ಆನೆ ಓಡಿಸಲು ಹೊಡೆದ ಗುಂಡು ತಗುಲಿ ಗಾಯ

Team Udayavani, Dec 27, 2018, 7:29 AM IST

36.jpg

ಚಾಮರಾಜನಗರ/ಕೊಳ್ಳೇಗಾಲ: ತಾಲೂಕಿನ ಮಧುವನಹಳ್ಳಿ ಸಮೀಪ ಜಮೀನಿಗೆ ನುಗ್ಗಿದ್ದ ಕಾಡಾನೆಗಳನ್ನು ಓಡಿಸುವ ಕಾರ್ಯಾಚರಣೆ ಸಂದರ್ಭದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಡಬಲ್‌ ಬ್ಯಾರೆಲ್‌ ಗನ್‌ನಿಂದ ಶೂಟ್‌ ಮಾಡಿದಾಗ ಸಣ್ಣ, ಸಣ್ಣ ಗುಂಡುಗಳು (ಪೆಲ್ಲೆಟ್ಸ್‌) ತಗುಲಿ ಆರು ಮಂದಿಗೆ ಗಾಯಗಳಾಗಿದೆ. ಸಿದ್ದಾರ್ಥ (20), ರಾಜಶೇಖರ್‌  (22) ಸುಜಿತ್‌ (15) ರಘುವೀರ್‌ (21) ದರ್ಶನ್‌ (17) ಪ್ರವೀಣ್‌ (18) ಗಾಯಗೊಂಡವರು. ಕೊಳ್ಳೇಗಾಲ ತಾಲೂಕಿನ ಚಿಕ್ಕಲ್ಲೂರು ಅರಣ್ಯ ಪ್ರದೇಶದಿಂದ ಬಂದ ಕಾಡಾನೆಗಳು ಮಧುವನಹಳ್ಳಿ ಗ್ರಾಮದ ಸುಬ್ಬಶೆಟ್ಟಿ ಮತ್ತು ಹೊಂಗಶೆಟ್ಟಿ ಎಂಬುವರ ಕಬ್ಬಿನ ಗದ್ದೆ ಮೇಲೆ ಬುಧವಾರ ದಾಳಿ ನಡೆಸಿ, ಕಬ್ಬಿನ ಫ‌ಸಲನ್ನು ನಾಶಪಡಿಸಿವೆ.

ಗುಂಪಿನಲ್ಲಿ ಎರಡು ಮರಿಯಾನೆ ಸೇರಿ ಆರು ಆನೆಗಳಿದ್ದವು. ಗ್ರಾಮಸ್ಥರು ಅರಣ್ಯಾಧಿಕಾರಿ ಗಳಿಗೆ ವಿಷಯ ತಿಳಿಸಿದಾಗ ಸ್ಥಳಕ್ಕೆ ಉಪ ಅರಣ್ಯ ಸಂರಕ್ಷಣಾಧಿಕಾರಿ ಏಡುಕೊಂಡಲು, ಆರ್‌ಎಫ್ಒಗಳಾದ ಧನುಷ್‌, ಮಹದೇವ ಸ್ವಾಮಿ, ಡಿಆರ್‌ ಎಫ್ಒ ಬೋಜಪ್ಪ ಮತ್ತು ಬಿಆರ್‌ಟಿ ಹಾಗೂ ಮಲೆ ಮಹದೇಶ್ವರ ವನ್ಯಜೀವಿ ಸಿಬ್ಬಂದಿ ಆಗಮಿಸಿದರು. ಕಬ್ಬಿನ ಗದ್ದೆಯ ಮಧ್ಯಭಾಗದಲ್ಲಿ ಆನೆಗಳ ಹಿಂಡು ಬೀಡುಬಿಟ್ಟಿದ್ದು, ಬೇರೆಡೆಗೆ ಓಡಿಸಲು ಅಧಿಕಾರಿಗಳು ಮತ್ತು ಗ್ರಾಮಸ್ಥರು ಹರಸಾಹಸ ಪಟ್ಟರು. ಆದರೂ ಜಗ್ಗದೆ ಆನೆಗಳು ಕಬ್ಬಿನ ಗದ್ದೆಯಲ್ಲೆ ಬೀಡುಬಿಟ್ಟವು. ಒಂದೆಡೆ ಗ್ರಾಮಸ್ಥರು ನೂರಾರು ಸಂಖ್ಯೆಯಲ್ಲಿ ಜಮಾಯಿಸಿ ಆನೆಗಳತ್ತ ಕಲ್ಲು ತೂರಲಾರಂಭಿಸಿದರು.

