14ಕ್ಕೆ ವಡ್ಡಗೆರೆ ಕೆರೆಗೆ ಕಬಿನಿ ನೀರು
Team Udayavani, Dec 7, 2019, 12:32 PM IST
ಗುಂಡ್ಲುಪೇಟೆ: ಡಿ.14ರಂದು ತಾಲೂಕಿನ ಹುತ್ತೂರು ಕೆರೆಯಿಂದ ವಡ್ಡಗೆರೆ ಕೆರೆಗೆ ಕಬಿನಿ ನೀರು ಹರಿಸಲಾಗುವುದು ಎಂದು ಎಂದು ಶಾಸಕ ಸಿ.ಎಸ್.ನಿರಂಜನಕುಮಾರ್ ಹೇಳಿದರು.
ತಾಲೂಕಿನ ಕೊಡಸೋಗೆಯಲ್ಲಿ 20 ಲಕ್ಷ ರೂ. ವೆಚ್ಚದ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿ, ಹುತ್ತೂರು ಕೆರೆಯಿಂದ ವಡ್ಡಗೆರೆ ಕೆರೆಗೆ ಕಬಿನಿ ನದಿ ಮೂಲದಿಂದ ನೀರು ಹರಿಸುವ ಕಾರ್ಯವನ್ನು ಡಿ.14ರಂದು ಸಚಿವ ಸುರೇಶ್ ಕುಮಾರ್ ನೆರವೇರಿಸಲಿದ್ದಾರೆ. ಜಿಲ್ಲೆಯ ಕೆರೆಗಳಿಗೆ ನದಿ ಮೂಲದ ನೀರು ತುಂಬಿಸಲು ಕಾರಣರಾದ ಸಿಎಂ ಯಡಿಯೂರಪ್ಪ ಅವರಿಂದಲೇ ಚಾಲನೆ ಕೊಡಲು ಉದ್ದೇಶಿಸಿದ್ದರೂ, ದಿನಾಂಕಗಳು ಸಾಧ್ಯವಾಗದ ಹಿನ್ನೆಲೆಯಲ್ಲಿ ಸಚಿವ ಸುರೇಶ್ ಕುಮಾರ್ ಅವರಿಂದ ಚಾಲನೆ ನೀಡಲಾಗುವುದು. ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಕರೆಸಿ ರೈತರ ಜನತೆಯ ಪರವಾಗಿ ಸನ್ಮಾನಿಸಲಾಗುವುದು ಎಂದರು.
ಪಾಪಿಗಳಿಗೆ ಎಚ್ಚರಿಕೆ ಗಂಟೆ: ಹೈದರಾಬಾದ್ ಮೂಲದ ಅತ್ಯಾಚಾರಿಗಳನ್ನು ಎನ್‌ಕೌಂಟರ್ ಮಾಡುವ ಮೂಲಕ ಪೊಲೀಸ್ ಅಧಿಕಾರಿ ವಿಶ್ವನಾಥ್ ಸಜ್ಜನರ್ ದುರ್ಜನರಿಗೆ ತಕ್ಕ ಶಾಸ್ತಿ ಮಾಡಿದ್ದಾರೆ. ಇದು ಪಾಪಿಗಳಿಗೆ ಎಚ್ಚರಿಕೆಯ ಗಂಟೆ. ಹತ್ಯೆ ವಿಚಾರದಲ್ಲಿ ವಿಳಂಬವಿಲ್ಲದೆ ನ್ಯಾಯ ದೊರಕಿದಂತಾಗಿದ್ದು, ಅವರ ಕುಟುಂಬಕ್ಕೂ ಸ್ವಲ್ಪವಾದರೂ ಸಮಾಧಾನ ದೊರಕಿದೆ ಎಂದು ಹೇಳಿದರು.
ಈ ವೇಳೆ ಮುಖಂಡ ಕೊಡಸೋಗೆ ಶಿವಬಸಪ್ಪ, ಮಹದೇವ ಪ್ರಸಾದ್, ರಾಜು, ಮಲ್ಲಿಕಾರ್ಜುನ್, ಜಗದೀಶ್ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ
Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು
Minister K.J. George: ಒಂದೇ ದಿನದಲ್ಲಿ 2500 ಲೈನ್‌ಮ್ಯಾನ್ ನೇಮಕ ಸಂದರ್ಶನ
Bandipur: ಸಫಾರಿಯಲ್ಲಿ ಪ್ರವಾಸಿಗರ ಮುಂದೆಯೇ ಜಿಂಕೆ ಬೇಟೆಯಾಡಿದ ಚಿರತೆ
Birla Opus Paints: ಚಾಮರಾಜನಗರದಲ್ಲಿ ಬಿರ್ಲಾ ಒಪಸ್ ಪೇಂಟ್ಸ್ 4ನೇ ಕಾರ್ಖಾನೆ ಆರಂಭ
MUST WATCH
ಹೊಸ ಸೇರ್ಪಡೆ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ
Love Reddy: ತೆರೆಗೆ ಬಂತು ʼಲವ್ ರೆಡ್ಡಿʼ
Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.