ಅವಳಿ ಜಿಲ್ಲೆಯಲ್ಲಿ ಮೊಳಗಿದ ಕೋಟಿ ಕಂಠ ಗಾಯನ
Team Udayavani, Oct 29, 2022, 4:53 PM IST
ಚಾಮರಾಜನಗರ: ಕರ್ನಾಟಕ ರಾಜ್ಯೋತ್ಸವದ ಪೂರ್ವ ವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಯೋಜಿಸಿದ್ದ ಕೋಟಿ ಕಂಠ ಗೀತ ಗಾಯನ ಕಾರ್ಯಕ್ರಮ ಜಿಲ್ಲಾದ್ಯಂತ ಯಶಸ್ವಿಯಾಗಿ ನಡೆಯಿತು.
ಜಿಲ್ಲಾಡಳಿತ, ಜಿಪಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ವಿವಿಧ ಸಂಘಟನೆಗಳ ಸಹಯೋಗ ದೊಂದಿಗೆ ನನ್ನ ನಾಡು-ನನ್ನ ಹಾಡು ಎಂಬ ಶೀರ್ಷಿಕೆಯಡಿ ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ವರನಟ ಡಾ. ರಾಜ್‌ಕುಮಾರ್ ಜಿಲ್ಲಾ ರಂಗಮಂದಿರದ ಮುಂಭಾಗದಲ್ಲಿ ಆಯೋಜಿತ ವಾಗಿದ್ದ ಕಾರ್ಯಕ್ರಮದಲ್ಲಿ ಸಾವಿರಾರು ವಿದ್ಯಾರ್ಥಿ ಗಳು, ಜನಪ್ರತಿನಿಧಿಗಳು, ಕನ್ನಡಪರ ಸಂಘಟನೆಗಳ ಮುಖಂಡರು, ಪ್ರತಿನಿಧಿಗಳು, ಅಧಿಕಾರಿಗಳು, ಕಲಾವಿದರು, ಸಾರ್ವಜನಿಕರು ಪಾಲ್ಗೊಂಡು ಕನ್ನಡ ಗೀತೆಗಳನ್ನು ಮೊಳಗಿಸಿದರು.
ಈ ಮೂಲಕ ಕನ್ನಡ ನಾಡು, ನುಡಿ ಬಗೆಗಿನ ಪರಂಪರೆ ಸಾರಿದರು. ನಾಡಿನ ಶ್ರೇಷ್ಠ ಕವಿಗಳ ನಾಡು ನುಡಿಯ ಶ್ರೇಷ್ಠತೆಯನ್ನು ಸಾರುವ ನನ್ನ ನಾಡು-ನನ್ನ ಹಾಡು ಎಂಬ ಶೀರ್ಷಿಕೆಯಡಿ ಮೊದಲಿಗೆ ರಾಷ್ಟ್ರಕವಿ ಕುವೆಂಪುರವರ ನಾಡಗೀತೆ ಜಯಭಾರತ ಜನನಿಯ ತನುಜಾತೆ ಗೀತೆಯನ್ನು ಹಾಡಲಾಯಿತು.
ಬಳಿಕ ಹುಯಿಲಗೋಳ ನಾರಾಯಣರಾಯರ ಉದಯ ವಾಗಲಿ ನಮ್ಮ ಚೆಲುವ ಕನ್ನಡ ನಾಡು, ಕುವೆಂಪುರವರ ಬಾರಿಸು ಕನ್ನಡ ಡಿಂಡಿಮವ, ಡಾ. ಡಿ.ಎಸ್. ಕರ್ಕಿರವರ ಹಚ್ಚೇವು ಕನ್ನಡದ ದೀಪ, ನಾಡೋಜ ಡಾ. ಚನ್ನವೀರ ಕಣವಿಯವರ ವಿಶ್ವವಿ ನೂತನ ವಿದ್ಯಾಚೇತನ ಹಾಗೂ ಡಾ. ಹಂಸಲೇಖ ಅವರ ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು ಗೀತೆಗಳ ಸಮೂಹ ಗಾಯನ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ
Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು
Minister K.J. George: ಒಂದೇ ದಿನದಲ್ಲಿ 2500 ಲೈನ್‌ಮ್ಯಾನ್ ನೇಮಕ ಸಂದರ್ಶನ
Bandipur: ಸಫಾರಿಯಲ್ಲಿ ಪ್ರವಾಸಿಗರ ಮುಂದೆಯೇ ಜಿಂಕೆ ಬೇಟೆಯಾಡಿದ ಚಿರತೆ
Birla Opus Paints: ಚಾಮರಾಜನಗರದಲ್ಲಿ ಬಿರ್ಲಾ ಒಪಸ್ ಪೇಂಟ್ಸ್ 4ನೇ ಕಾರ್ಖಾನೆ ಆರಂಭ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.