ಚಾಮರಾಜನಗರ: ಮಹಾದೇವ ಶಂಕನಪುರ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ

Team Udayavani, Oct 31, 2021, 6:09 PM IST

ಚಾಮರಾಜನಗರ: ಮಹಾದೇವ ಶಂಕನಪುರ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ

ಚಾಮರಾಜನಗರ/ಕೊಳ್ಳೇಗಾಲ: ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಗಣ್ಯರಿಗೆ ನೀಡಲಾಗುವ ರಾಜ್ಯ ಸರ್ಕಾರದ,  2020-21ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ  ಸಾಹಿತ್ಯ ಕ್ಷೇತ್ರದಿಂದ ಜಿಲ್ಲೆಯ ಪ್ರಮುಖ ಸಾಹಿತಿ, ಕವಿ, ಮಹಾದೇವ ಶಂಕನಪುರ ಆಯ್ಕೆಯಾಗಿದ್ದಾರೆ.

ಮಹಾದೇವ ಅವರು ಕೊಳ್ಳೇಗಾಲ ಪಕ್ಕದ ಶಂಕನಪುರ ಗ್ರಾಮದವರು.  ನಿವೃತ್ತ ಸಹಾಯಕ ಪ್ರಾಧ್ಯಾಪಕರು. ವಿಶೇಷವಾಗಿ ಜಾನಪದ ಆಧಾರಿತ ಕೃತಿಗಳ ಲೇಖಕರು. ಮಾರಿಹಬ್ಬಗಳು, ಮಂಟೇಸ್ವಾಮಿ ಮೂವ್‌ಮೆಂಟ್, ಚಿಕ್ಕಲ್ಲೂರು ಜಾತ್ರೆ, ಚಾಮರಾಜನಗರ ಜಿಲ್ಲೆಯ ಜನಪದ ಕಲಾವಿದರ ಪರಿಚಯ, ನಾಲಿಗೆ ಮೇಲಿನ ಚರಿತೆ ಲೇಖನಗಳ ಸಂಗ್ರಹ, ಉರಿಗದ್ದಿಗೆ ಮೇಲೆ ಬೋಳು ಜಂಗಮನ ತಂಬೂರಿ ಪದ, ಮಲೆಯ ಮಾದಯ್ಯನ ಸಾಂಸ್ಕೃತಿಕ ಜಾತ್ರೆ, ಮಂಟೇಸ್ವಾಮಿ ಮೌಖಿಕ ಚರಿತ್ರೆ  ಮುಂತಾದ ಕೃತಿಗಳನ್ನು ರಚಿಸಿದ್ದಾರೆ.

ಮಾರಿಹಬ್ಬಗಳೂ ಕೃತಿಗೆ 2002 ಕರ್ನಾಟಕ ಜಾನಪದ ಅಕಾಡೆಮಿ ಮತ್ತು ಯಕ್ಷಗಾನ ಅಕಾಡೆಮಿ ಪ್ರಶಸ್ತಿ, 2002 ಮೈಸೂರು ವಿಶ್ವವಿದ್ಯಾಲಯದ ತೀನಂಶ್ರೀ, ಕರ್ನಾಟಕ ದಲಿತ ಸಾಹಿತ್ಯ ಪರಿಷತ್ ಪ್ರಶಸ್ತಿ, ಮಂಟೇಸ್ವಾಮಿ ಪ್ರತಿಷ್ಠಾನ, ಮುಳ್ಳೂರು ನಾಗರಾಜ ಕಾವ್ಯ ಪ್ರಶಸ್ತಿಗಳು ದೊರೆತಿವೆ. ಕವಿಯಾಗಿ ಸಾಹಿತ್ಯ ವಲಯದಲ್ಲಿ  ಚಿರಪರಿಚಿತರಾಗಿರುವ ಮಹಾದೇವ ಅವರ ಅನೇಕ ಕವಿತೆಗಳು ನಾಡಿನ ಪ್ರಸಿದ್ಧ ಪತ್ರಿಕೆಗಳಲ್ಲಿ ಪ್ರಕಟವಾಗಿ, ಸ್ಪರ್ಧೆಗಳಲ್ಲಿ ಬಹುಮಾನ ಪಡೆದಿವೆ.

