ಸೂರಿಲ್ಲದ 24 ಸಾವಿರ ಕುಟುಂಬಕ್ಕೆ ಮನೆ ಭಾಗ್ಯ
Team Udayavani, Jul 3, 2022, 3:31 PM IST
ಚಾಮರಾಜನಗರ: ಜಿಲ್ಲೆಯಲ್ಲಿರುವ ಕೊಳಚೆ ಪ್ರದೇಶಗಳು, ಪೌರಕಾರ್ಮಿಕರ ಕಾಲೋನಿಗಳ ಅಭಿವೃದ್ಧಿಗೆ ಕ್ರಮವಹಿಸಲಾಗುವುದು ಎಂದು ವಸತಿ, ಮೂಲ ಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಹೇಳಿದರು.
ನಗರದ ಸರ್ಕಾರಿ ಪದವಿಪೂರ್ವ ಕಾಲೇಜು ಮೈದಾನದಲ್ಲಿ ವಸತಿ ಇಲಾಖೆ, ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ಶನಿವಾರ ಹಮ್ಮಿಕೊಂಡಿದ್ದ ಚಾಮರಾಜನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಕರಿನಂಜನಪುರ ರಸ್ತೆ ಪೌರಕಾರ್ಮಿಕರ ಕಾಲೋನಿಯ ನಿವಾಸಿಗಳಿಗೆ ಹಕ್ಕುಪತ್ರ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ 21 ಕೊಳಚೆ ಪ್ರದೇಶಗಳಿದ್ದು, 3 ಸರ್ಕಾರಿ ಸ್ಥಳದಲ್ಲಿದೆ. ಸೂರಿಲ್ಲದವರಿಗೆ ಸೂರು ಕಲ್ಪಿಸುವ ಉದ್ದೇಶದಿಂದ ರಾಜ್ಯದಲ್ಲಿ 24 ಸಾವಿರ ಕುಟುಂಬಗಳನ್ನು ಗುರುತಿಸಿ, ಅವರಿಗೆ ಮನೆ ನಿರ್ಮಾಣ ಮಾಡಿಕೊಡಲು ಸರ್ಕಾರ ಮುಂದಾಗುತ್ತಿದೆ ಎಂದು ತಿಳಿಸಿದರು.
ರೈತರು, ಜೀತಮುಕ್ತರೊಂದಿಗೆ ಸಭೆ: ಜಿಲ್ಲೆಯ ಉಳಿದ ಕೊಳಚೆ ಪ್ರದೇಶಗಳಲ್ಲಿಯೂ ಮುಂಬರುವ ದಿನಗಳಲ್ಲಿ ಕುಡಿಯುವ ನೀರು, ರಸ್ತೆ, ಒಳಚರಂಡಿ ವ್ಯವಸ್ಥೆ ಕಲ್ಪಿಸಲಾಗುವುದು. ವಸತಿ, ನಿವೇಶನ ರಹಿತರಿಗೆ ಸೂರು ವ್ಯವಸ್ಥೆ ಮಾಡಲಾಗುವುದು. ರೈತರು, ಜೀತಮುಕ್ತರು ಹಾಗೂ ಇತರರ ಸಂಬಂಧ ಸಭೆ ಕರೆಯಲಾಗುತ್ತಿದೆ. ಪೌರಕಾರ್ಮಿಕರ ಸಮಸ್ಯೆಗಳನ್ನು ಸಹ ಚರ್ಚಿಸಲಾಗುವುದು ಎಂದು ವಿವರಿಸಿದರು.
ಹಕ್ಕುಪತ್ರ ವಿತರಣೆ: ಕರಿನಂಜನಪುರ ರಸ್ತೆಯಲ್ಲಿರುವ 88 ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ ಮಾಡಲಾಗುತ್ತಿದೆ. ಹಲವು ವರ್ಷಗಳಿಂದ ತಮ್ಮ ಮನೆಗಳಿಗೆ ದಾಖಲೆ ಇಲ್ಲದೇ ಅತಂತ್ರ ಸ್ಥಿತಿಯಲ್ಲಿದ್ದ ಈ ಕುಟುಂಬಗಳಿಗೆ ನಮ್ಮ ಸರ್ಕಾರ ಕೈಗೊಂಡ ಕ್ರಮಗಳಿಂದ ಹಕ್ಕುಪತ್ರ ದೊರೆಯುತ್ತಿದೆ ಎಂದು ವಿವರಿಸಿದರು.
