ಕಾಮಗಾರಿ ಪೂರ್ತಿಗೊಳಿಸಲು ಖಡಕ್‌ ಸೂಚನೆ


Team Udayavani, Jan 4, 2018, 3:15 PM IST

24th-CM.jpg

ಚಾಮರಾಜನಗರ: ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಕಟ್ಟಡ ಕಾಮಗಾರಿ ಪ್ರಗತಿಯಲ್ಲಿದೆ. ಇನ್ನು ಮೂರು ತಿಂಗಳ ಅವಧಿಯಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸಿ ಉದ್ಘಾಟನೆಗೆ ಸಜ್ಜುಗೊಳಿಸಬೇಕು ಎಂದು ನಗರಾಭಿವೃದ್ಧಿ ಪ್ರಾಧಿಕಾರದ (ಚುಡಾ) ಅಧ್ಯಕ್ಷ ಸುಹೇಲ್‌ ಅಲಿ ಖಾನ್‌ ಸೂಚಿಸಿದರು.

ನಗರದ ಜಿಲ್ಲಾಡಳಿತ ಭವನದಲ್ಲಿರುವ ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಸಭಾಂಗಣದಲ್ಲಿ ನಡೆದ  ಪ್ರಾಧಿಕಾರದ ಸಭೆಯಲ್ಲಿ ಮಾತನಾಡಿದ ಅವರು, ಎಸ್ಪಿ ಕಚೇರಿ ಹಿಂಭಾದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಸ್ವಂತ ಕಟ್ಟಡ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದೆ. ನೆಲ ಅಂತಸ್ತು ಕಾಮಗಾರಿ ಪೂರ್ಣವಾಗಿದೆ.

ಕಟ್ಟಡದ ಇನ್ನೂ ಹಲವು ಕಾಮಗಾರಿಗಳು ಬಾಕಿಯಿದ್ದು, ಇನ್ನು ಮೂರು ತಿಂಗಳ ಅವಧಿಯಲ್ಲಿ ನಿಗದಿ ಕಟ್ಟಡವನ್ನು ಪೂರ್ಣ ಮಾಡಬೇಕು. ಮೂರು ತಿಂಗಳ ನಂತರ ನೂತನ ಕಟ್ಟಡ ಉದ್ಘಾಟನೆಯಾಗಬೇಕು. ನೂತನ ಕಚೇರಿಯಲ್ಲಿ ಕೆಲಸ ನಿರ್ವಹಿಸುವಂತಾಗಬೇಕು. ಈ ಬಗ್ಗೆ ತ್ವರಿತ ಗತಿಯಲ್ಲಿ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾ ಕೇಂದ್ರವನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಹೆಚ್ಚಿನ ಅನುದಾನವನ್ನು ನೀಡಿದೆ. ಪಟ್ಟಣದ ವಿವಿಧ ರಸ್ತೆಗಳ ಅಭಿವೃದ್ಧಿ, ಅಗಲೀಕರಣ ಸೇರಿದಂತೆ ಅನೇಕ ಕಾಮಗಾರಿಗಳನ್ನು ನಡೆಸುತ್ತಿದೆ. ಇದರಿಂದ ನಗರದಲ್ಲಿ ಸುಲಲಿತ ಸಂಚಾರಕ್ಕೆ ಅನುಕೂಲವಾಗಲಿದೆ. ಅಲ್ಲದೇ ಸೌಂದರ್ಯ ಹೆಚ್ಚಲಿದೆ ಎಂದರು.

ಹಾಗೆಯೇ ಪ್ರಾಧಿಕಾರದಿಂದ ಚಾಲ್ತಿಯಲ್ಲಿರುವ ಯೋಜನೆಗಳು ಸಹ  ಪ್ರಗತಿಯಲ್ಲಿವೆ. ನಗರವನ್ನು ಅಭಿವೃದ್ಧಿ ಪಡಿಸಿ, ಬಡಾವಣೆಗಳು, ಕೈಗಾರಿಕಾ ಪ್ರದೇಶಗಳನ್ನು ನಿರ್ಮಾಣ ಮಾಡುವ ನಿಟ್ಟಿನಲ್ಲಿ ಭೂಪರಿವರ್ತನೆಗೆ ಬಂದ ಅರ್ಜಿಗಳನ್ನು ಶೀಘ್ರ ಇತ್ಯರ್ಥ ಗೊಳಿಸಬೇಕು ಎಂದು ಅಧ್ಯಕ್ಷರು ಸೂಚನೆ ನೀಡಿದರು.

ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ಸುದರ್ಶನಗೌಡ, ಶ್ರೀಕಾಂತ್‌, ಆಶಾ, ಆಯುಕ್ತ ಲಸುಮಾನಾಯಕ, ಸರ್ಕಲ್‌ ಇನ್ಸ್‌ಪೆಕ್ಟರ್‌ ಮಹದೇವಯ್ಯ, ಆರೋಗ್ಯಾಧಿಕಾರಿ ಡಾ.ವಿಶ್ವೇಶ್ವರಯ್ಯ, ಕುಡಿಯುವ ನೀರು ಹಾಗೂ ಒಳಚರಂಡಿ ಮಂಡಳಿಯ ಸಹಾಯಕ ಎಂಜಿನಿಯರ್‌, ಚುಡಾ ಸಹಾಯಕ ಎಂಜಿನಿಯರ್‌ ಪರಶಿವಮೂರ್ತಿ ಇತರರು ಸಭೆಯಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

yathanal-jarakiholi

Waqf Notice: ಬಸನಗೌಡ ಪಾಟೀಲ್‌ ಯತ್ನಾಳ್‌ ತಂಡದಿಂದ 1 ತಿಂಗಳು ಜನ ಜಾಗೃತಿ

BYV-yathnal

Waqf Issue: ಕಾಂಗ್ರೆಸ್‌ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ

IT employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

Delhi-Air

Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!

north

Kim Jong Un: ಉತ್ತರ ಕೊರಿಯಾದಿಂದ ಆತ್ಮಹತ್ಯಾ ಡ್ರೋನ್‌ ಪರೀಕ್ಷೆ

Horoscope new-1

Daily Horoscope: ಕ್ಷಣಿಕ ಸಮಸ್ಯೆಗಳನ್ನು ನಿರ್ಲಕ್ಷಿಸಿರಿ, ನಿರೀಕ್ಷಿತ ಆರ್ಥಿಕ ನೆರವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10

Kollegala: ಎತ್ತಿನಗಾಡಿಗೆ ಸಾಮ್ರಾಟ್ ಟರ್ಬೇ ವಾಹನ ಡಿಕ್ಕಿ; ಎತ್ತು ಸಾವು

9-kollegala

Kollegala: ಕಲುಷಿತ ನೀರು ಸೇವಿಸಿ ನಾಲ್ವರು ಆಸ್ಪತ್ರೆಗೆ ದಾಖಲು

Elephanat-1

Chamarajanagara: ವಕ್ರದಂತ ಹೊಂದಿದ್ದ ಕಾಡಾನೆ ಸ್ವಾಭಾವಿಕ ಸಾವು

Gundlupete: ನಿಯಂತ್ರಣ ತಪ್ಪಿ ಬೈಕ್‌ನಿಂದ ಬಿದ್ದ ಸವಾರ ಸಾವು

Gundlupete: ನಿಯಂತ್ರಣ ತಪ್ಪಿ ಬೈಕ್‌ನಿಂದ ಬಿದ್ದ ಸವಾರ ಸಾವು

Kollegala: ಬೆಂಗಳೂರಿನಿಂದ ತಮಿಳುನಾಡಿಗೆ ತಿಮಿಂಗಿಲದ ವಾಂತಿ ಸಾಗಾಟ… ಇಬ್ಬರ ಬಂಧನ

Kollegala: ಬೆಂಗಳೂರಿನಿಂದ ತಮಿಳುನಾಡಿಗೆ ತಿಮಿಂಗಿಲದ ವಾಂತಿ ಸಾಗಾಟ… ಇಬ್ಬರ ಬಂಧನ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

yathanal-jarakiholi

Waqf Notice: ಬಸನಗೌಡ ಪಾಟೀಲ್‌ ಯತ್ನಾಳ್‌ ತಂಡದಿಂದ 1 ತಿಂಗಳು ಜನ ಜಾಗೃತಿ

BYV-yathnal

Waqf Issue: ಕಾಂಗ್ರೆಸ್‌ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ

IT employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

Delhi-Air

Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.