ಕೊಳ್ಳೇಗಾಲ: ಮಕ್ಕಳೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ ತಾಯಿ; ಮಗಳು ಮೃತ್ಯು
ಕುಡಿದು ಬಂದು ಪತಿಯಿಂದ ಚಿತ್ರಹಿಂಸೆ... ತಾಯಿ, ಮಗನ ಸ್ಥಿತಿ ಗಂಭೀರ
Team Udayavani, Jul 12, 2023, 7:46 PM IST
ಕೊಳ್ಳೇಗಾಲ: ಕೌಟುಂಬಿಕ ಕಲಹಕ್ಕೆ ಗೃಹಿಣಿಯೋರ್ವಳು ತನ್ನ ಇಬ್ಬರು ಮಕ್ಕಳ ಜೊತೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು ಒರ್ವ ಮಗಳು ಸಾವನ್ನಪ್ಪಿದ್ದು ತಾಯಿ ಮತ್ತು ಮಗ ಚಿಂತಾಜನಕ ಸ್ಥಿತಿಯಲ್ಲಿದ್ದು ಆಸ್ಪತ್ರೆಯಲ್ಲಿ ದಾಖಲಾಗಿರುವ ಘಟನೆಯೊಂದು ತಾಲ್ಲೂಕಿನ ಮಧುವನಹಳ್ಳಿಯಲ್ಲಿ ಜರುಗಿದೆ.
ಗ್ರಾಮದ ಷಣ್ಮುಗ ಸ್ವಾಮಿ ಎಂಬವರ ಪತ್ನಿ ಶೀಲಾ (30) ಮಗ ಯಶವಂತ್ (8) ಚಿಂತಾಜನವಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಪುತ್ರಿ ಸಿಂಧು(9) ಮೃತಪಟ್ಟ ಬಾಲಕಿ.
ಘಟನೆ ವಿವರ
ಪ್ರತಿನಿತ್ಯ ಷಣ್ಮುಗ ಸ್ವಾಮಿ ಕುಡಿದು ಬಂದು ಇಲ್ಲಸಲ್ಲದ ಆರೋಪಗಳನ್ನು ಮಾಡಿ ಜಗಳವಾಡುತ್ತಿದ್ದ. ಆದರೆ ಮಂಗಳವಾರ ರಾತ್ರಿ ಷಣ್ಮುಗ ಸ್ವಾಮಿ ಕುಡಿದು ಬಂದು ಹೆಂಡತಿ ಶೀಲಾ ಹಾಗೂ ಮಕ್ಕಳಿಗೆ ಹೊಡೆದು ಚಿತ್ರಹಿಂಸೆ ನೀಡಿದ್ದಾನೆ. ಇದರಿಂದ ಬೇಸತ್ತ ಶೀಲಾ ಬುಧವಾರ ಬೆಳ್ಳಂಬೆಳಗ್ಗೆ ಮಕ್ಕಳಿಗೆ ವಿಷ ಕೊಡಿಸಿ ತಾನೂ ವಿಷ ಸೇವಿಸಿದ್ದಾಳೆ. ವಿಷ ಕುಡಿದು ಮಕ್ಕಳು ಹಾಗೂ ಶೀಲಾ ನರಳುತ್ತಿದ್ದರು ಇದನ್ನು ಗಮನಿಸಿದ ಸ್ಥಳೀಯರು ಮನೆಯೊಳಗೆ ಹೋಗಿ ತತ್ ಕ್ಷಣ ಅವರನ್ನು ನಗರದ ಸರ್ಕಾರಿ ಉಪ ವಿಭಾಗ ಆಸ್ಪತ್ರೆಗೆ ಚಿಕಿತ್ಸೆ ಕೊಡಿಸುವಲ್ಲಿ ಮುಂದಾದರು. ಆದರೆ ಸಿಂಧು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾಳೆ. ತಾಯಿ ಹಾಗೂ ಮಗ ಯಶ್ವಂತ್ ಸ್ಥಿತಿ ಗಂಭೀರವಾಗಿದೆ. ಇಬ್ಬರನ್ನು ಮೈಸೂರಿನ ಕೆಆರ್ ಆಸ್ಪತ್ರೆಗೆ ರವಾನಿಸಲಾಯಿತು. ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.