ಕಾಮಗಾರಿಯಲ್ಲಿ ಲೋಪ ಕಂಡರೆ ಕ್ರಮ
ಗುತ್ತಿಗೆದಾರರಿಗೆ ಎಚ್ಚರಿಕೆ ನೀಡಿದ ಶಾಸಕ
Team Udayavani, Jul 28, 2019, 1:12 PM IST
ಹನೂರು: ಕಾಮಗಾರಿಗಳು ಗುಣಮಟ್ಟದಿಂದ ಕೂಡಿರಬೇಕು. ಒಂದೊಮ್ಮೆ ಯಾವುದೇ ಲೋಪ ದೋಷ ಕಂಡುಬಂದಲ್ಲಿ ಮುಲಾಜಿಲ್ಲದೆ ಕಾನೂನಿನ ಚೌಕಟ್ಟಿನಡಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ಆರ್.ನರೇಂದ್ರ ತಿಳಿಸಿದರು. ತಾಲೂಕಿನ ಪಿ.ಜಿ.ಪಾಳ್ಯ ಗ್ರಾಮದ ಆದಿಜಾಂಬವ ಬಡಾವಣೆಗೆ 20 ಲಕ್ಷರೂ. ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.
ಸೂಕ್ತ ಕ್ರಮ: ಸಾರ್ವಜನಿಕರಿಗೆ ಸಮರ್ಪಕ ಮೂಲ ಸೌಕರ್ಯ ಕಲ್ಪಿಸಬೇಕು ಎಂಬ ಉದ್ದೇಶದಿಂದ ಬಡಾವಣೆಗಳಿಗೆ ಕಾಂಕ್ರಿಟ್ ರಸ್ತೆ ಮತ್ತು ಚರಂಡಿ ನಿರ್ಮಾಣಕ್ಕೆ ಅನುದಾನ ನೀಡಲಾಗುತ್ತಿದೆ. ನಿರ್ಮಾಣಗೊಂಡ ರಸ್ತೆಗಳು ಕನಿಷ್ಟ ಮುಂದಿನ 20 ವರ್ಷಗಳ ದೀರ್ಘಾ ವಧಿಯವರೆಗೆ ಬಾಳಿಕೆಗೆ ಬರುವಂತಿರಬೇಕು. ಒಂದೊಮ್ಮೆ ಯಾವುದೇ ಲೋಪದೋಷ ಕಂಡುಬಂದಲ್ಲಿ ಗುತ್ತಿಗೆದಾರರ ವಿರುದ್ಧ ಸೂಕ್ತ ಕ್ರಮಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
ಮುಂದಿನ ದಿನಗಳಲ್ಲಿ ಅನುದಾನ: ಇದೇ ವೇಳೆ ಗ್ರಾಮಸ್ಥರು ಇದೀಗ ನೀಡಿರುವ ಅನುದಾನದಲ್ಲಿ ಒಂದು ಬೀದಿಗೆ ಮಾತ್ರ ಕಾಂಕ್ರೀಟ್ ರಸ್ತೆ ಮತ್ತು ಚರಂಡಿ ನಿರ್ಮಾಣ ಮಾಡಲಾಗುತ್ತಿದೆ. ಪಕ್ಕದ ಬೀದಿಯಲ್ಲಿ ಒಂದೆಡೆ ಚರಂಡಿ ಮಾತ್ರ ನಿರ್ಮಾಣ ಮಾಡಲಾಗಿದ್ದು ಆ ಬೀದಿಗೂ ರಸ್ತೆ ಮತ್ತು ಮತ್ತೂಂದು ಕಡೆ ಚರಂಡಿ ನಿರ್ಮಾಣ ಮಾಡಿಕೊಡುವಂತೆ ಮನವಿ ಮಾಡಿದರು. ಇದಕ್ಕೆ ಸ್ಪಂದಿಸಿದ ಶಾಸಕರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿ ಮುಂದಿನ ದಿನಗಳಲ್ಲಿ ಅನುದಾನ ನೀಡಲಾಗುವುದು ಎಂದು ಭರವಸೆ ನೀಡಿದರು. ಈ ಸಂದರ್ಭದಲ್ಲಿ ಜಿಪಂ ಅಧ್ಯಕ್ಷೆ ಶಿವಮ್ಮ ಕೃಷ್ಣ, ಸದಸ್ಯೆ ಮರುಗದ ಮಣಿ, ತಾಪಂ ಸದಸ್ಯ ರಾಜೇಂದ್ರ, ಸದಸ್ಯೆ ಶಿವಮ್ಮ, ಮುಖಂಡರಾದ ಪಾಳ್ಯ ಕೃಷ್ಣ, ಲೊಕ್ಕನಹಳ್ಳಿ ರವಿ, ಗುರುಮಲ್ಲಪ್ಪ, ಗುತ್ತಿಗೆದಾರ ಫಯಾಜ್‌ಖಾನ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gundlupete: ಅಕ್ರಮವಾಗಿ 3 ಕೆ.ಜಿ. 100 ಗ್ರಾಂ ಗಾಂಜಾ ಸಾಗಣೆ: ಬಂಧನ
Chamarajnagar: ಸಾಮಾಜಿಕ ಬಹಿಷ್ಕಾರ: ಗ್ರಾಮಸ್ಥರ ಸಭೆ ನಡೆಸಿದ ಅಧಿಕಾರಿಗಳು
Chamarajanagar: ದಲಿತರಿಗೆ ಬಾಡಿಗೆ ಮನೆ ನೀಡಿದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ
Gundlupete: ವಿದ್ಯುತ್ ಕಂಬಕ್ಕೆ ಗುದ್ದಿದ್ದ ಕಾರು: ಸ್ಥಳದಲ್ಲೇ ಇಬ್ಬರು ಸಾವು
Bandipur: ಸಫಾರಿ ವೇಳೆ ನಾಲ್ಕು ಮರಿ ಜೊತೆ ತಾಯಿ ಹುಲಿ ದರ್ಶನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ
Mollywood: ʼಮಾರ್ಕೊʼ ಬಳಿಕ ಮೋಹನ್ ಲಾಲ್ ನಿರ್ದೇಶನದ ʼಬರೋಜ್ʼ ಚಿತ್ರಕ್ಕೂ ಪೈರಸಿ ಕಾಟ
BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್ ಗೆ ಆಹ್ವಾನವಿಲ್ಲ! ದಿಗ್ಗಜನ ಬೇಸರ
Gundlupete: ಅಕ್ರಮವಾಗಿ 3 ಕೆ.ಜಿ. 100 ಗ್ರಾಂ ಗಾಂಜಾ ಸಾಗಣೆ: ಬಂಧನ
Odisha: ಕಾರಿಗೆ ಟ್ರಕ್ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.