ಬಿಜೆಪಿ ಗೆದ್ದರೆ ವಾರ್ಡ್‌ಗಳ ಅಭಿವೃದ್ಧಿಗೆ ಒತ್ತು


Team Udayavani, Apr 26, 2023, 2:58 PM IST

ಬಿಜೆಪಿ ಗೆದ್ದರೆ ವಾರ್ಡ್‌ಗಳ ಅಭಿವೃದ್ಧಿಗೆ ಒತ್ತು

ಚಾಮರಾಜನಗರ: ಪಟ್ಟಣದ 31 ವಾರ್ಡ್‌ಗಳ ಅಭಿವೃದ್ಧಿಗೆ ವಿಶೇಷ ಯೋಜನೆ ತಂದು ಮತ್ತೂಂದು ಗೋವಿಂದರಾಜನಗರ ಮಾಡಲು ಮುಂದಾಗಿರುವ ಬಿಜೆಪಿ ಅಭ್ಯರ್ಥಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರನ್ನು ಗೆಲ್ಲಿಸಲು ಎಲ್ಲರೂ ಶ್ರಮಿಸೋಣ ಎಂದು ನಗರಸಭಾ ಅಧ್ಯಕ್ಷೆ ಸಿ.ಎಂ.ಆಶಾ ನಟರಾಜು ಮನವಿ ಮಾಡಿದರು.

ನಗರದ 16, 17,18 ಹಾಗೂ 19ನೇ ವಾಡ್‌ ìಗಳಲ್ಲಿ ಚುನಾವಣಾ ಪ್ರಚಾರಕ್ಕೆ ಸಂತೇಮರಹಳ್ಳಿ ವೃತ್ತದಲ್ಲಿರುವ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು. 15 ವರ್ಷಗಳಿಂದ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಕಾಂಗ್ರೆಸ್‌ ಶಾಸಕರು ಪಟ್ಟಣದ ಅಭಿವೃದ್ಧಿ ನಿರ್ಲಕ್ಷ್ಯ ವಹಿಸಿದ್ದಾರೆ. 15 ವರ್ಷಗಳಲ್ಲಿ ಅಧಿಕಾರ ಕೊಟ್ಟಿದ್ದೀರಿ. ಬಿಜೆಪಿಗೆ ಒಂದು ಬಾರಿ ಅವಕಾಶ ಕೊಡಿ. ಉಸ್ತುವಾರಿ ಸಚಿವರಾಗಿ ಜಿಲ್ಲೆಯ ಬಗ್ಗೆ ಹೆಚ್ಚು ಕಾಳಜಿ ಹೊಂದಿರುವ ಸೋಮಣ್ಣ ಅವರು, ಕ್ಷೇತ್ರವನ್ನು ಇನ್ನೂ ಹೆಚ್ಚಿನ ಅಭಿವೃದ್ಧಿ ಮಾಡುತ್ತಾರೆ ಎಂದು ಮನವಿ ಮಾಡಿದರು.

ಬಿಜೆಪಿ ದಲಿತರ ಪರ: ಮಧ್ಯಪ್ರದೇಶ ಸಂಸದ, ಮಾಜಿ ಸಚಿವ ಬಿಜೆಪಿ ಎಸ್‌ಟಿ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ ಲಾಲ್‌ಸಿಂಗ್‌ ಆರ್ಯ ಪ್ರಚಾರದಲ್ಲಿ ಭಾಗವಹಿಸಿ ಮಾತನಾಡಿ, ಬಿಜೆಪಿ ದಲಿತರ ಪರವಾಗಿದ್ದು, ಅಭಿವೃದ್ಧಿಯ ಬಗ್ಗೆ ಹೆಚ್ಚು ಒತ್ತು ನೀಡುತ್ತಿದೆ. ಬಿಜೆಪಿ ಸರ್ಕಾರ ಬಂದರೆ ಸಂವಿಧಾನ ಬದಲಾಯಿಸುತ್ತೇವೆ ಎಂಬ ಸುಳ್ಳು ಹೇಳಿಕೆ ನೀಡುತ್ತಿದೆ. ಕೇಂದ್ರ ಹಾಗೂ ರಾಜ್ಯದಲ್ಲಿರುವ ಬಿಜೆಪಿ ಡಬಲ್‌ ಎಂಜಿನ್‌ ಸರ್ಕಾರ ದಲಿತರ ಪರ ಯೋಜನೆಗಳನ್ನು ಜಾರಿ ಮಾಡಿ, ಅಭಿವೃದ್ಧಿಯತ್ತ ಸಾಗುತ್ತಿದೆ. ಮತ್ತೆ ಬಿಜೆಪಿ ಸರ್ಕಾರವನ್ನು ರಚನೆ ಮಾಡಲು ಮತ ನೀಡಬೇಕು ಎಂದು ಮನವಿ ಮಾಡಿದರು. ಬಳಿಕ ನಗರದ ವಿವಿಧ ಬಡಾವಣೆಗಳಿಗೆ ತೆರಳಿ ಮನೆ ಮನೆಗೆ ಕರಪತ್ರಗಳನ್ನು ಹಂಚುವ ಮೂಲಕ ಸೋಮಣ್ಣ ಪರ ಮತಯಾಚನೆ ಮಾಡಿದರು.

