ಅಕ್ರಮ ಒತ್ತುವರಿಗೆ ಬಲಿಯಾದ ಕೊಂಗಳಕೆರೆ

Team Udayavani, May 31, 2019, 3:00 AM IST

akrama

ಕೊಳ್ಳೇಗಾಲ: ಅಂರ್ತಜಲ ಹೆಚ್ಚಿಸುವ ಪಟ್ಟಣದ ಕೊಂಗಳಕೆರೆ ಸ್ಥಳ ಒಂದಲ್ಲಾ ಒಂದು ರೀತಿಯಲ್ಲಿ ಅಕ್ರಮ ಒತ್ತುವರಿಗೆ ಸಿಲುಕಿ ಸ್ಥಳ ಅನ್ಯರ ಪಾಲು ಆಗುತ್ತಿರುವುದು ಅಧಿಕಾರಿಗಳ ನಿರ್ಲಕ್ಷ್ಯéತನವೇ ಕಾರಣವಾಗಿದೆ.

ಇತ್ತೀಚೆಗಷ್ಟೇ “ಉದಯವಾಣಿ’ ಪಟ್ಟಣದ ಕೊಂಗಳಕೆರೆ ಅಕ್ರಮ ಒತ್ತುವರಿಗೆ ಸಿಲುಕಿ ಕೆರೆ ಸಂಪೂರ್ಣ ನಾಶವಾಗುತ್ತಿದೆ ಎಂದು ವಿಶೇಷ ವರದಿ ಮಾಡಲಾಗಿತ್ತು. ಆದರೆ ವರದಿ ಆಧರಿಸಿಕೊಂಡು ಎಚ್ಚೆತ್ತುಕೊಳ್ಳಬೇಕಾಗಿದ್ದ ಕಬಿನಿ ನಾಲಾ ವಿಭಾಗದ ಅಧಿಕಾರಿಗಳು ಕೆರೆಯತ್ತ ಗಮನ ಹರಿಸದೆ ಇರುವುದು ಈಗ ಆಟೋಚಾಲಕರು ಒತ್ತುವರಿ ಮಾಡಿಕೊಂಡು ಆಟೋ ನಿಲ್ದಾಣಕ್ಕೆ ಮುಂದಾಗಿದ್ದಾರೆ.

ಆಟೋ ನಿಲ್ದಾಣಕ್ಕೆ ಒತ್ತುವರಿ: ಪಟ್ಟಣದ ಅಚಾಳ್‌ ಯಾತ್ರಿ ನಿವಾಸದ ಪಕ್ಕದಲ್ಲಿರುವ 150 ಚದುರವಿರುವ ಕೆರೆಗೆ ಇಟ್ಟಿಗೆ ಮತ್ತು ಹಳೆಯ ಮಣ್ಣನ್ನು ಸುರಿದು ಕೆರೆಯನ್ನು ಮುಚ್ಚುವ ಪ್ರಯತ್ನ ನಿರಂತರವಾಗಿ ನಡೆಯುತ್ತಿದೆ. ಆಟೋ ಚಾಲಕರು ನಿಲ್ದಾಣವೊಂದನ್ನು ನಿರ್ಮಿಸಿಕೊಳ್ಳುವ ಸಲುವಾಗಿ ಹಳೆಯ ಮಣ್ಣುಗಳಿಂದ ಕೆರೆ ಮುಚ್ಚಿ ನಿಲ್ದಾಣ ಮಾಡಿಕೊಂಡು ಈಗಾಗಲೇ ಕನ್ನಡ ಬಾವುಟವೊಂದನ್ನು ಆರಿಸಿ ನಿಲ್ದಾಣವನ್ನು ಸೃಷ್ಟಿಸಿಕೊಂಡಿದ್ದಾರೆ.

