ನಗರಸಭೆ, ಪೊಲೀಸ್ ಇಲಾಖೆಯಿಂದ ಜಾಥಾ
Team Udayavani, Aug 14, 2022, 3:25 PM IST
ಚಾಮರಾಜನಗರ: ದೇಶ ಸ್ವಾತಂತ್ರ್ಯಗೊಂಡು 75 ವರ್ಷಗಳು ತುಂಬಿದ ಹಿನ್ನೆಲೆಯಲ್ಲಿ ಆಚರಿಸಲಾಗುತ್ತಿರುವ ಅಮೃತ ಮಹೋತ್ಸವದ ಅಂಗವಾಗಿ ಆ. 13ರಿಂದ 15ರವರೆಗೆ ಹಮ್ಮಿಕೊಳ್ಳಲಾಗಿರುವ ಹರ್ ಘರ್ ತಿರಂಗಾ ಅಭಿಯಾನ ಕಾರ್ಯಕ್ರಮ ಶನಿವಾರ ನಗರದ ವಿವಿಧೆಡೆ ನಡೆಯಿತು.
ಪೊಲೀಸ್ ಇಲಾಖೆಯ ನೇತೃತ್ವದಲ್ಲಿ ನಗರದ ಪ್ರಮುಖ ರಸ್ತೆಗಳಲ್ಲಿ ನಡೆಸಿದ ಜಾಥಾದಲ್ಲಿ ಅರಣ್ಯ, ಅಗ್ನಿಶಾಮಕ, ಅಬಕಾರಿ ಹಾಗೂ ಗೃಹರಕ್ಷಕ ದಳದ ಅಧಿಕಾರಿಗಳು ಸಹ ಪಾಲ್ಗೊಂಡಿದ್ದರು. ಪೊಲೀಸ್ ಬ್ಯಾಂಡ್ ತಂಡ ಸಹ ಭಾಗವಹಿಸಿತ್ತು. ದೊಡ್ಡಂಗಡಿ ಬೀದಿ, ರಥದಬೀದಿ, ಪಚ್ಚಪ್ಪ ವೃತ್ತದ ಮೂಲಕ ಬಿ. ರಾಚಯ್ಯ ಜೋಡಿ ರಸ್ತೆಯಲ್ಲಿ ಸಾಗಿ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಜಾಥಾ ಮುಕ್ತಾಯವಾಯಿತು. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾ ಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಪಿ. ಶಿವಕುಮಾರ್, ಭಾರತ ಸ್ವಾತಂತ್ರ್ಯ ಅಮೃತ ಮಹೋತ್ಸವದ ಆಚರಣೆ ಮೂಲಕ ದೇಶದ ಸ್ವಾತಂತ್ರ್ಯಕ್ಕೆ ಕಾರಣರಾದ ಹೋರಾಟ ಗಾರರನ್ನು ಸ್ಮರಿಸುವುದು ನಮ್ಮೆಲ್ಲರ ಕರ್ತವ್ಯ ವಾಗಿದೆ. ಈ ನಿಟ್ಟಿನಲ್ಲಿ ಜಿಲ್ಲಾ ಪೊಲೀಸ್ ಇಲಾ ಖೆಯ ವತಿಯಿಂದ ಹರ್ ಘರ್ ತಿರಂಗಾ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದರು.
ನಗರಸಭೆ: ಚಾಮರಾಜನಗರ ನಗರಸಭೆಯಿಂದ ಆಯೋಜಿಸಲಾಗಿದ್ದ ಜಾಥಾಕ್ಕೆ ನಗರಸಭೆ ಅಧ್ಯಕ್ಷೆ ಆಶಾನಟರಾಜು ಅವರು ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿ, ಶುಭ ಹಾರೈಸಿದರು. ಭಾರತದ ತ್ರಿವರ್ಣ ಧ್ವಜ ಪ್ರದರ್ಶಿಸಿದರು. ಹರ್ ಘರ್ ತಿರಂಗಾ ಅಭಿಯಾನ ಜಾಥಾ ಕಾರ್ಯಕ್ರಮದಲ್ಲಿ ನಗರಸಭೆಯ ಸದಸ್ಯರು, ಅಧಿಕಾರಿಗಳು, ನೌಕರರು, ಪೌರಕಾರ್ಮಿಕರು ಸೇರಿದಂತೆ ಎಲ್ಲರೂ ಭಾರತ ತ್ರಿವರ್ಣ ಧ್ವಜ ಹಿಡಿದು ನಗರದ ಪ್ರಮುಖ ಬೀದಿಗಳಲ್ಲಿ ಸಾಗಿ ದೇಶಪ್ರೇಮ ಅಭಿಮಾನ ಮೆರೆದರು.
ನಗರಸಭೆ ಸದಸ್ಯರಾದ ಶಿವರಾಜು, ಗಾಯತ್ರಿಚಂದ್ರಶೇಖರ್, ನೀಲಮ್ಮ, ಚಿನ್ನಮ್ಮ, ಭಾಗ್ಯಮ್ಮ, ಮಮತ, ಅಬ್ರಾರ್ ಖಲೀಲ್, ಮಹೇಶ್, ಪ್ರಭಾರ ಪೌರಾಯುಕ್ತ ನಟರಾಜು, ಕಂದಾಯ ಅಧಿಕಾರಿ ಶರವಣ, ಪರಿಸರ ವಿಭಾಗದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಗಿರಿಜಮ್ಮ, ಹಿರಿಯ ಆರೋಗ್ಯ ನಿರೀಕ್ಷಕರಾದ ಮಂಜುನಾಥ್, ಸುಷ್ಮಾ, ಸಮುದಾಯ ಸಂಘಟನಾಧಿಕಾರಿ ವೆಂಕಟ್ ನಾಯಕ್, ಕಿರಿಯ ಅಭಿಯಂತತರಾದ ಆರಾಧ್ಯ, ದೇವರಾಜು, ನಗರಸಭೆಯ ನೀರು ಸರಬರಾಜು ನೌಕರರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.