ಉದ್ದಿಮೆ ಉತ್ತೇಜಿಸಲು ಕಿರಣ್‌ ಶಾ ರಾಯಭಾರಿಯನ್ನಾಗಿಸಿ


Team Udayavani, Mar 10, 2021, 3:14 PM IST

ಉದ್ದಿಮೆ ಉತ್ತೇಜಿಸಲು ಕಿರಣ್‌ ಶಾ ರಾಯಭಾರಿಯನ್ನಾಗಿಸಿ

ಚಾಮರಾಜನಗರ: ಜಿಲ್ಲೆಯಲ್ಲಿ ಆಹಾರ ಸಂಸ್ಕರಣ ಉದ್ದಿಮೆಗಳು ಮತ್ತು ಜೈವಿಕ ತಂತ್ರಜ್ಞಾನ ಉದ್ದಿಮೆಗಳನ್ನು ಸ್ಥಾಪಿಸಲುಸಂಪನ್ಮೂಲ ಲಭ್ಯತೆ ಹೇರಳವಾಗಿರುವು ದರಿಂದ ಅವುಗಳ ಸದುಪಯೋಗಕ್ಕಾಗಿ ಬಯೋಕಾನ್‌ ಅಧ್ಯಕ್ಷ, ಉದ್ಯಮಿ ಕಿರಣ್‌ ಮಜುಂದಾರ್‌ ಶಾ ಅವರನ್ನು ಚಾರಾಜನಗರ ಜಿಲ್ಲಾ ರಾಯಭಾರಿಯಾಗಿ ಆಹ್ವಾನಿಸಬೇಕು ಎಂದು ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘದ (ಕಾಸಿಯಾ) ಅಧ್ಯಕ್ಷ ಕೆ.ಬಿ. ಅರಸಪ್ಪ ಆಗ್ರಹಿಸಿದರು.

ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿ ನಡೆಸಿದ ಅವರು, ಭಾವಿ ಕೈಗಾರಿಕೋದ್ಯಮಿಗಳಿಗೆ ಹಾಗೂ ನವೋದ್ಯಮ ಗಳಿಗಾಗಿ ಪ್ರತಿ ಜಿಲ್ಲೆಯಲ್ಲಿ ಹೊಸ ಕೈಗಾರಿಕಾ ಪ್ರದೇಶಗಳನ್ನು ಅಭಿವೃದ್ಧಿಪಡಿಸಲು ತಕ್ಷಣ ಕ್ರಮ ಕೈಗೊಳ್ಳುವಂತೆ ಕೆಐಎಡಿಬಿ/ಕೆಎಎಸ್‌ ಎಸ್‌ಐಡಿಸಿ ಗಳಿಗೆ ರಾಜ್ಯ ಸರ್ಕಾರ ಸೂಚಿಸಬೇಕು ಎಂದರು. ಚಾಮರಾಜನಗರ ಜಿಲ್ಲೆಯ ಸಂತೇಮರಳ್ಳಿಯಿಂದ ಮೂಗೂರು ಕ್ರಾಸ್‌ ವರೆಗಿನ 12 ಕಿ.ಮೀ. ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಪರಿವರ್ತಿಸಬೇಕು ಎಂದರು.

ಉದ್ಯಮಶೀಲತೆ ತರಬೇತಿಯ ಮೂಲಕ ಗ್ರಾಮೀಣ ಯುವಜನರ ಉದ್ಯಮಶೀಲತಾಸಾಮರ್ಥ್ಯವನ್ನು ಹೆಚ್ಚಿಸಲು ಹಾಗೂತರಬೇತಿ ಪಡೆದ ನಂತರ ಉದ್ದಿಮೆಗಳನ್ನುಪ್ರಾರಂಭಿಸಲು ನಿಯಮಗಳನ್ನು ಸಡಿಲಿಸಿ ತ್ವರಿತ ಸಾಲ ವಿತರಣಾ ವ್ಯವಸ್ಥೆಯನ್ನು ರೂಪಿಸಲು ಸೂಕ್ಷ್ಮ ಉದ್ಯಮಗಳಿಗೆ ಮೀಸಲಾದ ಯೋಜನೆಗಳನ್ನು ರಾಜ್ಯ ಸರ್ಕಾರ ಘೋಷಿಸಬೇಕು. ಎಂಎಸ್‌ಎಂಇಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ನೇರವಾಗಿಅರ್ಥಮಾಡಿಕೊಳ್ಳುವ ಹಾಗೂ ರಾಜ್ಯದ ವಿವಿಧ ಭಾಗಗಳಲ್ಲಿ ಉತ್ಪಾದನೆಯನ್ನು ಉತ್ತೇಜಿಸುವ ಉದ್ದೇಶದಿಂದ ಜಿಲ್ಲೆಗಳು ಮತ್ತು ವಿವಿಧ ಪ್ರದೇಶಗಳಿಗೆ ಕಾಸಿಯಾ ಭೇಟಿ ನೀಡುತ್ತಿದ್ದು, ಅದರ ಭಾಗವಾಗಿ ಚಾ.ನಗರಕ್ಕೂ ಭೇಟಿ ನೀಡಿದ್ದೇವೆ ಎಂದರು.

