ಚಾಮರಾಜನಗರ ಜಿಲ್ಲೆಯ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್: ಸಚಿವ ಸುರೇಶ್ ಕುಮಾರ್


Team Udayavani, Jun 19, 2020, 6:30 PM IST

ಚಾಮರಾಜನಗರ ಜಿಲ್ಲೆಯ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್: ಸಚಿವ ಸುರೇಶ್ ಕುಮಾರ್

ಚಾಮರಾಜನಗರ: ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ 2031ರವರೆಗಿನ ಹತ್ತು ವರ್ಷಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ಮಾಸ್ಟರ್ ಪ್ಲಾನ್ ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಹಾಗೂ ಶಿಕ್ಷಣ ಸಚಿವ ಸುರೇಶ್‌ಕುಮಾರ್ ತಿಳಿಸಿದರು.

ನಗರಕ್ಕೆ ಭೇಟಿ ನೀಡಿ ವಿವಿಧ ಕಾಮಗಾರಿಗಳ ಪರಿಶೀಲನೆ, ಅಧಿಕಾರಿಗಳ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2031ರವರೆಗೆ ಏರಿಕೆಯಾಗುವ ಜನಸಂಖ್ಯೆ, ಆಗಿನ ಅಗತ್ಯತೆಗಳನ್ನು ಗಮನದಲ್ಲಿರಿಸಿಕೊಂಡು, ಉದ್ದಿಮೆಗಳನ್ನು ಸ್ಥಾಪಿಸುವ ನಿಟ್ಟಿನಲ್ಲಿ, ಬಂಡವಾಳ ಹೂಡಿಕೆದಾರರನ್ನು ಆಕರ್ಷಿಸುವ ದೃಷ್ಟಿಯಿಂದ ಕರಡು ಮಾಸ್ಟರ್ ಪ್ಲಾನ್ ತಯಾರಿಸಲಾಗುತ್ತಿದೆ. ಇದನ್ನು ಇನ್ನಷ್ಟು ಸುಧಾರಿಸಲು ಸಲಹೆ ನೀಡಿದ್ದೇನೆ. ಇದನ್ನು ಇನ್ನು ಕೆಲವೇ ದಿನಗಳಲ್ಲಿ ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದರು.

ನಗರೋತ್ಥಾನ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಲಾಯಿತು. ನಗರದ ಅಂಬೇಡ್ಕರ್ ಕ್ರೀಡಾಂಗಣ, ವಾಣಿಜ್ಯ ಸಂಕೀರ್ಣ, ಖಾಸಗಿ ಬಸ್ ನಿಲ್ದಾಣ ಕಾಮಗಾರಿಗಳನ್ನು ಪರಿಶೀಲಿಸಿದೆ. ಕಾಮಗಾರಿ ವಿಳಂಬವಾಗಿರುವುದನ್ನು ಗಮನಿಸಿ, ಇನ್ನು ಯಾವುದೇ ಕಾರಣ ನೀಡದೇ ಆ ಕಾಮಗಾರಿಗಳನ್ನು ತ್ವರಿತವಾಗಿ ಮುಗಿಸಬೇಕು ಎಂದು ಸೂಚಿಸಿದ್ದೇನೆ. ನಗರಸಭೆ ಹಾಗೂ ಲೋಕೋಪಯೋಗಿ ಇಲಾಖೆ ನಡುವೆ ಸಮನ್ವಯದ ಕೊರತೆ ಇದೆ. ಅದಕ್ಕೆ ಇತಿಶ್ರೀ ಹಾಡಿ, ಕಾಮಗಾರಿ ಮುಗಿಸಿ ಉದ್ಘಾಟನೆ ಮಾಡಬೇಕು ಎಂದು ಆದೇಶಿಸಿದ್ದೇನೆ. ಖಾಸಗಿ ಬಸ್ ನಿಲ್ದಾಣದಲ್ಲಿ ಬಾಕಿಯಿದೆ. ಜುಲೈ 15ರೊಳಗೆ ಕಾಮಗಾರಿ ಮುಗಿಸಿ ಲೋಕಾರ್ಪಣೆಗೆ ದಿನಾಂಕ ನಿಗದಿಪಡಿಸಲಾಗುವುದು. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಇನ್ನೊಂದು ಪ್ರವೇಶ ದ್ವಾರದ ಅಗತ್ಯವಿದೆ.  ಅದರ ಕಾಮಗಾರಿಯನ್ನೂ ತ್ವರಿತವಾಗಿ ಮುಗಿಸಲು ಸೂಚನೆ ನೀಡಲಾಗಿದೆ ಎಂದರು.