ಕೊಳ್ಳೇಗಾಲ ತಾಲೂಕು ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿದ್ದರು. ಈಶಾನ್ಯ ಭಾರತ ರಾಜ್ಯಗಳ ಕವಿ ಸಮ್ಮೇಳನದಲ್ಲಿ ಭಾಗವಹಿಸಿದ್ದರು.

ಪ್ರಶಸ್ತಿ ಬಂದಿದ್ದು ಸಂತಸ ತಂದರೂ, ನಮ್ಮ ಜಿಲ್ಲೆಯ ರಾಯಭಾರಿ ಪುನೀತ್ ರಾಜ್‌ಕುಮಾರ್ ಅವರ ಅಗಲಿಕೆಯ ಸನ್ನಿವೇಶದಲ್ಲಿ ಆ ಸಂಭ್ರಮವನ್ನು ಆಸ್ವಾದಿಸಲಾಗುತ್ತಿಲ್ಲ  ಎಂದು  ಈ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ  ಸಾಹಿತಿ, ಕವಿ ಮಹಾದೇವ ಶಂಕನಪುರ ಪ್ರತಿಕ್ರಿಯಿಸಿದರು.

ರಾಜ್ಯೋತ್ಸವ ಪ್ರಶಸ್ತಿ ಘೋಷಣೆಯಾದ ಹಿನ್ನೆಲೆಯಲ್ಲಿ ಉದಯವಾಣಿ ಅವರ ನಿವಾಸಕ್ಕೆ ಭೇಟಿ ನೀಡಿ ಮಾತನಾಡಿಸಿದಾಗ, ಖ್ಯಾತ ನಟ ಪುನೀತ್ ರಾಜ್‌ಕುಮಾರ್ ನಿಧನರಾಗಿದ್ದಾರೆ. ಕನ್ನಡ ನಾಡು  ಪ್ರತಿಭಾವಂತ ಕಲಾವಿದನನ್ನು ಕಳೆದುಕೊಂಡಿದೆ. ಅವರು ನಮ್ಮ ಜಿಲ್ಲೆಯವರು, ನಮ್ಮ ಮಣ್ಣಿನ ಮಕ್ಕಳು. ಇಂಥ ಸೂತಕದ ಛಾಯೆಯ ಸಂದರ್ಭದಲ್ಲಿ ಪ್ರಶಸ್ತ್ತಿ ಘೋಷಣೆಯಾಗಿದೆ. ಇದು ವೈಯಕ್ತಿಕವಾಗಿ ಒಂದು ಕಡೆ ಸಂತೋಷವಾದರೂ, ಸಾರ್ವಜನಿಕವಾಗಿ ಸಂಭ್ರಮಿಸಲು ಆಗುತ್ತಿಲ್ಲ. ನಮ್ಮ ಮನೆಯ ಬಂಧುವನ್ನು ಕಳೆದುಕೊಂಡಂತಾಗಿದೆ. ಜಿಲ್ಲೆಯ ಸಾಂಸ್ಕೃತಿಕ ರಾಯಭಾರಿಯಾಗಿದ್ದರು. ಕನ್ನಡ ಭಾಷೆ ಸಂಸ್ಕೃತಿಯ ಅಸ್ಮಿತೆಯಾಗಿದ್ದರು. ಈ ಘಳಿಗೆ ಪ್ರಶಸ್ತಿ ಸಂಭ್ರಮ ಆಸ್ವಾದಿಸಲಾಗುತ್ತಿಲ್ಲ ಎಂದರು.

