ಆಸ್ಪತ್ರೆಗೆ ನ್ಯಾಯಾಧೀಶರ ದಿಢೀರ್ ಭೇಟಿ: ತರಾಟೆ
ಈ ಔಷಧಿಗಳನ್ನು ಇದುವರೆಗೂ ನಾಶಪಡಿಸದೆ ಇಲ್ಲೇ ಇಟ್ಟುಕೊಂಡಿರುವುದಕ್ಕೆ ಕಾರಣವೇನು?
Team Udayavani, May 27, 2022, 6:02 PM IST
ಯಳಂದೂರು: ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ಶ್ರೀಧರ್ ಗುರುವಾರ ದಿಢೀರ್ ಭೇಟಿ ನೀಡಿ ಇಲ್ಲಿನ ಅವ್ಯವಸ್ಥೆಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.
ಕರ್ನಾಟಕ ಉಚ್ಚ ನ್ಯಾಯಾಲಯ ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಭೇಟಿ ನೀಡಿರುವುದಾಗಿ ತಿಳಿಸಿದರು. ತಾಲೂಕಿನ ಆಸ್ಪತ್ರೆಯ ವಾರ್ಡ್‌ಗಳಿಗೆ ಭೇಟಿ ನೀಡಿ ರೋಗಿಗಳಿಂದ ಇಲ್ಲಿನ ಕುಂದು-ಕೊರತೆಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ಈ ಸಂದರ್ಭದಲ್ಲಿ ಆಸ್ಪತ್ರೆಯ ಆವರಣದಲ್ಲಿ ಅಶುಚಿತ್ವ ತಾಂಡವವಾಡುತ್ತಿದ್ದನ್ನು ಕಂಡು ಆಸ್ಪತ್ರೆಯ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡರು.
ನಂತರ ಔಷಧಿಯ ಉಗ್ರಾಣಕ್ಕೆ ಭೇಟಿ ನೀಡಿದ್ದರು. ಈ ವೇಳೆ ಉಗ್ರಾಣದಲ್ಲಿ ಅವಧಿ ಮೀರಿದ ಔಷಧಿಗಳ ದಾಸ್ತಾನುಗಳು ಇದ್ದದ್ದು ಕಂಡು ತಾಲೂಕು ಆರೋಗ್ಯಾಧಿಕಾರಿ ಡಾ. ಮಂಜುನಾಥ್‌ರನ್ನು ತರಾಟೆಗೆ ತೆಗೆದುಕೊಂಡರು. ಈ ಔಷಧಿಗಳನ್ನು ಇದುವರೆಗೂ ನಾಶಪಡಿಸದೆ ಇಲ್ಲೇ ಇಟ್ಟುಕೊಂಡಿರುವುದಕ್ಕೆ ಕಾರಣವೇನು? ಈ ಬಗ್ಗೆ ಇನ್ನೆರಡು ದಿನಗಳಲ್ಲಿ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ವರದಿ ನೀಡಬೇಕು.
ಕೂಡಲೇ ಕಾನೂನಿನ ಮಾನದಂಡಗಳನ್ನು ಬಳಸಿಕೊಂಡು ನಾಶಪಡಿಸಬೇಕು ಎಂದು ಸೂಚನೆ ನೀಡಿದರು. ಅಲ್ಲದೆ ಇಲ್ಲಿಗೆ ಮತ್ತೂಮ್ಮೆ ಅನಿರೀಕ್ಷಿತ ದಿಢೀರ್ ಭೇಟಿ ನೀಡಲಿದ್ದು ಅಲ್ಲಿಯವರೆಗೆ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಬೇಕು ಎಂದು ಎಚ್ಚರಿಕೆ ನೀಡಿದರು. ಇದೇ ವೇಳೆ, ಲ್ಯಾಬ್, ಶಸ್ತ್ರ ಚಿಕಿತ್ಸಾ ಕೊಠಡಿ, ಸೇರಿದಂತೆ ಇಡೀ ಆಸ್ಪತ್ರೆಯನ್ನು ಪರಿಶೀಲನೆ ನಡೆಸಿ ಸಿಬ್ಬಂದಿಯಿಂದ ಮಾಹಿತಿ ಪಡೆದರು. ಒಳರೋಗಿಗಳ ಕೊಠಡಿಗೆ ಭೇಟಿ ನೀಡಿ ರೋಗಿಗಳ ಆರೋಗ್ಯ ವಿಚಾರಿಸಿದರು. ವೈದ್ಯಾಧಿಕಾರಿ ಡಾ. ಶ್ರೀಧರ್ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ
Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು
Minister K.J. George: ಒಂದೇ ದಿನದಲ್ಲಿ 2500 ಲೈನ್‌ಮ್ಯಾನ್ ನೇಮಕ ಸಂದರ್ಶನ
Bandipur: ಸಫಾರಿಯಲ್ಲಿ ಪ್ರವಾಸಿಗರ ಮುಂದೆಯೇ ಜಿಂಕೆ ಬೇಟೆಯಾಡಿದ ಚಿರತೆ
Birla Opus Paints: ಚಾಮರಾಜನಗರದಲ್ಲಿ ಬಿರ್ಲಾ ಒಪಸ್ ಪೇಂಟ್ಸ್ 4ನೇ ಕಾರ್ಖಾನೆ ಆರಂಭ
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Naxal ಎನ್‌ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?
Hebri: ಎನ್‌ಕೌಂಟರ್ ತನಿಖೆ ನಡೆಸುವ ಹೆಬ್ರಿ ಪೊಲೀಸ್ ಠಾಣೆ ಇಲ್ಲಗಳ ಆಗರ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.