Chamarajanagara: 98 ಕೋಟಿ 52 ಲಕ್ಷ ರೂ ಮೌಲ್ಯದ ಅಕ್ರಮ ಮದ್ಯ ಜಪ್ತಿ: ಪ್ರಕರಣ ದಾಖಲು
Team Udayavani, Apr 3, 2024, 10:59 PM IST
ಚಾಮರಾಜನಗರ: ಚಾಮರಾಜನಗರ ಲೋಕಸಭಾ ಕ್ಷೇತದ ವ್ಯಾಪ್ತಿಗೆ ಒಳಪಡುವ ನಂಜನಗೂಡು ತಾಲ್ಲೂಕಿನ ಹಿಮ್ಮಾವು ಗ್ರಾಮದ ತಾಂಡ್ಯ ಕೈಗಾರಿಕಾ ಪ್ರದೇಶದಲ್ಲಿರುವ ಮೆ. ಯುನೈಟೆಡ್ ಬ್ರೀವರೀಸ್ ಲಿಮಿಟೆಡ್‌ನ ಘಟಕದ ಮೇಲೆ ಜಿಲ್ಲಾ ಅಬಕಾರಿ ಆಯುಕ್ತರು, ಮೈಸೂರು ವಿಭಾಗದ ಅಬಕಾರಿ ಜಂಟಿ ಆಯುಕ್ತರೊಂದಿಗೆ ಕಾರ್ಯಾಚರಣೆ ನಡೆಸಿ ಒಟ್ಟಾರೆ 98 ಕೋಟಿ 52 ಲಕ್ಷ ರೂ. ಮೌಲ್ಯದ ಅಕ್ರಮ ಮದ್ಯವನ್ನು ಜಪ್ತಿ ಮಾಡಿ ಬ್ರೀವರಿ ಘಟಕದ ಮೇಲೆ ಪ್ರಕರಣವನ್ನು ದಾಖಲಿಸಿದ್ದಾರೆ.
ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿಗೆ ಬಂದ ಅನಾಮಧೇಯ ದೂರವಾಣಿ ಕರೆಯ ಮೇರೆಗೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಯವರು ನೀಡಿದ ಆದೇಶದನ್ವಯ ಬ್ರೀವರಿ ಘಟಕಕ್ಕೆ ಭೇಟಿ ನೀಡಿ ಘಟಕದ ದಾಖಲಾತಿಗಳಾದ ಲೆಕ್ಕದ ಪುಸ್ತಕದೊಂದಿಗೆ ಭೌತಿಕ ದಾಸ್ತಾನನ್ನು ಪರಿಶೀಲಿಸಿದಾಗ ಲೆಕ್ಕದ ಪುಸ್ತಕದ ದಾಸ್ತಾನಿಗಿಂತ 7 ಸಾವಿರ ವಿವಿಧ ಬ್ರಾಂಡಿನ ರಟ್ಟಿನ ಪೆಟ್ಟಿಗೆಗಳ ಬಿಯರ್ ದಾಸ್ತಾನು ಕೊಠಡಿಯಲ್ಲಿ ಹೆಚ್ಚಾಗಿ ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಈ ಕೃತ್ಯವು ಅಬಕಾರಿ ಕಾಯ್ದೆ ಕಲಂ 9, 10, 11, 12, 14 ಖ/ತಿ 32, 34, 38(ಎ), 43 ಮತ್ತು ಕರ್ನಾಟಕ ಬ್ರೀವರಿಯ ಸನ್ನದು ಶರತ್ತುಗಳ ನಿಯಮ 1, 2, 7 ಮತ್ತು 9 ಮತ್ತು ಕರ್ನಾಟಕ ಅಬಕಾರಿ ಕಾಯ್ದೆ ಬ್ರೀವರಿ 1967 ರ ನಿಯಮ 18 ಮತ್ತು 19 ಬಾಟ್ಲಿಂಗ್ ರೂಲ್ ನಿಯಮ 13 ಕರ್ನಾಟಕ ಅಬಕಾರಿ (ದಾಸ್ತಾನು, ಸಾಗಾಣಿಕೆ, ಆಮದು ಮತ್ತು ರಫ್ತು ಅಮಲು ಪದಾರ್ಥಗಳು) (ಕರ್ನಾಟಕ) ನಿಯಮಗಳು 1967 ರ ನಿಯಮ 7, 89, 3 ಇವುಗಳ ಉಲ್ಲಂಘನೆಯಾಗಿದೆ.
