ಕೆಲಸೂರು ಸೀಲ್‌ಡೌನ್: ಶಾಸಕರ ಭೇಟಿ
Team Udayavani, Jul 9, 2020, 5:08 AM IST
ಗುಂಡ್ಲುಪೇಟೆ: ತಾಲೂಕಿನ ವಿವಿಧ ಗ್ರಾಮಗಳಲ್ಲಿ ಕೋವಿಡ್ 19 ಸೋಂಕು ಧೃಡಪಟ್ಟ ಹಿನ್ನೆಲೆಯಲ್ಲಿ ಸೀಲ್ ಡೌನ್‌ಗೆ ಒಳಗಾಗಿರುವ ತಾಲೂಕಿನ ಕೆಲಸೂರು ಗ್ರಾಮಕ್ಕೆ ಶಾಸಕ ನಿರಂಜನಕುಮಾರ್ ಭೇಟಿ ನೀಡಿ ಪರಿಶೀಲಿಸಿ ಗ್ರಾಮಸ್ಥರಿಗೆ ಧೈರ್ಯ ತುಂಬಿದರು. ಬಳಿಕ ಸೀಲ್‌ಡೌನ್ ಬೀದಿಯಲ್ಲಿನ ಗ್ರಾಮಸ್ಥರೊಂದಿಗೆ ಮಾತನಾಡಿ, ಕೋವಿಡ್ 19 ಬಗ್ಗೆ ಆತಂಕ ಬೇಡ. ಸಮರ್ಪಕ ಮುನ್ನೆಚ್ಚರಿಕೆ, ಅನಗತ್ಯವಾಗಿ ಮನೆಯಿಂದ ಹೊರಬರದಿರುವುದು,
ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ಮೂಲಕ ಸೋಂಕಿನಿಂದ ದೂರವಿರಲು ಸಾಧ್ಯವಿದೆ. ನಿರ್ಲಕ್ಷ್ಯ ಮಾಡದೇ ತಾಲೂಕು ಆಡಳಿತದೊಂದಿಗೆ ಸಹಕಾರ ನೀಡಬೇಕು ಎಂದು ಹೇಳಿದರು. ಇದೇ ಸಂದರ್ಭದಲ್ಲಿ ಸೀಲ್‌ಡೌನ್ ಪ್ರದೇಶದ ಜನತೆಗೆ ಅನುಕೂಲವಾಗುವಂತೆ ಮೂಲ ಸೌಕರ್ಯ ಗಳನ್ನು ಒದಗಿಸುವಂತೆ ಗ್ರಾಮ ಪಂಚಾ ಯಿತಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಈ ವೇಳೆ ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಹಂಗಳ ಪ್ರಣಯ್ ಮತ್ತು ವಿವಿಧ ಘಟಕಗಳ ಪದಾಧಿಕಾರಿಗಳು ಇದ್ದರು.
ಸಾರ್ವಜನಿಕ ಸ್ಥಳದಲ್ಲಿ ಸ್ಯಾನಿಟೈಸ್ ಸಿಂಪಡಣೆ: ಗುಂಡ್ಲುಪೇಟೆ ತಾಲೂಕಲ್ಲಿ ಕೋವಿಡ್ 19 ಸೋಂಕಿತರು ಹೆಚ್ಚು ದೃಢಪಟ್ಟಿರುವ ಕಾರಣ ಪಟ್ಟಣದ ಸಾರ್ವಜನಿಕರ ಸ್ಥಳಗಳಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ತಾಲೂಕು ಆಡಳಿತದಿಂದ ಸ್ಯಾನಿಟೈಸರ್ ಸಿಂಪಡಿಸಲಾಯಿತು. ಪಟ್ಟಣದ ತಾಲೂಕು ಕಚೇರಿ, ತಾಪಂ ಕಚೇರಿ, ಕೃಷಿ ಇಲಾಖೆ ಕಚೇರಿ, ಬಿಇಒ ಕಚೇರಿ, ಪುರಸಭೆ ಸೇರಿದಂತೆ ವಿವಿಧ ಸರ್ಕಾರಿ ಕಚೇರಿಗಳು ಹಾಗೂ ಸಾರಿಗೆ ಬಸ್ ನಿಲ್ದಾಣಗಳಿಗೆ ಅಗ್ನಿಶಾಮಕ ದಳದ ಸಿಬ್ಬಂದಿ ನೆರವಿನಿಂದ ಸ್ಯಾನಿಟೈಸರ್ ಸಿಂಪಡಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gundlupete: ಬೋನಿಗೆ ಬಿದ್ದ 3-4 ವರ್ಷದ ಗಂಡು ಚಿರತೆ; ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Eshwar Khandre: ಅರಣ್ಯದೊಳಗೆ ಏಕಬಳಕೆ ಪ್ಲಾಸ್ಟಿಕ್ ನಿಷೇಧ
Gundlupete: ಬಂಡೀಪುರದಲ್ಲಿ ವಾಹನಗಳ ಅಡ್ಡಗಟ್ಟಿದ ಕಾಡಾನೆ: ಆತಂಕ
Gundlupete: 5 ವರ್ಷ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಈಶ್ವರ್ ಖಂಡ್ರೆ
Gundlupete: ಚಿರತೆ ಸೆರೆಗಾಗಿ ಇರಿಸಿದ್ದ ಬೋನಿನಲ್ಲಿ ಸಿಲುಕಿದ ವ್ಯಕ್ತಿ!
MUST WATCH
ಹೊಸ ಸೇರ್ಪಡೆ
Charmady Ghat: ಬಿದಿರುತಳ ಅರಣ್ಯದಲ್ಲಿ ಕಾಡ್ಗಿಚ್ಚು
Puttur: ಅನಾಥ ಸ್ಥಿತಿಯಲ್ಲಿ ಎರಡು ಬೈಕ್; ವಶಕ್ಕೆ ಪಡೆದುಕೊಂಡ ಪೊಲೀಸರು
ತುಬಚಿ- ಬಬಲೇಶ್ವರ ಏತ ನೀರಾವರಿ: 3,048 ಎಕರೆ ಸ್ವಾಧೀನ, ಹಣ ಬಿಡುಗಡೆಗೆ ಎಂ.ಬಿ.ಪಾಟೀಲ ಸೂಚನೆ
Vijayapura; ಕಾರ್ಮಿಕರ ಕೂಡಿ ಹಾಕಿ ರಾಕ್ಷಸಿ ಕೃತ್ಯ: ಎಲ್ಲ 5 ಆರೋಪಿಗಳ ಬಂಧನ
Tarikere: ತಂದೆ ಸಾವಿನ ವಿಷಯ ಗೊತ್ತಿಲ್ಲದೆ ಹಸೆಮಣೆ ಏರಿದ ಮಗಳು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.