ಕಿತ್ತೂರು ಚೆನ್ನಮ್ಮ ಮಹಿಳೆಯರಿಗೆ ಆದರ್ಶ
Team Udayavani, Oct 25, 2020, 4:40 PM IST
ಚಾಮರಾಜನಗರ: ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಕಿತ್ತೂರುರಾಣಿ ಚೆನ್ನಮ್ಮ ತೋರಿದಂತಹ ಧೈರ್ಯ, ಸಾಹಸ ಹಾಗೂ ಆತ್ಮವಿಶ್ವಾಸ ನಾಡಿನ ಪ್ರತಿಯೊಬ್ಬ ಮಹಿಳೆಯರಿಗೂ ಆದರ್ಶ ವಾದದ್ದು ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಎಂ. ಅಶ್ವಿನಿ ಹೇಳಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ರಾಣಿ ಚೆನ್ನಮ್ಮ ಅವರು ರಾಜ ಮನೆತನದವರಾಗಿದ್ದರಿಂದ ಬಾಲ್ಯದಿಂದಲೇ ಕುದುರೆ ಸವಾರಿ, ಕತ್ತಿ ಬಳಸುವ ಪರಿಗಳ ಬಗ್ಗೆ ತರಬೇತಿ ಪಡೆದಿದ್ದರು. ತನ್ನ ರಾಜ್ಯದರಕ್ಷಣೆಗಾಗಿ ಬ್ರಿಟಿಷರ ವಿರುದ್ಧ ಹೋರಾಡಿದ ಮೊದಲ ಮಹಿಳೆಯಾಗಿದ್ದಾರೆ. ಹಾಗಾಗಿ ಅವರ ಜನ್ಮ ದಿನವನ್ನು ಕಿತ್ತೂರಿನ ವಿಜಯೋತ್ಸವ ದಿನ ಎಂದು ಆಚರಿಸಲಾಗುತ್ತಿದೆ ಎಂದರು.
ಜಿಪಂ ಉಪಾಧ್ಯಕ್ಷೆ ಶಶಿಕಲಾ ಮಾತನಾಡಿ, ಸ್ವಾತಂತ್ರ ಪೂರ್ವ ಮತ್ತು ನಂತರದ ದಿನಗಳಿಂದಲು ಮಹಿಳೆಯರು ಸಹ ತಮ್ಮದೇ ಆದ ರೀತಿಯ ವಿಶಿಷ್ಟ ಸ್ಥಾನ ಮಾನ ಪಡೆದುಕೊಂಡು ಬಂದಿದ್ದಾರೆ. ಅವರಲ್ಲಿ ಪ್ರಮುಖವಾಗಿ ಕಿತ್ತೂರಿನ ರಾಣಿಚೆನ್ನಮ್ಮ ಅವರು ಬ್ರಿಟಿಷ್ ಸರ್ಕಾರದ ವಿರುದ್ಧ ಹೋರಾಟ ನಡೆಸಿ ದೇಶ ಸ್ವಾತಂತ್ರ್ಯಕ್ಕಾಗಿ ಶ್ರಮಿಸಿದ್ದಾರೆ ಎಂದು ತಿಳಿಸಿದರು.
ಮುಖಂಡ ಮಹದೇವಸ್ವಾಮಿ ಮಾತನಾಡಿ, ಸ್ವಾತಂತ್ರ್ಯದ ಕಿಚ್ಚು ಹಚ್ಚಿದ ಧೀರ ದಿಟ್ಟ ಮಹಿಳೆ ರಾಣಿ ಚೆನ್ನಮ್ಮ ಅವರಾಗಿದ್ದಾರೆ. ಒಂದು ದೇಶದ ಜನ ತಾವಿರುವ ಪ್ರದೇಶದಲ್ಲಿ ಗೌರವದಿಂದ ಬದುಕ ಬೇಕಾದರೇ ಸ್ವಾತಂತ್ರ್ಯ ಬಹಳ ಮುಖ್ಯ ಎಂದು ತಿಳಿದಿದ್ದ ರಾಣಿ ಚೆನ್ನಮ್ಮ ಅವರು ಅಲ್ಲಿನ ಜನರಲ್ಲಿ ಸ್ವಾತಂತ್ರ್ಯದ ಕಿಚ್ಚನ್ನು ಹಚ್ಚಿ ದೇಶದ ಸ್ವಾತಂತ್ರ್ಯಕ್ಕಾಗಿ ಶ್ರಮಿಸಿದ್ದಾರೆ ಎಂದು ತಿಳಿಸಿದರು.