ಮತ್ತೂಂದೆಡೆ, ಅರಣ್ಯಾಧಿಕಾರಿಗಳು ಸುಮಾರು 10 ರಿಂದ 12 ಬಾರಿ ಗುಂಡು ಮತ್ತು ಪಟಾಕಿ ಸಿಡಿಸಿದರು. ಇದಕ್ಕೂ ಆನೆಗಳು ಜಗ್ಗದಿದ್ದಾಗ ಡಬಲ್‌ ಬ್ಯಾರೆಲ್‌ ಗನ್‌ನಿಂದ ಶೂಟ್‌ ಮಾಡಿದರು. ಈ ಸಂದರ್ಭದಲ್ಲಿ ಕಾಡತೂಸಿನೊಳಗಿರುವ ಪೆಲೆಟ್ಸ್‌ (ಸಣ್ಣ ಗುಂಡುಗಳು) ಆನೆಗಳನ್ನು ನೋಡಲು ಮರದ ಮೇಲೆ ಕುಳಿತಿದ್ದ 6 ಮಂದಿ ಯುವಕರಿಗೆ ತಗುಲಿವೆ. ಯುವಕರ ಹೊಟ್ಟೆ, ಕೈ, ಕತ್ತಿನ ಕೆಳಬಾಗ, ಎದೆ ಭಾಗ ಸೇರಿದಂತೆ ಹಲವೆಡೆ ತಗುಲಿದ ಪರಿಣಾಮ ಗಾಯಗಳಾಗಿವೆ. ತಕ್ಷಣವೆ ಅರಣ್ಯಾಧಿಕಾರಿಗಳು ಯುವಕರನ್ನು ಕೊಳ್ಳೇಗಾಲ ಸಾರ್ವಜನಿಕ ಆಸ್ಪತ್ರೆಗೆ ಕರೆ ತಂದು ಚಿಕಿತ್ಸೆ ಕೊಡಿಸಿದರು. ಇಬ್ಬರು ಅಪಾಯದಿಂದ ಪಾರಾಗಿದ್ದು, ನಾಲ್ವರನ್ನು ಹೆಚ್ಚಿನ
ಚಿಕಿತ್ಸೆಗಾಗಿ ಮೈಸೂರಿನ ಕೆ.ಆರ್‌.ಆಸ್ಪತ್ರೆಗೆ ದಾಖಲಿಸಲಾಗಿದೆ. 

ನಾಗರಿಕರು ಹಾಗೂ ನಮ್ಮ ಸಿಬ್ಬಂದಿಯತ್ತ ನುಗ್ಗಿ ಬರುತ್ತಿದ್ದ ಕಾಡಾನೆಗಳಿಂದ ಪ್ರಾಣ ರಕ್ಷಣೆಗಾಗಿ ಶೂಟ್‌ ಮಾಡಲಾಯಿತು. ಇದರಿಂದ ಮರದ ಮೇಲೆ ಕುಳಿತಿದ್ದ ಆರು ಮಂದಿಗೆ ಪೆಲೆಟ್ಸ್‌ ತಗುಲಿದೆ. ಇಬ್ಬರಿಗೆ ಯಾವುದೇ ತೊಂದರೆ ಇಲ್ಲ. ನಾಲ್ಕು ಮಂದಿಯನ್ನು ಎಕ್ಸ್‌ ರೇ ಹಾಗೂ ಇನ್ನಿತರ ತಪಾಸಣೆಗಾಗಿ ಕೆ.ಆರ್‌. ಆಸ್ಪತ್ರೆಗೆ ಕಳುಹಿಸಲಾಗಿದೆ. ಯಾವುದೇ ಅಪಾಯವಾಗಿಲ್ಲ..
 ● ಏಡುಕೊಂಡಲು, ಡಿಸಿಎಫ್, ಮಹದೇಶ್ವರ ವನ್ಯಜೀವಿ ಧಾಮ. 

