Homa Havana: ಗ್ರಾಪಂ ಕಚೇರಿಯಲ್ಲಿ ಹೋಮ, ಹವನ ಸದಸ್ಯರಲ್ಲದ ಪತಿ ಪತ್ನಿಯರೂ ಭಾಗಿ!


Team Udayavani, Aug 15, 2023, 4:49 PM IST

Homa Havana: ಗ್ರಾಪಂ ಕಚೇರಿಯಲ್ಲಿ ಹೋಮ, ಹವನ ಸದಸ್ಯರಲ್ಲದ ಪತಿ ಪತ್ನಿಯರೂ ಭಾಗಿ!

ಚಾಮರಾಜನಗರ: ಗ್ರಾಮ ಪಂಚಾಯ್ತಿ ನೂತನ ಅಧ್ಯಕ್ಷೆ-ಉಪಾಧ್ಯಕ್ಷರು ತಮ್ಮ ಸ್ವಂತ ಮನೆಯ ಗೃಹಪ್ರವೇಶದ ರೀತಿಯಲ್ಲಿ ಪತಿ ಪತ್ನಿ ಜತೆ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಹೋಮ ಹವನ ಮಾಡಿದ್ದಾರೆ ಎಂದು ಪುಣಜನೂರು ಗ್ರಾಪಂ ಆರು ಮಂದಿ ಸದಸ್ಯರು ಜಿಲ್ಲಾಧಿಕಾರಿ ಹಾಗೂ ಜಿಪಂ ಸಿಇಓಗೆ ದೂರು ನೀಡಿದ್ದಾರೆ.

ತಾಲೂಕಿನ ಕಾಡಂಚಿನಲ್ಲಿರುವ ಪುಣಜನೂರು ಗ್ರಾಪಂ ಅಧ್ಯಕ್ಷೆ ಶಿವಿಬಾಯಿ ಮತ್ತು ಆಕೆ ಪತಿ ಗಣೇಶ ನಾಯ್ಕ, ಗ್ರಾಪಂ ಉಪಾಧ್ಯಕ್ಷ ರಾಚಯ್ಯ ಹಾಗೂ ಅವರ ಪತ್ನಿ ಮಂಗಳಮ್ಮ, ಸದಸ್ಯೆ ಗೀತಾ ಮತ್ತು ಅವರ ಪತಿ ಸಿದ್ದರಾಜು ಈ ಮೂವರು ಸಹ ಸದಸ್ಯರಲ್ಲದ ತಮ್ಮ ಪತಿ ಪತ್ನಿಯ ಜೊತೆ ಸೇರಿ ಸೋಮವಾರ ಬೆಳಗ್ಗೆ 7 ಗಂಟೆಯ ಸಮಯದಲ್ಲಿ ಕಚೇರಿಯಲ್ಲಿ ಹೋಮ ಹವನ ಮಾಡಿದ್ದಾರೆ. ಸರ್ಕಾರಿ ನಿಯಮಗಳ ಪ್ರಕಾರ ಸರ್ಕಾರಿ ಕಟ್ಟಡಗಳಲ್ಲಿ ಹೋಮ ಹವನ ನಡೆಸುವಂತಿಲ್ಲ. ಜತೆಗೆ ಸದಸ್ಯರ ಪತಿ ಪತ್ನಿ ಸದಸ್ಯರಲ್ಲದಿದ್ದರೂ ಭಾಗವಹಿಸುವಂತಿಲ್ಲ ಎಂದು ಆರೋಪಿಸಿ ದೂರು ನೀಡಲಾಗಿದೆ. ಈ ಬಗ್ಗೆ ಗ್ರಾಪಂ ಪಿಡಿಒ ಸಿದ್ದರಾಜು ಅವರನ್ನು ಪ್ರಶ್ನೆ ಮಾಡಿದರೆ, ನನಗೇನೂ ಗೊತ್ತಿಲ್ಲ. ಅಧ್ಯಕ್ಷರ ಪತಿ ಕಚೇರಿಯ ಕೀ ಕೊಡಿ ಎಂದು ಕೇಳಿದ್ದರು. ಹೀಗಾಗಿ ಅವರಿಗೆ ಕೊಟ್ಟಿದ್ದೆ ಎಂದು ಉಡಾಫೆ ಉತ್ತರ ನೀಡುತ್ತಿದ್ದಾರೆ. ಬೆಳಗ್ಗೆ 7 ಗಂಟೆಯಿಂದ ಸುಮಾರು 1 ಗಂಟೆಗೂ ಹೆಚ್ಚು ಕಾಲ ಪುರೋಹಿತರನ್ನು  ಆಹ್ವಾನಿಸಿ, ಕಚೇರಿಯ ಹಾಲ್‌ನಲ್ಲಿಯೇ ಹೋಮ ಕುಂಡ ಇಟ್ಟು ಮೂವರು ಸಹ  ಪತಿ ಪತ್ನಿ ಸಮೇತ ಭಾಗವಹಿಸಿದ್ದಾರೆ. ಸರ್ಕಾರಿ ಕಚೇರಿಯ ಕರ್ತವ್ಯದ ವೇಳೆಯನ್ನು ಹೊರತುಪಡಿಸಿ, ಅಕ್ರಮವಾಗಿ ಕಚೇರಿ ಪ್ರವೇಶ ಮಾಡಿ, ಬೆಳಗ್ಗೆಯೇ ಹೋಮ ಹವನ ಮಾಡಿದ್ದಾರೆ. ಸಂವಿಧಾನದ ಪ್ರಕಾರ ಸರ್ಕಾರಿ ಕಚೇರಿಯಲ್ಲಿ ಧಾರ್ಮಿಕ ಕಾರ್ಯಗಳನ್ನು ನಡೆಸುವಂತಿಲ್ಲ ಎಂದು ಗ್ರಾಪಂ ಸದಸ್ಯ ಚಂದ್ರಶೇಖರ್‌ ದೂರಿದ್ದಾರೆ.