ಮುಖಂಡರಾದ ಅಮ್ಮನಪುರ ಮಲ್ಲೇಶ್‌, ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಾಗಶ್ರೀ ಪ್ರತಾಪ್‌, ಕಾಡಾ ಅಧ್ಯಕ್ಷ ನಿಜಗುಣರಾಜು, ಕೂಡ್ಲೂರು ಹನುಮಂತಶೆಟ್ಟಿ, ನಗರಸಭೆ ಮಾಜಿ ಅಧ್ಯಕ್ಷರಾದ ಮಹದೇವನಾಯಕ, ಸುರೇಶ್‌ನಾಯಕ, ಸದಸ್ಯರಾದ ಶಿವರಾಜು, ಮಂಜುನಾಥ್‌, ಗಾಯತ್ರಿ ಚಂದ್ರಶೇಖರ್‌, ಮಮತಾ ಬಾಲಸುಬ್ರಹ್ಮಣ್ಯ, ಕುಮುದಾ, ಶಿವಣ್ಣ, ನಟರಾಜು, ಬಸವರಾಜು, ಕೂಸಣ್ಣ, ಮತ್ತಿತರರು ಭಾಗವಹಿಸಿದ್ದರು.

ಟಾಪ್ ನ್ಯೂಸ್

Laxmi-Heebalakar1

ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್‌ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ

Kalaburagi-Acci

Kalaburagi: ಟಿಟಿ ಟಯರ್‌ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!

Jagadambika-Pal-(JPC)

Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

Munirtahana–Egg

Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-

Gundlupete: ಬೋನಿಗೆ ಬಿದ್ದ ಗಂಡು ಚಿರತೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

6-gundlupete

Gundlupete: ಬೈಕ್ ಗೆ ಗುದ್ದಿದ ಪಿಕ್ ಅಪ್; ಸವಾರರ ಕಾಲು ಮುರಿತ

Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ

Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ

Gundlupet Bus Stand: ಮೂಲ ಸೌಲಭ್ಯ ವಂಚಿತ ಬೇಗೂರು ಬಸ್‌ ನಿಲ್ದಾಣ

Gundlupet Bus Stand: ಮೂಲ ಸೌಲಭ್ಯ ವಂಚಿತ ಬೇಗೂರು ಬಸ್‌ ನಿಲ್ದಾಣ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Laxmi-Heebalakar1

ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್‌ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ

6

Bantwal: ತುಂಬೆ ಜಂಕ್ಷನ್‌; ಸರಣಿ ಅಪಘಾತ

Untitled-1

Kasaragod ಅಪರಾಧ ಸುದ್ದಿಗಳು: ವಿದ್ಯಾರ್ಥಿನಿಯರಿಗೆ ಕಿರುಕುಳ; ಕೇಸು ದಾಖಲು

Brahmavar

Brahmavar: ಆರೂರು; ಬೆಂಕಿ ತಗಲಿ ಗಾಯಗೊಂಡಿದ್ದ ಮಹಿಳೆ ಸಾವು

Kalaburagi-Acci

Kalaburagi: ಟಿಟಿ ಟಯರ್‌ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.