ಟಾಪ್ ನ್ಯೂಸ್

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

Akhilesh Yadav: ಉ.ಪ್ರ.ದಲ್ಲಿ ಬಾಬಾ ಸಾಹೇಬ್‌ ಮತ್ತು ಬಾಬಾ ನಡುವಿನ ಹೋರಾಟ

Akhilesh Yadav: ಉ.ಪ್ರ.ದಲ್ಲಿ ಬಾಬಾ ಸಾಹೇಬ್‌ ಮತ್ತು ಬಾಬಾ ನಡುವಿನ ಹೋರಾಟ

Supreme Court: ನೇತಾಜಿ ಸಾವಿನ ರಹಸ್ಯ ತನಿಖೆ ನಡೆಸಲು ಕೋರಿದ್ದ ಅರ್ಜಿ ವಜಾ

Supreme Court: ನೇತಾಜಿ ಸಾವಿನ ರಹಸ್ಯ ತನಿಖೆ ನಡೆಸಲು ಕೋರಿದ್ದ ಅರ್ಜಿ ವಜಾ

RSS ವಿರುದ್ಧ ಹೇಳಿಕೆ ಪ್ರಕರಣ: ಗೀತ ರಚನೆಕಾರ ಜಾವೇದ್‌ ಅಖ್ತರ್‌ ಖುಲಾಸೆ

RSS ವಿರುದ್ಧ ಹೇಳಿಕೆ ಪ್ರಕರಣ: ಗೀತ ರಚನೆಕಾರ ಜಾವೇದ್‌ ಅಖ್ತರ್‌ ಖುಲಾಸೆ

SC: ಬಿಯಾಂತ್‌ ಹಂತಕ ಬಲ್ವಂತ್‌ ಕ್ಷಮಾದಾನ ಅರ್ಜಿ ಶೀಘ್ರ ಇತ್ಯರ್ಥಕ್ಕೆ ಸುಪ್ರೀಂ ಸೂಚನೆ

SC: ಬಿಯಾಂತ್‌ ಹಂತಕ ಬಲ್ವಂತ್‌ ಕ್ಷಮಾದಾನ ಅರ್ಜಿ ಶೀಘ್ರ ಇತ್ಯರ್ಥಕ್ಕೆ ಸುಪ್ರೀಂ ಸೂಚನೆ

Missile Strike: ಉಕ್ರೇನ್‌ ಮೇಲೆ ರಷ್ಯಾ ದಾಳಿ:2 ಮಕ್ಕಳು ಸೇರಿ 11 ಜನ ಸಾವು

Missile Strike: ಉಕ್ರೇನ್‌ ಮೇಲೆ ರಷ್ಯಾ ದಾಳಿ:2 ಮಕ್ಕಳು ಸೇರಿ 11 ಜನ ಸಾವು

Gaviyappa-MLA

Vijayanagara: ಅನುದಾನ ಇಲ್ಲದೇ, ಜನರು ಅಭಿವೃದ್ಧಿ ಕೇಳಿದ್ರೆ ಏನು ಮಾಡಲಿ: ಕಾಂಗ್ರೆಸ್‌ ಶಾಸಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

Gaviyappa-MLA

Vijayanagara: ಅನುದಾನ ಇಲ್ಲದೇ, ಜನರು ಅಭಿವೃದ್ಧಿ ಕೇಳಿದ್ರೆ ಏನು ಮಾಡಲಿ: ಕಾಂಗ್ರೆಸ್‌ ಶಾಸಕ

ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್‌ ಖಂಡ್ರೆ

Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್‌ ಖಂಡ್ರೆ

Siddu–kanaka

Grant Fight: ಕರ್ನಾಟಕಕ್ಕೆ ಅನ್ಯಾಯವಾದಾಗ ಎಚ್‌ಡಿಡಿ, ಎಚ್‌ಡಿಕೆ ಮಾತಾಡಿದ್ದಾರಾ?: ಸಿಎಂ

ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ

Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

Akhilesh Yadav: ಉ.ಪ್ರ.ದಲ್ಲಿ ಬಾಬಾ ಸಾಹೇಬ್‌ ಮತ್ತು ಬಾಬಾ ನಡುವಿನ ಹೋರಾಟ

Akhilesh Yadav: ಉ.ಪ್ರ.ದಲ್ಲಿ ಬಾಬಾ ಸಾಹೇಬ್‌ ಮತ್ತು ಬಾಬಾ ನಡುವಿನ ಹೋರಾಟ

Supreme Court: ನೇತಾಜಿ ಸಾವಿನ ರಹಸ್ಯ ತನಿಖೆ ನಡೆಸಲು ಕೋರಿದ್ದ ಅರ್ಜಿ ವಜಾ

Supreme Court: ನೇತಾಜಿ ಸಾವಿನ ರಹಸ್ಯ ತನಿಖೆ ನಡೆಸಲು ಕೋರಿದ್ದ ಅರ್ಜಿ ವಜಾ

Ullala-Swim-1

Ullala Resort: ಮೃತ ಯುವತಿಯ ಕುಟುಂಬಸ್ಥರ ಆಕ್ರಂದನ

RSS ವಿರುದ್ಧ ಹೇಳಿಕೆ ಪ್ರಕರಣ: ಗೀತ ರಚನೆಕಾರ ಜಾವೇದ್‌ ಅಖ್ತರ್‌ ಖುಲಾಸೆ

RSS ವಿರುದ್ಧ ಹೇಳಿಕೆ ಪ್ರಕರಣ: ಗೀತ ರಚನೆಕಾರ ಜಾವೇದ್‌ ಅಖ್ತರ್‌ ಖುಲಾಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.