ತುಂಡಾಗಿ ಬಿದ್ದಿದ್ದ ಹೈಟೆನ್ಷನ್ ವಿದ್ಯುತ್ ತಂತಿ ತಗುಲಿ ರೈತ ಸಾವು:ಕರಕಲಾಗಿ ಬೇರ್ಪಟ್ಟ ರುಂಡ!
Team Udayavani, Apr 19, 2021, 10:20 AM IST
ಚಾಮರಾಜನಗರ: ಜಮೀನಿನಲ್ಲಿ ಹಾದು ಹೋಗಿದ್ದ 11 KV ಹೈಟೆನ್ಷನ ವಿದ್ಯುತ್ ತಂತಿಗೆ ಸಿಲುಕಿ ರೈತನೋರ್ವ ದಾರುಣವಾಗಿ ಮೃತಪಟ್ಟ ಘಟನೆ ತಾಲೂಕಿನ ಕಾಳನಹುಂಡಿ ರಸ್ತೆಯ ಕಟ್ಟೇಪುರ ಬಳಿಯ ಜಮೀನೊಂದರಲ್ಲಿ ನಡೆದಿದೆ.
ಭಾನುವಾರ ರಾತ್ರಿ 9.30ರ ಸುಮಾರಿಗೆ ವೇಲುಸ್ವಾಮಿ (55 ವ) ಎಂಬ ರೈತ ಜಮೀನಿನಲ್ಲಿ ನೀರು ಎತ್ತುವ ಮೋಟಾರ್ ಸ್ವಿಚ್ ಆನ್ ಮಾಡಲು ಹೋಗಿದ್ದಾರೆ. ಪಕ್ಕದಲ್ಲೇ ಹಾದುಹೋಗಿರುವ 11 ಕೆವಿ ವಿದ್ಯುತ್ ತಂತಿ ತುಂಡಾಗಿ ನೇತಾಡುತ್ತಿತ್ತು. ಕತ್ತಲೆಯಲ್ಲಿ ಇದನ್ನು ಗಮನಿಸದೇ, ಅವರ ತಲೆಗೆ ವಿದ್ಯುತ್ ತಂತಿ ಸ್ಪರ್ಶಿಸಿ ಮೃತಪಟ್ಟಿದ್ದಾರೆ. ರುಂಡ ಸುಟ್ಟು ಕರಕಲಾಗಿ ತಂತಿಗೇ ಅಂಟಿಕೊಂಡಿದೆ. ರುಂಡ-ಮುಂಡ ಬೇರೆಯಾಗಿ ಬಿದ್ದಿವೆ. ತಲೆ ಮೂರು ಅಡಿ ಎತ್ತರದ ಲೈನ್ ನಲ್ಲಿ ಸಿಲುಕಿ ನೇತಾಡುತ್ತಿದ್ದರೆ, ದೇಹ ಕೆಳಗಿ ಬಿದ್ದಿದೆ.
ಇದನ್ನೂ ಓದಿ:ಕಂಬಳದ ಪಯಣ ಕೊನೆಗೊಳಿಸಿ ಕಾಲನ ಕರೆಗೆ ಓಗೊಟ್ಟ ‘ಬೋಳಂತೂರು ಕಾಟಿ’
ಸ್ಥಳಕ್ಕೆ ಸೆಸ್ಕ್ ಸಿಬ್ಬಂದಿ, ಪೊಲೀಸರು ಭೇಟಿ ನೀಡಿದ್ದಾರೆ.
ಜಮೀನುಗಳಲ್ಲಿ ಹಾದು ಹೋಗಿರುವ ಹೈಟೆನ್ಷನ್ ವಿದ್ಯುತ್ ತಂತಿಗಳು ನೇತಾಡುತ್ತಿದ್ದರೂ ಅದನ್ನು ನಿರ್ವಹಣೆ ಮಾಡಿ ಎತ್ತಿ ಬಿಗಿ ಮಾಡದ ಕಾರಣ ಇಂಥ ಅವಘಡಗಳು ಸಂಭವಿಸುತ್ತಿದ್ದು, ಘಟನೆಗೆ ಕಾರಣರಾದವರ ವಿರುದ್ದ ಕ್ರಮ ಕೈಗೊಳ್ಳಬೇಕು. ಮೃತ ರೈತನ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್ ಡಿಕ್ಕಿ: ಮೊಪೆಡ್ ಸವಾರ ಸಾವು
Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ
Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ
Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು
Minister K.J. George: ಒಂದೇ ದಿನದಲ್ಲಿ 2500 ಲೈನ್‌ಮ್ಯಾನ್ ನೇಮಕ ಸಂದರ್ಶನ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.