ಅ.20ರಿಂದ ಕಿಚ್ಚುಗುತ್ತಿ ಮಾರಮ್ಮ ದೇಗುಲ ಪುನಾರಂಭ
Team Udayavani, Sep 24, 2020, 3:34 PM IST
ಹನೂರು: ತಾಲೂಕಿನಕಿಚ್ಚುಗುತ್ತಿ ಮಾರಮ್ಮನ ದೇವಾಲಯವನ್ನು ಅಕ್ಟೋಬರ್20ರಿಂದ ತೆರೆಯಲುಕ್ರಮ ವಹಿಸಲಾಗಿದ್ದು, ವಿಧಿ ವಿಧಾನಗಳೊಂದಿಗೆ ಪೂಜೆ , ಹೋಮ ಮತ್ತು ಧಾರ್ಮಿಕ ಕಾರ್ಯಕ್ರಮ ಗಳನ್ನು ನೆರವೇರಿಸಿ ಬಳಿಕ ಸಾರ್ವಜನಿಕರ ದರ್ಶನಕ್ಕೆ ಅವಕಾಶಕಲ್ಪಿಸಲಾಗುವುದು ಎಂದು ಮುಜರಾಯಿ ಸಚಿವಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ವಿಧಾನ ಸಭಾ ಕಲಾಪದಲ್ಲಿ ಹನೂರು ತಾಲೂಕಿನಕಿಚ್ಚುಗುತ್ತಿ ಮಾರಮ್ಮ ದೇವಾಲಯವು ಕಳೆದ 2 ವರ್ಷಗಳಿಂದ ಮುಚ್ಚಿದ್ದು ಇದು ಸರ್ಕಾರದ ಗಮನಕ್ಕೆ ಬಂದಿದೆಯೇ? ಬಂದಿದ್ದಲ್ಲಿ ಸರ್ಕಾರ ಕೈಗೊಂಡಿರುವ ಕ್ರಮಗಳೇನು ಎಂದು ಶಾಸಕ ನರೇಂದ್ರ ಪ್ರಶ್ನಿಸಿದ್ದರು. ಇದಕ್ಕೆ ಉತ್ತರಿಸಿರುವ ಮುಜರಾಯಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಈ ವಿಷಯ ಸರ್ಕಾರದ ಗಮನಕ್ಕೆ ಬಂದಿದ್ದು ದೇವಾಲಯದಲ್ಲಿ ಪೂಜಾ ಕೈಂಕರ್ಯಗಳನ್ನು ನೆರವೇರಿಸಲು ಮತ್ತು ಸಾರ್ವಜನಿಕರ ದರ್ಶನದ ವ್ಯವಸ್ಥೆ ಮಾಡಲು ಧಾರ್ಮಿಕ ದತ್ತಿ ಇಲಾಖೆಯ ಪ್ರಧಾನ ಆಗಮಿಕರು ಸ್ಥಳ ಪರಿಶೀಲನೆ ನಡೆಸಿ ವರದಿ ನೀಡಿದ್ದಾರೆ.
ವರದಿಯ ಅನ್ವಯ ಅಗತ್ಯ ಪೂಜಾ ಕೈಂಕರ್ಯಗಳನ್ನು ನೆರವೇರಿಸಿ ಅಕ್ಟೋಬರ್20ರ ಬಳಿಕ ಸಾರ್ವಜನಿಕರ ದರ್ಶನಕ್ಕೆ ಮುಕ್ತಗೊಳಿಸಲಾಗುವುದು ಎಂದು ತಿಳಿಸಿದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.