ಅಧಿಕಾರಿಗಳು ಗಮನಹರಿಸಿ: ಕೆರೆಯು ಅಕ್ರಮ ಒತ್ತುವರಿಯಾಗುತ್ತಿರುವುದನ್ನು ಕಾವೇರಿ ಮತ್ತು ಕಬಿನಿ ನಾಲಾ ವಿಭಾಗದ ನಿಗಮ ಮತ್ತು ನಗರಸಭೆ ಗಮನ ಹರಿಸಬೇಕು. ಕೆರೆಯಲ್ಲಿ ಅಂರ್ತಜಲ ಹೆಚ್ಚಿಸುವ ಕೆಲಸ ಮಾಡಿದಾಗ ಅಂತರ್ಜಲ ಹೆಚ್ಚುತ್ತದೆ. ಅಕ್ರಮ ಒತ್ತುವರಿಯಿಂದ ಅಂತರ್ಜಲ ಕುಸಿತಗೊಂಡು ಕುಡಿಯುವ ನೀರಿಗೂ ಹಾಹಾಕಾರ ಉಂಟಾಗುವ ವಿಷಮ ಪರಿಸ್ಥಿತಿ ಎದುರುರಾಗಿದೆ.

ಕೆರೆಗಳ ನಾಶಕ್ಕೆ ಕಾರಣ: ಕೆರೆಯನ್ನು ಅಧಿಕಾರಿಗಳು ಕಂಡೂ ಕಾಣದಂತೆ ನಿರ್ಲಕ್ಷ್ಯ ವಹಿಸುತ್ತಿರುವುದು ಕೆರೆಗಳ ನಾಶಕ್ಕೆ ಕಾರಣವಾಗುತ್ತಿದೆ. ನ್ಯಾಯಾಲಯ ಯಾವುದೇ ಕೆರೆಕಟ್ಟೆಗಳನ್ನು ಒತ್ತುವರಿಯಿಂದ ಹಾಗುತ್ತಿದ್ದ ವೇಳೆ ಅದನ್ನು ಕೂಡಲೇ ತೆರವು ಮಾಡಿ ಕೆರೆ ಅಭಿವೃದ್ಧಿಪಡಿಸಿ ಅಂರ್ತಜಲ ಹೆಚ್ಚಿಸಬೇಕೆಂದು ತೀರ್ಪು ನೀಡಿದ್ದರು ಸಹ ಕೆರೆಗಳ ಒತ್ತುವರಿ ನಿರಂತರವಾಗಿ ಸಾಗುತ್ತಿದ್ದು, ಕೆರೆಗಳ ನಾಶಕ್ಕೆ ಕಾರಣವಾಗುತ್ತಿದೆ.

ಕೆರೆ ಅಭಿವೃದ್ಧಿ ಪಡಿಸುವ ಇಂಗಿತ: ಸರ್ಕಾರ ಕೋಟ್ಯಂತರ ರೂ. ಹಣ ಖುರ್ಚ ಮಾಡಿ ಅಂರ್ತಜಲ ಅಭಿವೃದ್ಧಿಪಡಿಸುವ ಪ್ರಯತ್ನ ಮಾಡುತ್ತಿದ್ದಾರೆ. ಇಲ್ಲಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಪಟ್ಟಣದ ಪ್ರಮುಖದ ಐದು ಕರೆಗಳಲ್ಲಿ 15 ರಿಂದ 25 ವರ್ಷದಿಂದಲೂ ಊಳೆತ್ತದೆ ಇರುವುದರಿಂದ ಕೆರೆಗಳಲ್ಲಿ ಗಿಡಗಂಟಿಗಳು ಬೆಳೆದು ನಿಂತಿದೆ. ಪಟ್ಟಣದ ಸೌಂದರ್ಯವನ್ನು ಹೆಚ್ಚಿಸಬೇಕಾದ ಕೆರೆಗಳು ನಾಶವಾಗುತ್ತಿದೆ.