ಪ್ರಶಸ್ತಿ ಬಂದಿದ್ದು, ಇಲ್ಲಿಯವರೆಗೆ ಮಾಡಿದ ಸಾಹಿತ್ಯದ ಕೆಲ ಗುರುತಿಸಿ ಸರ್ಕಾರ ನನಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿರುವುದು ಸಂತಸ ತಂದಿದೆ.  ಮೊದಲು ನಾವೇ ಅರ್ಜಿ ಹಾಕಬೇಕಿತ್ತು. ಆದರೆ ಈ ಬಾರಿ ವಿನೂತನ ರೀತಿಯಲ್ಲಿ ಜನರು ಗುರುತಿಸಿ ಪ್ರಶಸ್ತಿ ನೀಡಿದ್ದಾರೆ. ಪ್ರಶಸ್ತಿಗೆ ನನ್ನನ್ನು ನಾಮಕರಣ ಮಾಡಿದ, ಹಿತೈಷಿಗಳು, ನನ್ನ ವಿದ್ಯಾರ್ಥಿಗಳು, ಸಾರ್ವಜನಿಕರೆಲ್ಲರಿಗೂ ಕೃತಜ್ಞತೆಗಳು ಎಂದರು.

ಈ ಪ್ರಶಸ್ತಿಯನ್ನು ಜಿಲ್ಲೆಯ ಮಹಾಕಾವ್ಯಗಳನ್ನು ಕಟ್ಟಿ ಬೆಳೆಸಿದ ಜನಪದ ಗಾಯಕರಿಗೆ  ಅರ್ಪಿಸುತ್ತೇನೆ.. ಮಲೆ ಮಹದೇಶ್ವರ, ಮಂಟೆಸ್ವಾಮಿ, ಬಿಳಿಗಿರಿರಂಗಯ್ಯ, ಮುಡುಕುತೊರೆ ಮಲ್ಲಯ್ಯ ಈ ಮಹಾಕಾವ್ಯಗಳನ್ನು ಕಟ್ಟಿದವರು ನನ್ನ ಸಾಹಿತ್ಯದ ಮೂಲ ಬೇರುಗಳು. ಸಂಸ್ಕೃತಿಯ ನಿರ್ಮಾತೃಗಳು. ನನಗೆ ಸಂದಿರುವ ಈ ಪ್ರಶಸ್ತಿಯನ್ನು ಮೌಖಿಕ ಪರಂಪರೆಯ ವಕ್ತಾರರಿಗೆ ಅರ್ಪಿಸುತ್ತೇನೆ ಎಂದು ಮಹಾದೇವ ವಿನೀತರಾಗಿ ನುಡಿದರು.

ಟಾಪ್ ನ್ಯೂಸ್

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಪಿಕ್ಸ್

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಫಿಕ್ಸ್

1-wewrewre

The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

101

Daali Dhananjay: ಸರಳವಾಗಿ ನೆರವೇರಿತು ಡಾಲಿ – ಧನ್ಯತಾ ನಿಶ್ಚಿತಾರ್ಥ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gundlupet-Arrest

Gundlupet: ಜಿಂಕೆ ಮಾಂಸ ಸಾಗಾಣೆ: ಐವರ ಬಂಧಿಸಿದ ಅರಣ್ಯಾಧಿಕಾರಿಗಳು

10

Kollegala: ಎತ್ತಿನಗಾಡಿಗೆ ಸಾಮ್ರಾಟ್ ಟರ್ಬೇ ವಾಹನ ಡಿಕ್ಕಿ; ಎತ್ತು ಸಾವು

9-kollegala

Kollegala: ಕಲುಷಿತ ನೀರು ಸೇವಿಸಿ ನಾಲ್ವರು ಆಸ್ಪತ್ರೆಗೆ ದಾಖಲು

Elephanat-1

Chamarajanagara: ವಕ್ರದಂತ ಹೊಂದಿದ್ದ ಕಾಡಾನೆ ಸ್ವಾಭಾವಿಕ ಸಾವು

Gundlupete: ನಿಯಂತ್ರಣ ತಪ್ಪಿ ಬೈಕ್‌ನಿಂದ ಬಿದ್ದ ಸವಾರ ಸಾವು

Gundlupete: ನಿಯಂತ್ರಣ ತಪ್ಪಿ ಬೈಕ್‌ನಿಂದ ಬಿದ್ದ ಸವಾರ ಸಾವು

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಪಿಕ್ಸ್

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಫಿಕ್ಸ್

1-wewrewre

The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ

Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ

Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ

3

Mangaluru: ಅನಧಿಕೃತ ಫ್ಲೆಕ್ಸ್‌ , ಬ್ಯಾನರ್‌ ತೆರವು ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.