ಮುಖಂಡರಾದ ಅರಕಲವಾಡಿ ನಾಗೇಂದ್ರ ಮಾತನಾಡಿ, ಬ್ರಿಟಿಷ್ ಸರ್ಕಾರವು ಜಾರಿಗೊಳಿಸಿದಂತಹ ದತ್ತು ಮಕ್ಕಳಿಗೆ ಹಕ್ಕಿಲ್ಲ ಎಂಬ ಕಾಯ್ದೆಯನ್ನು ವಿರೋಧಿಸಿದ ರಾಣಿ ಚೆನ್ನಮ್ಮ ಅವರು ಬ್ರಿಟಿಷರಿಗೆ ಸಲ್ಲಿಸಬೇಕಾಗಿದ್ದ ಕಪ್ಪ ಕಾಣಿಕೆ ಕೊಡುವುದನ್ನು ನಿರಾಕರಿಸಿದ ವೀರ ಮಹಿಳೆಯಾಗಿದ್ದರು. ಇವರಲ್ಲಿದ್ದ ಛಲ, ಧೈರ್ಯ ಹಾಗೂ ಆತ್ಮವಿಶ್ವಾಸವನ್ನು ನಾಡಿನ ಪ್ರತಿ ಮಹಿಳೆಯರು ಸಹ ಅಳವಡಿಸಿಕೊಳ್ಳಬೇಕು ಎಂದರು.
ಜಿಪಂ ಉಪ ಕಾರ್ಯದರ್ಶಿ ಧರಣೇಶ್, ತಹಶೀಲ್ದಾರ್ ಚಿದಾನಂದ ಗುರುಸ್ವಾಮಿ, ನಗರಾಭಿವೃದ್ದಿ ಕೋಶದ ನಿರ್ದೇಶಕ ಕೆ. ಸುರೇಶ್, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಹೊನ್ನೇಗೌಡ, ಕನ್ನಡ\ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಗಿರೀಶ್, ಜೈ ಭುವನೇಶ್ವರಿ ಯುವ ವೇದಿಕೆಯ ಅಧ್ಯಕ್ಷ ಜಿ. ಬಂಗಾರು, ಕನ್ನಡ ಚಳುವಳಿಗಾರರಾದ ನಿಜಧ್ವನಿ ಗೋವಿಂದರಾಜು, ಮುಖಂಡರಾದಬಸವನಪುರ ರಾಜಶೇಖರ್, ಬ್ಯಾಡಮೂಡ್ಲು ಬಸವಣ್ಣ, ಬಿ.ಕೆ.ರವಿಕುಮಾರ್, ನಟೇಶ್, ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ಮಹಿಳಾ ಸಂಘ ಸಂಸ್ಥೆಯ ಪ್ರತಿನಿಧಿಗಳು, ಕನ್ನಡ ಪರ ಸಂಘಟನೆಯ ಪದಾಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್ ಡಿಕ್ಕಿ: ಮೊಪೆಡ್ ಸವಾರ ಸಾವು
Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ
Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ
Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು
Minister K.J. George: ಒಂದೇ ದಿನದಲ್ಲಿ 2500 ಲೈನ್‌ಮ್ಯಾನ್ ನೇಮಕ ಸಂದರ್ಶನ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Rishabh Pant: ಅಪಘಾತದ ವೇಳೆ ನೆರವಾದವರಿಗೆ ಗಿಫ್ಟ್ ನೀಡಿದ ರಿಷಭ್ ಪಂತ್
Prabhutva movie review: ಪ್ರಗತಿ ಪಥದಲ್ಲಿ ಕ್ರಾಂತಿಯ ಕಿಡಿ
BBK11: ಇವತ್ತು ಬಿಗ್‌ಬಾಸ್ ಮನೆಯಿಂದ ಆಚೆ ಬರುವುದು ಇವರೇ ನೋಡಿ
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.