ಕಡಿಮೆ ಜಾಗದಲ್ಲಿ ಎರಡ್ಮೂರು ಕುಟುಂಬ ವಾಸ: ಮಹಿಳೆಯರ ಹೆಸರಿನಲ್ಲೇ ಹಕ್ಕುಪತ್ರ ನೀಡಬೇಕು. ಅವರು ಜವಾಬ್ದಾರಿಯಿಂದ ತಮ್ಮ ಸ್ವತ್ತನ್ನು ರಕ್ಷಿಸಿಕೊಳ್ಳುತ್ತಾರೆ. ಇಂದಿಗೂ ಕಡಿಮೆ ಜಾಗದಲ್ಲಿ ಪೌರಕಾರ್ಮಿಕರ ಎರಡು ಮೂರು ಕುಟುಂಬಗಳು ವಾಸಮಾಡುತ್ತಿವೆ ಎಂದರೆ ತುಂಬಾ ನೋವಿನ ಸಂಗತಿಯಾಗಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ನಗರದ ಕರಿನಂಜನಪುರ ರಸ್ತೆ ಪೌರ ಕಾರ್ಮಿಕರ ಕಾಲೋನಿಯ ನಿವಾಸಿಗಳಿಗೆ ಹಕ್ಕುಪತ್ರಗಳನ್ನು ವಿತರಿಸಲಾಯಿತು.
ಶಾಸಕರಾದ ಸಿ.ಪುಟ್ಟರಂಗಶೆಟ್ಟಿ, ಎನ್.ಮಹೇಶ್, ಸಿ.ಎಸ್.ನಿರಂಜನ್‌ಕುಮಾರ್, ಕೇಂದ್ರ ಪರಿಹಾರ ಸಮಿತಿ ಅಧ್ಯಕ್ಷ ಎಂ.ರಾಮಚಂದ್ರ, ನಗರಸಭಾಧ್ಯಕ್ಷೆ ಆಶಾ ನಟರಾಜು, ಸದಸ್ಯ ಎಂ.ಮಹೇಶ್, ಕರ್ನಾಟಕ ಕೊಳಚೆ ನಿರ್ಮೂಲನಾ ಮಂಡಳಿಯ ನಿರ್ದೇಶಕ ನಾಗರಾಜ ಎಂ. ಬಿರಾದಾರ್, ನಗರಸಭೆ ಸದಸ್ಯರಾದ ಮನೋಜ್ ಪಟೇಲ್, ಚಂದ್ರು, ನಗರಸಭಾ ಆಯುಕ್ತ ಕರಿಬಸವಯ್ಯ, ಇತರರು ಉಪಸ್ಥಿತರಿದ್ದರು.
ಸಭೆ ಆರಂಭದಲ್ಲಿ ಪ್ರಾರ್ಥನೆ ಮಾಡಿದ ಪೌರಕಾರ್ಮಿಕರ ಸಮುದಾಯದ ವಿದ್ಯಾರ್ಥಿನಿಯನ್ನು ಸಚಿವ ವಿ.ಸೋಮಣ್ಣ ಅವರು ಹತ್ತಿರಕ್ಕೆ ಕರೆದು ಆತ್ಮೀಯವಾಗಿ ಮಾತನಾಡಿಸಿ, ಮೆಚ್ಚುಗೆ ವ್ಯಕ್ತಪಡಿಸಿದರು.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಗೆ ಬರುವ ಸರ್ಕಾರಿ ಜಾಗದಲ್ಲಿ ವಾಸಿಸುತ್ತಿರುವ ಪೌರಕಾರ್ಮಿಕರಿಗೆ ಮನೆ ನಿರ್ಮಾಣಕ್ಕೆ ನಮ್ಮ ಸರ್ಕಾರ ಕ್ರಮ ವಹಿಸಿದೆ. ಪೌರಕಾರ್ಮಿಕರನ್ನು ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ಹಲವು ಕಾರ್ಯಕ್ರಮಗಳನ್ನು ಸರ್ಕಾರ ಹಮ್ಮಿಕೊಂಡಿದೆ. ಬಡ ಕುಟುಂಬಗಳು ಮುಂದೆಯೂ ಬಡವರಾಗಿ ಉಳಿಯಬೇಕು ಎಂಬುದಿಲ್ಲ. ಅವರನ್ನು ಮುನ್ನೆಲೆಗೆ ತಂದು ಅಭಿವೃದ್ಧಿ ಪರ ಕೆಲಸಗಳನ್ನು ಮಾಡೋಣ. – ವಿ.ಸೋಮಣ್ಣ, ಜಿಲ್ಲಾ ಉಸ್ತುವಾರಿ ಸಚಿವ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ICC ಚಾಂಪಿಯನ್ಸ್ ಟ್ರೋಫಿ ಪಾಕಿಸ್ತಾನದಿಂದ ಸಂಪೂರ್ಣ ಸ್ಥಳಾಂತರ?: ಐಸಿಸಿ ಸಭೆಯಲ್ಲಿ ನಿರ್ಧಾರ
Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ
ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ವಿದ್ಯಾರ್ಥಿಗಳ ಬಸ್ ಪಲ್ಟಿ,ನಾಲ್ವರು ವಿದ್ಯಾರ್ಥಿಗಳಿಗೆ ಗಾಯ
Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್ ಅಮಾನತು
Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.