ಈ ಮೂವರು ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಸದಸ್ಯೆ ವಿರುದ್ದ  ಪ್ರಕರಣ ದಾಖಲು ಮಾಡಿ, ಸದಸ್ಯತ್ವವನ್ನು ರದ್ದುಪಡಿಸಬೇಕೆಂದು ಪುಣಜನೂರು ಗ್ರಾಪಂ ಸದಸ್ಯರಾದ ಚಂದ್ರಶೇಖರ್‌, ಸಬೀನಾಬಾನು, ಪಿ.ನಾಗನಾಯಕ, ಕುಮಾರ್‌ ಸುಶೀಲಾ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯಿತಿ ಸಿಇಒಗೆ ಮನವಿ ಸಲ್ಲಿಸಿ ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

New Zealand: ತವರಿನಂಗಳದಲ್ಲೇ ಟೆಸ್ಟ್‌ ನಿವೃತ್ತಿಗೆ ಸೌಥಿ ನಿರ್ಧಾರ

New Zealand: ತವರಿನಂಗಳದಲ್ಲೇ ಟೆಸ್ಟ್‌ ನಿವೃತ್ತಿಗೆ ಸೌಥಿ ನಿರ್ಧಾರ

SMG-Shikaripura

Shivamogga: ಆಸ್ಪತ್ರೆಯಲ್ಲಿನ ತೆರೆದ ನೀರಿನ ತೊಟ್ಟಿಗೆ ಬಿದ್ದು ಮಗು ಮೃತ್ಯು!

1-aaccc

PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

HDK (4)

50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10

Kollegala: ಎತ್ತಿನಗಾಡಿಗೆ ಸಾಮ್ರಾಟ್ ಟರ್ಬೇ ವಾಹನ ಡಿಕ್ಕಿ; ಎತ್ತು ಸಾವು

9-kollegala

Kollegala: ಕಲುಷಿತ ನೀರು ಸೇವಿಸಿ ನಾಲ್ವರು ಆಸ್ಪತ್ರೆಗೆ ದಾಖಲು

Elephanat-1

Chamarajanagara: ವಕ್ರದಂತ ಹೊಂದಿದ್ದ ಕಾಡಾನೆ ಸ್ವಾಭಾವಿಕ ಸಾವು

Gundlupete: ನಿಯಂತ್ರಣ ತಪ್ಪಿ ಬೈಕ್‌ನಿಂದ ಬಿದ್ದ ಸವಾರ ಸಾವು

Gundlupete: ನಿಯಂತ್ರಣ ತಪ್ಪಿ ಬೈಕ್‌ನಿಂದ ಬಿದ್ದ ಸವಾರ ಸಾವು

Kollegala: ಬೆಂಗಳೂರಿನಿಂದ ತಮಿಳುನಾಡಿಗೆ ತಿಮಿಂಗಿಲದ ವಾಂತಿ ಸಾಗಾಟ… ಇಬ್ಬರ ಬಂಧನ

Kollegala: ಬೆಂಗಳೂರಿನಿಂದ ತಮಿಳುನಾಡಿಗೆ ತಿಮಿಂಗಿಲದ ವಾಂತಿ ಸಾಗಾಟ… ಇಬ್ಬರ ಬಂಧನ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

New Zealand: ತವರಿನಂಗಳದಲ್ಲೇ ಟೆಸ್ಟ್‌ ನಿವೃತ್ತಿಗೆ ಸೌಥಿ ನಿರ್ಧಾರ

New Zealand: ತವರಿನಂಗಳದಲ್ಲೇ ಟೆಸ್ಟ್‌ ನಿವೃತ್ತಿಗೆ ಸೌಥಿ ನಿರ್ಧಾರ

Suilla

Punjalkatte: ಬೈಕ್‌ ಢಿಕ್ಕಿ; ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು

SMG-Shikaripura

Shivamogga: ಆಸ್ಪತ್ರೆಯಲ್ಲಿನ ತೆರೆದ ನೀರಿನ ತೊಟ್ಟಿಗೆ ಬಿದ್ದು ಮಗು ಮೃತ್ಯು!

Padubidri-Police

Padubidri: ನವವಿವಾಹಿತೆಗೆ ಕಿರುಕುಳ; ಪತಿಯ ಮನೆಮಂದಿ ವಿರುದ್ಧ ದೂರು

POLICE-5

Karkala: ಗೋವಾ ಮದ್ಯ ಅಕ್ರಮ ದಾಸ್ತಾನು ಪ್ರಕರಣ; ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.