ಈ ಹಿಂದೆ ಶಾಸಕರಾಗಿದ್ದ ಎಸ್‌.ಜಯಣ್ಣ ಕೆರೆ ಅಭಿವೃದ್ಧಿಪಡಿಸಿ ವಾಯುವಿಹಾರ ಕೇಂದ್ರವನ್ನಾಗಿ ಮಾಡುವ ಮೂಲಕ ಸುಂದರತಾಣವನ್ನಾಗಿ ಮಾಡುತ್ತೇನೆ ಎಂದು ಹೇಳಿದ್ದರು. ನಂತರ ಬಂದ ಶಾಸಕ ಎನ್‌.ಮಹೇಶ್‌ ಕೆರೆಯನ್ನು ಖಾಸಗಿ ವ್ಯಕ್ತಿಗಳಿಗೆ ದತ್ತು ನೀಡಿ ಅಭಿವೃದ್ಧಿ ಪಡಿಸುವ ಇಂಗಿತವನ್ನು ವ್ಯಕ್ತಪಡಿಸಿದ್ದರು.

ಅಭಿವೃದ್ಧಿಪಡಿಸುವ ಬದಲು ಇರುವ ಕೆರೆಗಳನ್ನು ಉಳಿಸಿದರೆ ಸಾಕು ಎಂದು ಪರಿಸರ ಪ್ರೇಮಿಗಳ ಆಕ್ರೋಶವಾಗಿದ್ದು, ಕೂಡಲೇ ಅಧಿಕಾರಿಗಳು ಮತ್ತು ಚುನಾಯಿತ ಪ್ರತನಿಧಿಗಳು ಎಚ್ಚೆತ್ತು ಕೆರೆಗೆ ಕಾಯಕಲ್ಪ ನೀಡಬೇಕಾಗಿದೆ.

ಪಟ್ಟಣದ ಹೃದಯಭಾಗದಲ್ಲಿರುವ ಬೃಹತ್ತಾದ ಕೊಂಗಳಕೆರೆ ಸ್ಥಳವನ್ನು ಆಟೋ ನಿಲ್ದಾಣಕ್ಕಾಗಿ ಅಕ್ರಮ ಒತ್ತುವರಿ ಮಾಡುತ್ತಿರುವ ಬಗ್ಗೆ ಪರಿಶೀಲಿಸಿ ಜನರಿಗೆ ತೊಂದರೆ ಕಂಡು ಬಂದ ಪಕ್ಷದಲ್ಲಿ ಕೂಡಲೇ ನಿಲ್ದಾಣವನ್ನು ತೆರವು ಮಾಡಲಾಗುವುದು.
-ನಾಗಶೆಟ್ಟಿ, ನಗರಸಭೆ ಪೌರಾಯುಕ್ತ

ಈ ಬಗ್ಗೆ ಇದುವರೆಗೂ ನಮ್ಮ ಗಮನಕ್ಕೆ ಬಂದಿರಲಿಲ್ಲ, ಕೂಡಲೇ ಕೆರೆ ಅಕ್ರಮ ಒತ್ತುವರಿಯನ್ನು ಅಧಿಕಾರಿಗಳ ತಂಡದೊಂದಿಗೆ ಪರಿಶೀಲನೆ ನಡೆಸಿ ತೆರವು ಮಾಡಲಾಗುವುದು.
-ರಘು, ಕಾರ್ಯಪಾಲಕ ಅಭಿಯಂತರ