ವೀರಭದ್ರೇಶ್ವರ ದೇವಾಲಯದ ಬಳಿ ವಾಣಿಜ್ಯ ಸಂಕೀರ್ಣ ಪೂರ್ಣಗೊಂಡಿದೆ. ಅದನ್ನು ಸದ್ಯದಲ್ಲೇ ಉದ್ಘಾಟಿಸಲಾಗುವುದು. ಜಿಲ್ಲಾ ಕೇಂದ್ರದಲ್ಲಿ ಸುರಕ್ಷಿತ ಆಹಾರ ವಲಯವನ್ನು (ಫುಡ್‌ಸ್ಟ್ರೀಟ್) ಸ್ಥಾಪಿಸಲು ಸ್ಥಳ ಪರಿಶೀಲನೆ ಮಾಡಲಾಗಿದೆ. ಜುಲೈನಲ್ಲಿ ಉದ್ಘಾಟಿಸಲಾಗುವುದು. ಚಾಮರಾಜನಗರದಲ್ಲಿ ವಿದ್ಯುತ್ ಚಿತಾಗಾರ ನಿರ್ಮಿಸಬೇಕೆಂಬ ಬೇಡಿಕೆಯಿದೆ. ಇದಕ್ಕಾಗಿ ಜಾಗವೊಂದನ್ನು ಅಂತಿಮಗೊಳಿಸಿ ಅತ್ಯಂತ ತ್ವರಿತಗತಿಯಲ್ಲಿ ಪ್ರಾರಂಭಿಸಲು ಯೋಚಿಸಿದ್ದೇವೆ. ಜಿಲ್ಲಾಧಿಕಾರಿಯವರು ನಗರದ ಬಿ. ರಾಚಯ್ಯ ಜೋಡಿ ರಸ್ತೆ ಸಮಸ್ಯೆಯನ್ನು ಪರಿಹರಿಸಲು ನಾಗರಿಕರನ್ನು ಕರೆದು ಮಾತನಾಡಲಿದ್ದಾರೆ ಎಂದರು.

ಮುಂದಿನ ಶೈಕ್ಷಣಿಕ ವರ್ಷ ಯಾವಾಗ ಪ್ರಾರಂಭ ಎಂದು ನಾವಿನ್ನೂ ನಿರ್ಧಾರ ಕೈಗೊಳ್ಳಲಾಗಿಲ್ಲ. ಕೇಂದ್ರ ಸರ್ಕಾರದ ಸೂಚನೆಯಂತೆ ಪೋಷಕರ ಅಭಿಪ್ರಾಯ ಸಂಗ್ರಹಣೆ ಮಾಡುತ್ತಿದ್ದೇವೆ. ಪ್ರತಿ ಶಾಲೆಯ ಪೋಷಕರ ಅಭಿಪ್ರಾಯವನ್ನು ಜೂ. 20ರವರೆಗೆ ಸಂಗ್ರಹಿಸುತ್ತಿದ್ದು, ಅದನ್ನು ಕೊ್ರೀಢೀಕರಿಸಿ ನಂತರ ನಿರ್ಧಾರ ಕೈಗೊಳ್ಳುತ್ತೇವೆ. ಕೇಂದ್ರ ಸರ್ಕಾರ ಸಹ ಮಾರ್ಗಸೂಚಿ ಕೆಲವೇ ದಿನಗಳಲ್ಲಿ ತಲುಪಲಿದೆ ಎಂದು ತಿಳಿಸಿದರು.

ಎಲ್ಲ ಶಾಲೆಗಳಲ್ಲಿ ಕೋವಿಡ್ ಮತ್ತು ಇತರ ಸಾಂಕ್ರಾಮಿಕ ಕಾಯಿಲೆಗಳ ಬಗ್ಗೆ ಕಿರು ಹೊತ್ತಿಗೆ ತರಲಾಗುತ್ತಿದೆ. ಕೋವಿಡ್ ತಡೆಗೆ ದೇಶದಲ್ಲಿ ಮಾಡಿದ ಪ್ರಯತ್ನ, ಬೇರೆ ದೇಶಗಳ ಪ್ರಯತ್ನಗಳನ್ನು ಇದರಲ್ಲಿ ವಿವರಿಸಲಾಗಿದೆ ಎಂದರು.

ಇದಕ್ಕೂ ಮೊದಲು ಸಚಿವರು ಜಿಲ್ಲಾಸ್ಪತ್ರೆಯಲ್ಲಿ 50 ಲಕ್ಷ ರೂ.ಗಳ ವೆಚ್ಚದಲ್ಲಿ ನಿರ್ಮಾಣವಾಗಿರುವ ಹೊರರೋಗಿಗಳ ವಿಭಾಗವನ್ನು ಆಸ್ಪತ್ರೆಗೆ ಬಂದಿದ್ದ ಮಹಿಳಾ ರೋಗಿಯಿಂದ  ಉದ್ಘಾಟನೆ ಮಾಡಿಸಿದರು. ಇದೇ ಸಂದರ್ಭದಲ್ಲಿ 8 ಲಕ್ಷ ರೂ. ವೆಚ್ಚದಲ್ಲಿ ತುರ್ತುಚಿಕಿತ್ಸಾ ಘಟಕವನ್ನು ಶಾಸಕ ಪುಟ್ಟರಂಗಶೆಟ್ಟಿ ಲೋಕಾರ್ಪಣೆ ಮಾಡಿದರು.

