Gundlupete;ಕೇರಳಕ್ಕೆ ಅಕ್ರಮವಾಗಿ ಎಮ್ಮೆಗಳ ಸಾಗಣೆ: ಮೂವರ ಬಂಧನ
Team Udayavani, Jun 20, 2023, 8:52 AM IST
ಗುಂಡ್ಲುಪೇಟೆ(ಚಾಮರಾಜನಗರ): ಅಕ್ರಮವಾಗಿ ಕೇರಳಕ್ಕೆ ಎಮ್ಮೆಗಳನ್ನು ಲಾರಿ ಮೂಲಕ ಸಾಗಣೆ ಮಾಡುತ್ತಿದ್ದ ವೇಳೆ ಗುಂಡ್ಲುಪೇಟೆ ಪೊಲೀಸರು ದಾಳಿ ನಡೆಸಿ 9 ಎಮ್ಮೆಗಳನ್ನು ರಕ್ಷಣೆ ಮಾಡಿ ಮೂರು ಮಂದಿ ಆರೋಪಿಗಳನ್ನು ಬಂಧಿಸಿರುವ ಘಟನೆ ತಾಲೂಕಿನ ಮದ್ದೂರು ಚೆಕ್ ಪೋಸ್ಟ್ ಬಳಿ ಸೋಮವಾರ ರಾತ್ರಿ ನಡೆದಿದೆ.
ಅಶ್ರಫ್, ಇರ್ಫಾನ್, ಸಿಹಾಬ್ ಬಂಧಿತ ಆರೋಪಿಗಳು. ಮತ್ತೋರ್ವ ಆರೋಪಿ ಕೃಷ್ಣ ಸ್ಥಳದಿಂದ ಓಡಿ ಹೋಗಿದ್ದಾನೆ. ತಮಿಳುನಾಡು ನೋಂದಣಿಯ ಲಾರಿಯಲ್ಲಿ ಅಕ್ರಮವಾಗಿ ಎಮ್ಮೆಗಳನ್ನು ತುಂಬಿಕೊಂಡು ಕೇರಳಕ್ಕೆ ತೆರಳುತ್ತಿದ್ದ ಖಚಿತ ಮಾಹಿತಿ ಮೇರೆಗೆ ಗುಂಡ್ಲುಪೇಟೆ ಠಾಣೆ ಸಬ್ ಇನ್ಸ್ ಪೆಕ್ಟರ್ ಕಿರಣ್ ನೇತೃತ್ವದಲ್ಲಿ ದಾಳಿ ನಡೆಸಿ ಲಾರಿ ಸಮೇತ 9 ಎಮ್ಮೆಗಳನ್ನು ವಶಕ್ಕೆ ಪಡೆದು ಮೂವರನ್ನು ಬಂಧಿಸಲಾಗಿದೆ. ಇನ್ನೂ ಈ ಕುರಿತು ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾರ್ಯಾಚರಣೆಯಲ್ಲಿ ಪೊಲೀಸ್ ಪೇದೆಗಳಾದ ಪ್ರಕಾಶ್, ಶಶಿಧರಮೂರ್ತಿ, ಮಹೇಶ್ ಭಾಗವಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.