* ಡಿ.ನಟರಾಜು

ಟಾಪ್ ನ್ಯೂಸ್

Ranji Trophy: ಇನ್ನಿಂಗ್ಸ್‌ ನ ಎಲ್ಲಾ 10 ವಿಕೆಟ್‌ ಕಿತ್ತು ಅನ್ಶುಲ್‌ ಕಾಂಬೋಜ್‌ ದಾಖಲೆ

Ranji Trophy: ಇನ್ನಿಂಗ್ಸ್‌ ನ ಎಲ್ಲಾ 10 ವಿಕೆಟ್‌ ಕಿತ್ತು ಅನ್ಶುಲ್‌ ಕಾಂಬೋಜ್‌ ದಾಖಲೆ

ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು

ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್;‌ ಗಾಯಗೊಂಡ ರಾಹುಲ್

India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್;‌ ಗಾಯಗೊಂಡ ರಾಹುಲ್

Shimoga; Deport Zameer Ahmed: ​​MLA Channabasappa

Shimoga; ಜಮೀರ್‌ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-kollegala

Kollegala: ಕಲುಷಿತ ನೀರು ಸೇವಿಸಿ ನಾಲ್ವರು ಆಸ್ಪತ್ರೆಗೆ ದಾಖಲು

Elephanat-1

Chamarajanagara: ವಕ್ರದಂತ ಹೊಂದಿದ್ದ ಕಾಡಾನೆ ಸ್ವಾಭಾವಿಕ ಸಾವು

Gundlupete: ನಿಯಂತ್ರಣ ತಪ್ಪಿ ಬೈಕ್‌ನಿಂದ ಬಿದ್ದ ಸವಾರ ಸಾವು

Gundlupete: ನಿಯಂತ್ರಣ ತಪ್ಪಿ ಬೈಕ್‌ನಿಂದ ಬಿದ್ದ ಸವಾರ ಸಾವು

Kollegala: ಬೆಂಗಳೂರಿನಿಂದ ತಮಿಳುನಾಡಿಗೆ ತಿಮಿಂಗಿಲದ ವಾಂತಿ ಸಾಗಾಟ… ಇಬ್ಬರ ಬಂಧನ

Kollegala: ಬೆಂಗಳೂರಿನಿಂದ ತಮಿಳುನಾಡಿಗೆ ತಿಮಿಂಗಿಲದ ವಾಂತಿ ಸಾಗಾಟ… ಇಬ್ಬರ ಬಂಧನ

5

Gundlupete: ಎರಡು ಬೈಕ್ ಗಳ ನಡುವೆ ಅಪಘಾತ; ಇಬ್ಬರು ಸಾವು

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Ranji Trophy: ಇನ್ನಿಂಗ್ಸ್‌ ನ ಎಲ್ಲಾ 10 ವಿಕೆಟ್‌ ಕಿತ್ತು ಅನ್ಶುಲ್‌ ಕಾಂಬೋಜ್‌ ದಾಖಲೆ

Ranji Trophy: ಇನ್ನಿಂಗ್ಸ್‌ ನ ಎಲ್ಲಾ 10 ವಿಕೆಟ್‌ ಕಿತ್ತು ಅನ್ಶುಲ್‌ ಕಾಂಬೋಜ್‌ ದಾಖಲೆ

Udupi: ಮೀನುಗಾರರಿಗೆ ಎನ್‌ಎಫ್ಡಿಪಿ ಪೋರ್ಟಲ್‌ನಲ್ಲಿ ಶುಲ್ಕರಹಿತ ನೋಂದಣಿ

Udupi: ಮೀನುಗಾರರಿಗೆ ಎನ್‌ಎಫ್ಡಿಪಿ ಪೋರ್ಟಲ್‌ನಲ್ಲಿ ಶುಲ್ಕರಹಿತ ನೋಂದಣಿ

ಏಕನಿವೇಶನ ನಕ್ಷೆ ಅನುಮೋದನೆ ಅಧಿಕಾರ ಗ್ರಾಮ ಪಂಚಾಯತ್‌ಗೆ ನೀಡಲು ಸಿಎಂಗೆ ಸಂಸದ ಕೋಟ ಪತ್ರ

ಏಕನಿವೇಶನ ನಕ್ಷೆ ಅನುಮೋದನೆ ಅಧಿಕಾರ ಗ್ರಾಮ ಪಂಚಾಯತ್‌ಗೆ ನೀಡಲು ಸಿಎಂಗೆ ಸಂಸದ ಕೋಟ ಪತ್ರ

ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು

ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು

7-r-ashok

Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್‌. ಅಶೋಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.