ಸೂಕ್ಷ್ಮ ಮತ್ತು ಸಣ್ಣ ಪ್ರಮಾಣದ ಕೈಗಾರಿಕೆಗಳಿಗೆ ಶೇ.4 ರ ಬಡ್ಡಿ ದರದಲ್ಲಿ ಕೆಎಸ್‌ಎಫ್ಸಿ ನೀಡುತ್ತಿರುವ ಸಾಲಗಳು ತುಂಬಾ ಉಪಯುಕ್ತವಾಗಿರುವುದರಿಂದ,ಸಹಾಯಧನ ಅಂತರವನ್ನು ಪೂರೈಸಲುಕೆಎಸ್‌ಎಫ್ಸಿಗೆ ಹೆಚ್ಚುವರಿಯಾಗಿ 300 ಕೋಟಿ ರೂ. ನೀಡಬೇಕು ಎಂದರು.

ಕೈಗಾರಿಕಾ ಪ್ರದೇಶಗಳ ನಿರ್ವಹಣೆಗಾಗಿ ಕರ್ನಾಟಕ ಕೈಗಾರಿಕಾ ಪ್ರದೇಶ ಮೂಲ ಸೌಕರ್ಯ ಅಭಿವೃದ್ಧಿ ನಿಗಮ ಎಂಬ ಪ್ರತ್ಯೇಕ ಸಂಸ್ಥೆಯನ್ನು ತ್ವರಿತವಾಗಿ ಪ್ರಾರಂಭಿಸಬೇಕು. ಎಂಎಸ್‌ಎಂಇಗಳಿಗೆ ಹೆಚ್ಚಿನ ಹೊರೆಯಾ ಗಿರುವ ಗಗನಕ್ಕೇರುತ್ತಿರುವ ಪೆಟೊ›àಲ್‌ ಮತ್ತು ಡೀಸೆಲ್‌ ದರ ಇಳಿಸಬೇಕು. ಕೋವಿಡ್‌ -19 ಸಾಂಕ್ರಾಮಿಕವನ್ನು ನಿಭಾಯಿಸಲು ಎಂಎಸ್‌ಎಂಇಗಳಿಗೆ ಅನುವಾಗುವಂತೆ ಉತ್ಪನ್ನಗಳ ಮೇಲಿನ ಜಿಎಸ್‌ಟಿ ಸ್ಲಾಬ್‌ ಅನ್ನು ಕಡಿಮೆ ಮಾಡಲು ಕೋರಲಾಗಿದೆ ಎಂದರು.

ಗೋಷ್ಠಿಯಲ್ಲಿ ಕಾಸಿಯಾ ಗೌರವ ಪ್ರಧಾನ ಕಾರ್ಯದರ್ಶಿ ಎನ್‌.ಆರ್‌. ಜಗದೀಶ್‌, ಜಂಟಿ ಕಾರ್ಯದರ್ಶಿ ಪಿ.ಎನ್‌. ಜೈಕುಮಾರ್‌, ಚಾ.ನಗರ ಸಣ್ಣ ಕೈಗಾರಿಕೆಗಳ ಸಂಘದ ಅಧ್ಯಕ್ಷ ಎ.ಜಯಸಿಂಹ, ಗ್ರಾಮೀಣಾಭಿವೃದ್ಧಿ ಅಧ್ಯಕ್ಷ ಸುಬ್ರಹ್ಮಣಿಯನ್‌ ಮತ್ತಿತರರಿದ್ದರು.

