಕ್ಕಾಗಿ ಸುಮಾರು ಒಂದು ತಿಂಗಳಿಂದ ತರಗತಿ ನಿರ್ಬಂಧಿಸಲಾಗಿದೆ.ಅ ಲ್ಲದೆ ಕುಂದಾಪುರ ಸರ್ಕಾರಿಕಾಲೇಜಿನಲ್ಲೂ ಪ್ರಾಂಶುಪಾಲರು ಕಳೆದ ಹಲವುದಿನಗಳಿಂದ ಹಿಜಾಜ್ ಧರಿಸಿದ ವಿದ್ಯಾರ್ಥಿನಿಯರನ್ನುಗೇಟಿನ ಹೊರ ಹಾಕಿ ತರಗತಿಗೆ ಅವಕಾಶ ನೀಡದೆ ಸುಡು ಬಿಸಿಲಿನ ಬೇಗೆಯಲ್ಲಿ ನಿಲ್ಲುವಂತೆ ಅಮಾನವೀಯವಾಗಿ ನಡೆದುಕೊಂಡಿದ್ದಾರೆ ಎಂದು ಪ್ರತಿಭಟನಾನಿರತರು ಆರೋಪಿಸಿದರು.
ಕಾಲೇಜುಗಳಲ್ಲಿ ಸಮವಸ್ತ್ರ ಕಡ್ಡಾಯಗೊಳಿಸಿದರೆ ಮುಸ್ಲಿಂ ಹೆಣ್ಣುಮಕ್ಕಳಿಗೆ ಸಮವಸ್ತ್ರದ ಭಾಗವಾಗಿರುವ ಶಾಲನ್ನು ಬಳಸಿ ಶಿರವಸ್ತ್ರ ಧರಿಸಲು ಅವಕಾಶ ನೀಡಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಬಿ.ಬಿ.ಅಯೀಷಾ, ಸುಮೀಯಾ, ಅಸ್ಮಾ, ಫರ್ಹೀನ್ ತಾಜ್, ತೌಸೀಯಬಾನು, ಹಸೀಬಾ, ರೇಷ್ಮಾ, ಅತೀಕಾ, ಹಸೀನಾ ಬೇಗಂ ಸೇರಿದಂತೆ ಒಂದು ಸಾವಿರಕ್ಕೂ ಹೆಚ್ಚು ಮಹಿಳೆಯರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್ ಡಿಕ್ಕಿ: ಮೊಪೆಡ್ ಸವಾರ ಸಾವು
Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ
Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ
Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು
Minister K.J. George: ಒಂದೇ ದಿನದಲ್ಲಿ 2500 ಲೈನ್‌ಮ್ಯಾನ್ ನೇಮಕ ಸಂದರ್ಶನ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.