ರೋಗಿಗಳ ದಾಖಲೆಯನ್ನು ಸಮರ್ಪಕವಾಗಿ ಮಾಡಲು ಇ-ಆಸ್ಪತ್ರೆಯನ್ನು ಜಾರಿಗೊಳಿಸಲಾಗಿದೆ. ಈಗಾಗಲೇ 1.79 ಕೋಟಿ ರೂ. ವೆಚ್ಚದಲ್ಲಿ ಅತ್ಯುನ್ನತ ಗುಣಮಟ್ಟದ ಕೋವಿಡ್ ಲ್ಯಾಬೊರೇಟರಿಯನ್ನು ಸಿಮ್ಸ್ ನಲ್ಲಿ ನಿರ್ಮಿಸಲಾಗಿದೆ. ಚಾಮರಾಜನಗರ ಕೋವಿಡ್ ವಿರುದ್ಧದ ಸಮರದಲ್ಲಿ ಇಡೀ ರಾಜ್ಯದ ಗಮನ ಸೆಳೆದಿದೆ. ಅದೇ ರೀತಿ ನಿರ್ಮಾಣವಾಗಿರುವ ಕೋವಿಡ್ ಲ್ಯಾಬ್ ಕೂಡ ಉತ್ಕೃಷ್ಟತೆಯಿಂದ ಇಡೀ ರಾಜ್ಯದ ಗಮನ ಸೆಳೆದಿದೆ ಎಂದು ಸಚಿವ ಸುರೇಶ್‌ಕುಮಾರ್ ತಿಳಿಸಿದರು

ಟಾಪ್ ನ್ಯೂಸ್

BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್:‌ ಭಾರತದ ಹಿಡಿತದಲ್ಲಿ ಪರ್ತ್‌ ಟೆಸ್ಟ್‌

BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್:‌ ಭಾರತದ ಹಿಡಿತದಲ್ಲಿ ಪರ್ತ್‌ ಟೆಸ್ಟ್‌

15-bng

Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಘಾತ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ

Naxal encounter case: Jayant Gowda’s interrogation, villagers lay siege to the police station

Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Minister K.J. George: ಒಂದೇ ದಿನದಲ್ಲಿ 2500 ಲೈನ್‌ಮ್ಯಾನ್‌ನೇಮಕ ಸಂದರ್ಶನ

Minister K.J. George: ಒಂದೇ ದಿನದಲ್ಲಿ 2500 ಲೈನ್‌ಮ್ಯಾನ್‌ ನೇಮಕ ಸಂದರ್ಶನ

Bandipur:  ಸಫಾರಿಯಲ್ಲಿ ಪ್ರವಾಸಿಗರ ಮುಂದೆಯೇ ಜಿಂಕೆ ಬೇಟೆಯಾಡಿದ ಚಿರತೆ

Bandipur: ಸಫಾರಿಯಲ್ಲಿ ಪ್ರವಾಸಿಗರ ಮುಂದೆಯೇ ಜಿಂಕೆ ಬೇಟೆಯಾಡಿದ ಚಿರತೆ

Birla Opus Paints: ಚಾಮರಾಜನಗರದಲ್ಲಿ ಬಿರ್ಲಾ ಒಪಸ್ ಪೇಂಟ್ಸ್ 4ನೇ ಕಾರ್ಖಾನೆ ಆರಂಭ

Birla Opus Paints: ಚಾಮರಾಜನಗರದಲ್ಲಿ ಬಿರ್ಲಾ ಒಪಸ್ ಪೇಂಟ್ಸ್ 4ನೇ ಕಾರ್ಖಾನೆ ಆರಂಭ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

17-bng

Bengaluru: ವಿಶ್ವನಾಥ್‌ಗೆ ಕೊಲೆ ಬೆದರಿಕೆ: ಆರೋಪಿ ಅರ್ಜಿ ವಜಾ

BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್:‌ ಭಾರತದ ಹಿಡಿತದಲ್ಲಿ ಪರ್ತ್‌ ಟೆಸ್ಟ್‌

BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್:‌ ಭಾರತದ ಹಿಡಿತದಲ್ಲಿ ಪರ್ತ್‌ ಟೆಸ್ಟ್‌

16-bng

Bengaluru: ಮರಕ್ಕೆ ಬೈಕ್‌ ಡಿಕ್ಕಿ ಹೊಡೆದು ಯುವಕ ಸಾವು

15-bng

Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’

India’s first FIP ​​Padel tournament begins

FIP Padel: ಭಾರತದ ಮೊದಲ ಎಫ್‌ಐಪಿ ಪ್ಯಾಡಲ್ ಟೂರ್ನಮೆಂಟ್ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.