 

ಬದನಗುಪ್ಪೆ ಕೈಗಾರಿಕಾ ವಲಯದಲ್ಲಿ ಸೌಲಭ್ಯ ಕಲ್ಪಿಸಿ : ಬದನಗುಪ್ಪೆ ಕೈಗಾರಿಕಾ ವಸಾಹತುಗಳಲ್ಲಿ ನೀರು ಸರಬರಾಜಿನ ಕೊರತೆಯಿಂದಾಗಿ ಕೈಗಾರಿಕೋದ್ಯಮಿಗಳು ತೊಂದರೆಗೀಡಾಗಿದ್ದಾರೆ. ಈ ಸಮಸ್ಯೆ ಬಗೆಹರಿಸಬೇಕು. ಕೈಗಾರಿಕೀಕರಣದಲ್ಲಿ ಚಾಮರಾಜನಗರ ಹಿಂದುಳಿದ ಜಿಲ್ಲೆಯಾಗಿರುವುದರಿಂದ, ನೂತನ ಉದ್ದಿಮೆ ಪ್ರೋತ್ಸಾಹಿಸುವ ಸಲುವಾಗಿ ಜಿಲ್ಲೆಯಲ್ಲಿ ನೂತನ ಉದ್ದಿಮೆಗಳಿಗೆ 5 ವರ್ಷಗಳ ಕಾಲ ಜಿಎಸ್‌ಟಿ, ಪಿಎಫ್ ಮತ್ತು ಇಎಸ್‌ಐ ಆಸ್ತಿ ತೆರಿಗೆ ಹಾಗೂ ವಿದ್ಯುತ್‌ಬಳಕೆಯ ತೆರಿಗೆ ಪಾವತಿಯಿಂದ ವಿನಾಯಿತಿ ನೀಡಬೇಕು.ಬದನಗುಪ್ಪೆ-ಕೆಲ್ಲಂಬಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕ್ರಿಮಿನಲ್‌ ಚಟುವಟಿಕೆಗಳು ಹೆಚ್ಚಾಗುತ್ತಿದು ತ್ವರಿತವಾಗಿ ಒಂದು ಪೊಲೀಸ್‌ ಠಾಣೆ ತೆರೆಯಬೇಕು. ಬದನಗುಪ್ಪೆ ಕೆಲ್ಲಂಬಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಸಬ್‌-ಸ್ಟೇಷನ್‌ ಕಾರ್ಯಾಚರಣೆ ಆರಂಭಿಸಲು ಸೆಸ್ಕ್ ವಿಳಂಬ ನೀತಿ ಅನುಸರಿಸುತ್ತಿದ್ದು, ತ್ವರಿತವಾಗಿ ಸಬ್‌-ಸ್ಟೇಶನ್‌ ಆರಂಭಿಸುವಂತೆ ಸೆಸ್ಕ್ಗೆ ಆದೇಶಿಸಬೇಕು ಎಂದು ಕಾಸಿಯಾ ಅಧ್ಯಕ್ಷರು ತಿಳಿಸಿದರು.

ಟಾಪ್ ನ್ಯೂಸ್

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

6-gundlupete

Gundlupete: ಬೈಕ್ ಗೆ ಗುದ್ದಿದ ಪಿಕ್ ಅಪ್; ಸವಾರರ ಕಾಲು ಮುರಿತ

Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ

Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ

Gundlupet Bus Stand: ಮೂಲ ಸೌಲಭ್ಯ ವಂಚಿತ ಬೇಗೂರು ಬಸ್‌ ನಿಲ್ದಾಣ

Gundlupet Bus Stand: ಮೂಲ ಸೌಲಭ್ಯ ವಂಚಿತ ಬೇಗೂರು ಬಸ್‌ ನಿಲ್ದಾಣ

1-eewqe

Kollegala; ಮಾಜಿ ಶಾಸಕ ಎಸ್.ಜಯಣ್ಣ ಅಂತಿಮ ದರ್ಶನ ಪಡೆದ ಸಿಎಂ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

3

Brahmavar: ಕೊಕ್ಕರ್ಣೆ; ಜುಗಾರಿ ನಿರತನ ಬಂಧನ

8

Kundapura: ಬೋಟ್‌ ರೈಡರ್‌ ನಾಪತ್ತೆ; ಸಿಗದ ಸುಳಿವು

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

13

Kundapura: ಮನೆಗೆ ನುಗ್ಗಿ ಚಿನ್ನಾಭರಣ ಕಳವು

POlice

Brahmavar: ಬೆಳ್ಮಾರು; ಕೋಳಿ ಅಂಕಕ್ಕೆ ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.