ಕರ್ನಾಟಕ ಅಬಕಾರಿ ಕಾಯ್ದೆ 1965ರನ್ವಯ ಮದ್ಯದ ಅಕ್ರಮ ದಾಸ್ತಾನು ದಂಡಾರ್ಹ ಹಾಗೂ ಶಿಕ್ಷಾರ್ಹ ಅಪರಾಧವಾಗಿರುವುದರಿಂದ ಬ್ರೀವರಿ ಘಟಕದಲ್ಲಿ ತಯಾರಿಸಿರುವ ಒಟ್ಟು 6,03,644 ರಟ್ಟಿನ ಪೆಟ್ಟಿಗೆಗಳು ಹಾಗೂ ಕೆಗ್‌ಗಳಲ್ಲಿರುವ 23,160 ಲೀ., ಮತ್ತು ಬಿಬಿಟಿ ಟ್ಯಾಂಕ್‌ನಲ್ಲಿರುವ ದಾಸ್ತಾನು 5,16,700 ಲೀ., ಯುಟಿ ಟ್ಯಾಂಕ್‌ನಲ್ಲಿರುವ 66,16,700 ಲೀ., ಸೈಲೋಸ್ ಟ್ಯಾಂಕ್‌ನಲ್ಲಿರುವ ಕಚ್ಚಾವಸ್ತು 6,50,458 ಕೆ.ಜಿ ರಂತೆ ವಿವಿಧ ವಸ್ತುಗಳನ್ನು ಜಪ್ತಿ ಮಾಡಿಕೊಂಡು ಬ್ರೀವರಿ ಪ್ರಕರಣದಲ್ಲಿ ನಾಪತ್ತೆಯಾಗಿರುವ 17 ಆರೋಪಿಗಳನ್ನು ಪತ್ತೆಹಚ್ಚಿ ಬಂಧಿಸಿಬೇಕಾಗಿರುತ್ತದೆ. ಜಪ್ತಿಪಡಿಸಿದ ಸ್ಥಳದ ಕೃತ್ಯವು ಚಾಮರಾಜನಗರ ಲೋಕಸಭಾ ಕ್ಷೇತ್ರ (ಪ.ಜಾ)ದ ವ್ಯಾಪ್ತಿಗೆ ಒಳಪಡಲಿದ್ದು, ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಅಕ್ರಮ ದಾಸ್ತಾನು ಪ್ರಕರಣ ದಾಖಲಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಶಿಲ್ಪಾ ನಾಗ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ: Congress ಅಧಿಕಾರಕ್ಕೆ ಬಂದರೆ ಗೃಹಲಕ್ಷ್ಮೀ 3 ಸಾವಿರ,ಗೃಹಜ್ಯೋತಿ 300 ಯುನಿಟ್‌ಗೆ ಹೆಚ್ಚಳ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf: ರೈತರಿಗೆ ನೀಡಿರುವ ನೋಟಿಸ್ ತಕ್ಷಣ ವಾಪಸ್: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ
Waqf Issue: ನ.4ರಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ
High Court: ಕ್ರಿಮಿನಲ್ ಕೇಸ್ ಡೈರಿ ಪ್ರತೀ ಪುಟಕ್ಕೆ ಸಹಿ:ಅರ್ಜಿ ವಜಾಗೊಳಿಸಿದ ಹೈಕೋರ್ಟ್
Bengaluru: ಸುವರ್ಣ ಸಂಭ್ರಮದಲ್ಲಿ ರಾಜ್ಯೋತ್ಸವ ವೈಭವ
Bengaluru: ಕೇಂದ್ರದ ತೆರಿಗೆ ಅನ್ಯಾಯ ಮಧ್ಯೆಯೂ ಅಭಿವೃದ್ಧಿ: ಸಿಎಂ
MUST WATCH
ಹೊಸ ಸೇರ್ಪಡೆ
Canada: ಅಮಿತ್ ಶಾ ವಿರುದ್ಧ ಆರೋಪ: ಕೆನಡಾದ ರಾಜತಾಂತ್ರಿಕರಿಗೆ ಸಮನ್ಸ್
INDvsNZ; ಬಿಗಿ ದಾಳಿ ನಡೆಸಿ ಪಂದ್ಯ ಹಿಡಿತಕ್ಕೆ ಪಡೆದುಕೊಂಡ ಟೀಮ್ ಇಂಡಿಯಾ
Parkala; ಅಂಗಡಿಯಲ್ಲಿ ಅಕ್ರಮವಾಗಿ ಪಟಾಕಿ ಮಾರುತ್ತಿದ್ದ ಮಾಲಕ ಅರೆಸ್ಟ್
Shiv Sena ; ಭಾರೀ ವಿವಾದದ ಬಳಿಕ ಶೈನಾ ಕ್ಷಮೆ ಯಾಚಿಸಿದ ಅರವಿಂದ್ ಸಾವಂತ್
Digil Movie: ದೈವ ಮತ್ತು ಮಂಗಳಮುಖಿಯ ಕಥೆ ಹೇಳಲು ಹೊರಟ ಚೇತನ್ ಮುಂಡಾಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.