ಕೊಳ್ಳೇಗಾಲ ಉಪ ವಿಭಾಗ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಕೋವಿಡ್ ಗೆ ಬಲಿ
Team Udayavani, Apr 28, 2021, 8:16 AM IST
ಚಾಮರಾಜನಗರ : ಕೋವಿಡ್-19 ಸೋಂಕಿನಿಂದ ಜಿಲ್ಲೆಯ ಕೊಳ್ಳೇಗಾಲ ಉಪ ವಿಭಾಗ ಆಸ್ಪತ್ರೆಯ ಮುಖ್ಯ ವೈದ್ಯಕೀಯ ಅಧಿಕಾರಿ (ಸಿಎಂಓ) ಡಾ. ಜಿ ಎನ್ ಗಣೇಶ್ ಕುಮಾರ್ ಮೃತ ಪಟ್ಟಿದ್ದಾರೆ.
ಅವರಿಗೆ 59 ವರ್ಷ ವಯಸ್ಸಾಗಿತ್ತು. ಕೊಳ್ಳೇಗಾಲ ಉಪವಿಭಾಗ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ. ಗಣೇಶ್ ಕುಮಾರ್ ಅವರಿಗೆ ಶುಕ್ರವಾರ ಸೋಂಕು ದೃಢಪಟ್ಟಿತ್ತು. ಮೈಸೂರಿನ ಅವರ ನಿವಾಸದಲ್ಲಿ ಹೋಂ ಐಸೋಲೇಷನ್ ಆಗಿದ್ದರು. ಕಳೆದ ಸೋಮವಾರ ಅವರ ಆರೋಗ್ಯ ಪರಿಸ್ಥಿತಿ ವಿಷಮಿಸಿದ್ದರಿಂದ ಮೈಸೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು.
ಮಂಗಳವಾರ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಮಂಗಳವಾರ ರಾತ್ರಿ ಮೃತಪಟ್ಟಿದ್ದಾರೆ.ಮೃತರಿಗೆ ಪತ್ನಿ ಹಾಗೂ ಪುತ್ರಿ ಇದ್ದಾರೆ. ಗಣೇಶ್ ಕುಮಾರ್ ಅವರು ಮೂಲತಃ ಚಾಮರಾಜನಗರ ಪಟ್ಟಣದ ಮೇಗಲ ನಾಯಕರ ಬೀದಿಯ ನಿವಾಸಿಯಾಗಿದ್ದರು. ಪ್ರಸ್ತುತ ಮೈಸೂರಿನಲ್ಲಿ ನೆಲೆಸಿದ್ದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.