ಸಂತೇಮರಹಳ್ಳಿ ಆಸ್ಪತ್ರೆಗೆ ನ್ಯಾಯಾಧೀಶರ ಭೇಟಿ
Team Udayavani, Jul 11, 2023, 12:28 PM IST
ಚಾಮರಾಜನಗರ: ತಾಲೂಕಿನ ಸಂತೇಮರ ಹಳ್ಳಿಯಲ್ಲಿರುವ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಹಾಗೂ ಸಮುದಾಯ ಆರೋಗ್ಯ ಕೇಂದ್ರಕ್ಕೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಎಂ. ಶ್ರೀಧರ ಅವರು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ಬಂದಿರುವ ರೋಗಿಗಳಿಗೆ ಸಕಾಲದಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದೆಯೇ ಎಂಬ ಬಗ್ಗೆ ನ್ಯಾಯಾಧೀಶರು ಪರಿಶೀಲಿಸಿದರು. ಮುಂಗಾರು ಮಳೆ ಹಾಗೂ ಅತಿವೃಷ್ಟಿ ಪ್ರಕೃತಿ ವಿಕೋಪ ಸಂದರ್ಭಗಳಲ್ಲಿ ರೋಗಿಗಳಿಗೆ ತ್ವರಿತವಾಗಿ ವೈದ್ಯಕೀಯ ಸೇವೆಯನ್ನು ನೀಡಲು ಆಸ್ಪತ್ರೆಯಲ್ಲಿ ಕೈಗೊಂಡಿರುವ ಮುನ್ನೆಚ್ಚರಿಕೆ ಕ್ರಮಗಳು ಹಾಗೂ ಅಗತ್ಯ ಔಷಧಗಳ ವ್ಯವಸ್ಥೆ ಬಗ್ಗೆ ಪರಿಶೀಲಿಸಿದರು.
ರೋಗಿಗಳಿಂದ ಮಾಹಿತಿ ಪಡೆದ ನ್ಯಾಯಾಧೀಶರು: ವಾರ್ಡ್‌ಗಳಿಗೆ ಭೇಟಿ ನೀಡಿ ಅಲ್ಲಿನ ಚಿಕಿತ್ಸೆ, ಔಷಧೋಪಾಚಾರಗಳ ಬಗ್ಗೆ ರೋಗಿಗಳಿಂದ ಮಾಹಿತಿ ಪಡೆದರು. ಸ್ವಚ್ಚತೆ, ಕುಡಿಯುವ ನೀರಿನ ವ್ಯವಸ್ಥೆಗೆ ಸಂಬಂಧಿಸಿದಂತೆ ಕಲ್ಪಿಸಲಾಗಿರುವ ಸೌಲಭ್ಯಗಳನ್ನು ವೀಕ್ಷಿಸಿದರು.
ಆಸ್ಪತ್ರೆಯಲ್ಲಿ ಉತ್ತಮವಾಗಿ ವೈದ್ಯಕೀಯ ಚಿಕಿತ್ಸೆ ಸೇವೆ ಸಿಗುತ್ತಿದೆ ಎಂದು ದಾಖಲಾಗಿರುವ ರೋಗಿಗಳು ತಿಳಿಸಿದರು.
ತುರ್ತು ಅವಶ್ಯಕತೆಗಾಗಿ ಆಮ್ಲಜನಕ ಪ್ಲಾಂಟ್‌ಅನ್ನು ಕೂಡಲೇ ದುರಸ್ತಿಗೊಳಿಸಬೇಕು. ಆಸ್ಪತ್ರೆಯ ವೈಧ್ಯಾಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರ ಕಾರ್ಯವೈಖರಿ ಬಗ್ಗೆ ಜನರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಈ ಸೇವಾ ಮನೋಭಾವನೆ ಮುಂದುವರೆಸಿಕೊಂಡು ಹೋಗಬೇಕೆಂದು ಜಿಲ್ಲಾ ನ್ಯಾಯಾಧೀಶರು ತಿಳಿಸಿದರು.
ಕಾನೂನು ನೆರವಿನ ಅಗತ್ಯವಿದ್ದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಥವಾ ತಾಲೂಕು ಕಾನೂನು ಸೇವಾ ಸಮಿತಿಯನ್ನು ಸಂಪರ್ಕಿಸಬಹುದೆಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯವರೂ ಆದ ಹಿರಿಯ ಸಿವಿಲ್ ನ್ಯಾಯಾಧೀಶ ಎಂ. ಶ್ರೀಧರ ಸಲಹೆ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.